
ಡಿಜಿಟಲ್ ಮೀಡಿಯಾಗಳಿಗೆ ಜಾಹಿರಾತು ಅನುಮತಿ ಕೊಟ್ಟ ಹಿನ್ನೆಲೆಯಲ್ಲಿ KSDMF ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳವಾರ KSDMF ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಸನ್ಮಾನ ಕಾರ್ಯಕ್ರಮ ಇದೆ.

ಡಿಜಿಟಲ್ ಮೀಡಿಯಾಗಳಿಗೆ ಜಾಹಿರಾತು ಅನುಮತಿ ನೀಡಿರುವುದು KSDMFಗೆ ಸಂತಸದ ಕ್ಷಣವಾಗಿದ್ದು, ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಸರಣಿ ಸಭೆಗಳ ಬಳಿಕ ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ಒಪ್ಪಿ ಆದೇಶ ಜಾರಿಗೊಳಿಸಿರುವುದು ಅಭಿನಂದನಾರ್ಹ ಸಂಗತಿ. ಈ ಹಿನ್ನೆಲೆಯಲ್ಲಿ ಈ ನೀತಿ ಜಾರಿಯಾಗಲು ಕಾರಣರಾದ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ ಪ್ರಭಾಕರ್ & ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನ ಅಭಿನಂಧಿಸಲು ತೀರ್ಮಾನಿಸಲಾಗಿದೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ KSDMF ವತಿಯಿಂದ ಕಾರ್ಯಕ್ರಮ ನಡೆಯಲಿದ್ದು, ಗಣ್ಯರನ್ನು ಹೃತ್ಪೂರ್ವಕವಾಗಿ ಅಭಿನಂಧಿಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ನಮ್ಮ ಡಿಜಿಟಲ್ ಫೋರಂನ ಎಲ್ಲಾ ಸದಸ್ಯ ಸಂಸ್ಥೆಯ ಸಿಬ್ಬಂದಿ & ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ತಪ್ಪದೇ ಹಾಜರಾಗಿ ಅಭಿನಂಧನಾ ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ ಮಾಡಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ಡಿಜಿಟಲ್ ಮಾಧ್ಯಮ ಮಿತ್ರರೂ ಸಹ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ KSDMF ಅಧ್ಯಕ್ಷರು ಬಿ. ಸಮೀವುಲ್ಲಾ.
