ಕನ್ನಡಿಗರನ್ನುಕೆಣಕಿದ ಅಮೇಜಾನ್ ಜಾಗತಿಕವಾಗಿ ಕ್ಷಮೆ ಕೋರಬೇಕು‌ –ಹೆಚ್‌ಡಿಕೆ

ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ @amazonಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಾಳಿಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಉಳಿಯಲಾರದು. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು @amazon ಜಾಗತಿಕವಾಗಿ ಕ್ಷಮೆ ಕೋರಬೇಕು. ತಪ್ಪಿತಸ್ಥರನ್ನು ಹಿಡಿದುಕೊಡಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. @Google ನಂತರ ಈಗ @amazonನ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ ವಿಚಾರದಲ್ಲಿ ಯಾಕಿಂಥ ನಿರ್ಲಕ್ಷ್ಯವಹಿಸುತ್ತಿವೆ? ಈ ಬಗ್ಗೆ @amazon ಪ್ರತಿಕ್ರಿಯೆ ನೀಡಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬಾವುಟದ ಜೊತೆಗೇ, ಕರ್ನಾಟಕದ ರಾಜಲಾಂಛನವನ್ನೂ ಅಮೆಜಾನ್‌ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ @amazon ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರ ತಪ್ಪಿಸಲು ಇದು ಅಗತ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

‘ಕನ್ನಡ ಕೆಟ್ಟ ಭಾಷೆ‘ ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ಘಟನೆಯೂ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ ಎಂದಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...