ಕನ್ನಡ ಕೊಳಕು ಭಾಷೆಯೆಂದು ಅವಾಂತರ ಸೃಷ್ಟಿಸಿದ ಗೂಗಲ್: ಇಂಟರ್‌ನೆಟ್‌ ದೈತ್ಯನಿಗೆ ಹೆಚ್‌ ಡಿ ಕುಮಾರಸ್ವಾಮಿ ತರಾಟೆ

ಕನ್ನಡವನ್ನು ಕೊಳಕು ಭಾಷೆಯೆಂದು ಕನ್ನಡಿಗರನ್ನು ಕೆರಳಿಸಿದ್ದ ಗೂಗಲ್‌ ಅವಾಂತರವನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಇಂಟರ್‌ನೆಟ್‌ ದೈತ್ಯ ಗೂಗಲ್‌ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘Ugliest language in India’ ಎಂಬ ಹುಡುಕಾಟಕ್ಕೆ #Kannada ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು Googleಗೆ ಅಸಾಧ್ಯವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. ಎಲ್ಲ ಭಾಷೆಗಳೂ ಸುಂದರವೇ. ಭಾಷೆ ಭಾವನೆಗಳಿಗೆ ಸಂಬಂಧಿಸಿದ ವಿಷಯ. ಭಾಷೆ ವಿರುದ್ಧ ನಿಂದನೆ ಬಹಳ ನೋವಿನದ್ದು. ಹೀಗಾಗಿ ಈ ವಿಚಾರದಲ್ಲಿ ಗೂಗಲ್‌ ಸೂಕ್ಷ್ಮವಾಗಿರಬೇಕು. ಕನ್ನಡವನ್ನು ಅವಹೇಳನ ಮಾಡಿದ್ದ ವೆಬ್‌ಪುಟ ಡಿಲಿಟ್‌ ಆಗಿರಬಹುದು.ಆದರೆ, ಅದರಿಂದ ಕನ್ನಡಿಗರಿಗಾದ ನೋವಿಗೇನು ಪರಿಹಾರ? ಎಂದು ಅವರು ಕೇಳಿದ್ದಾರೆ.

ಗೂಗಲ್‌ ಮಾಡಿದ ಈ ಪ್ರಮಾದ ಒಪ್ಪುವಂಥದ್ದಲ್ಲ. ಭಾಷೆ ವಿಚಾರದಲ್ಲಿ ಯಾರೇ ಅದರೂ ಇನ್ನು ಮುಂದೆ ಎಚ್ಚರವಾಗಿರಬೇಕು. ಅದರಲ್ಲೂ ಕನ್ನಡದ ವಿಚಾರದಲ್ಲಂತೂ ಎಲ್ಲರೂ ಎರಡು ಪಟ್ಟು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಇಲ್ಲವಾದರೆ, ಒಂದೇ ಗಂಟೆಯಲ್ಲಿ ಸೃಷ್ಟಿಯಾದ ಕನ್ನಡಿಗರ ಸ್ವಾಭಿಮಾನದ ಅಲೆ, ಮರುಗಳಿಗೆಯಲ್ಲಿ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಅವರು ಎಚ್ಚರಿಸಿದ್ದಾರೆ.

·

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...