• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಪಾವಗಡ ಸೋಲಾರ್‌ ಪಾರ್ಕ್‌ 3 ಸಾವಿರ ಮೆ.ವ್ಯಾ ವಿಸ್ತರಣೆಗೆ ಸರ್ಕಾರ ಸಮ್ಮತಿ

ಪ್ರತಿಧ್ವನಿ by ಪ್ರತಿಧ್ವನಿ
September 1, 2023
in ಇದೀಗ, ಕರ್ನಾಟಕ
0
ಪಾವಗಡ ಸೋಲಾರ್‌ ಪಾರ್ಕ್‌

ಪಾವಗಡ ಸೋಲಾರ್‌ ಪಾರ್ಕ್‌

Share on WhatsAppShare on FacebookShare on Telegram

ತುಮಕೂರು ಜಿಲ್ಲೆಯ ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಯಾಗಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ರಾಜ್ಯ ಸರ್ಕಾರದ ಇಂಧನ ಇಲಾಖೆ ಒಪ್ಪಿಗೆ ಸೂಚಿಸಿದೆ ಎಂದು ಗುರುವಾರ (ಆಗಸ್ಟ್‌ 31) ವರದಿಯಾಗಿದೆ.

ADVERTISEMENT

ಪಾವಗಡ ತಾಲ್ಲೂಕು ರಾಷ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 2,050 ಮೆಗಾ ವ್ಯಾಟ್ ಹಾಗೂ ಇಂಟೂರಾಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 500 ಮೆಗಾವಾಟ್ ಸೇರಿದಂತೆ ಒಟ್ಟು 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ (ಕೆಎಸ್‌ಪಿಡಿಸಿಎಲ್) ಮುಂದಾಗಿದೆ.

ಈಗಾಗಲೇ ಸ್ಥಾಪಿಸಿರುವ ಸೋಲಾ ಪಾರ್ಕ್ನಿಂದ 2 ಸಾವಿರ ಮೆ.ವ್ಯಾ ವಿದ್ಯುತ್ ವಿದ್ಯುತ್ ಉತ್ಪಾದನೆ ಮಾಡುತ್ತಿದ್ದು, ಹೊಸ ಯೋಜನೆ ಕಾರ್ಯಗತಗೊಂಡರೆ ಸುಮಾರು 5 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ.

ಸೋಲಾರ್‌ ಪಾರ್ಕ್‌ ವಿಸ್ತರಣೆಗಾಗಿ ಸೌರ ನಿಗಮವು ರಾಷ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 10 ಸಾವಿರ ಎಕರೆ, ಇಂಟುರಾಯನಹಳ್ಳಿ ಪಂಚಾಯತಿ ವ್ಯಾಪ್ತಿಯಲ್ಲಿ 2 ಸಾವಿರ ಎಕರೆ ಜಮೀನು ಗುತ್ತಿಗೆ ಪಡೆಯಲು ಮುಂದಾಗಿದೆ.

ಇಂಟೂರಾಯನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಪ್ರದೇಶದಲ್ಲಿ ರೈತರ ಜಮೀನನ್ನು ಗುತ್ತಿಗೆ ಆಧಾರದಲ್ಲಿ ಪಡೆದುಕೊಳ್ಳಲು ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ಪ್ರಕಟಣೆ ಹೊರಡಿಸಿದೆ. ಭೂಮಿ ಬಿಟ್ಟುಕೊಡುವ ಬಗ್ಗೆ ರೈತರು ಒಪ್ಪಿಗೆ ಪತ್ರಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹುಸೇನ್ಪುರ, ರೆಡ್ಡಿವಾರಹಳ್ಳಿ, ನಾಗೇನಹಳ್ಳಿ, ಅಪ್ಪಾಜಿಹಳ್ಳಿ, ಬುಗುಡೂರು, ಪಕ್ಕದ ಅನ್ನದಾನಪುರ ಹಾಗೂ ಇಂಟೂರಾಯನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಆರಂಭವಾಗಲಿದೆ.

ಈ ಯೋಜನೆಗೆ ಒಪ್ಪಿಗೆ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪಿ.ಸಾಂಬಸದಾಶಿವರೆಡ್ಡಿ ಅಭಿನಂದನೆ ಸಲ್ಲಿಸಿದ್ದಾರೆ.

ಸೋಲಾರ್ ಪಾರ್ಕ್ ವಿಸ್ತರಣೆ ಮಾಡುವಂತೆ ಕೋರಿ ಸರ್ಕಾರ, ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮಕ್ಕೆ ಶಕ್ತಿ ಸ್ಥಳ ರೈತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕ್ರೆಡಾಲ್ ವ್ಯವಸ್ಥಾಪಕ ನಿರ್ದೇಶಕ ರುದ್ರಪ್ಪಯ್ಯ, ಕೆಎಸ್ಪಿಡಿಸಿಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರ್ನಾಥ್ ಅವರನ್ನು ಭೇಟಿಮಾಡಿ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಪಾವಗಡ ಸೋಲಾರ್‌ ಪಾರ್ಕ್‌ ವಿಸ್ತರಣೆಗೆ ರಾಜ್ಯ ಸರ್ಕಾರ ಚಿಂತಿಸಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೂನ್‌ನಲ್ಲಿ ಹೇಳಿದ್ದರು.

Tags: DK ShivakumarPavagada Solar Parktumkurಡಿ.ಕೆ. ಶಿವಕುಮಾರ್ತುಮಕೂರುಪಾವಗಡ ಸೋಲಾರ್‌ ಪಾರ್ಕ್‌
Previous Post

ಡಿಸೆಂಬರ್‌ನಲ್ಲಿ ಮಂಡ್ಯಕ್ಕೆ ಭೇಟಿ ನೀಡಲಿರುವ ಬರಾಕ್ ಒಬಾಮ, ದಲೈಲಾಮ

Next Post

ಜೋಡಿ ಕೊಲೆ ಪ್ರಕರಣ | ಮಾಜಿ ಸಂಸದ ಪ್ರಭುನಾಥ್‌ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ʼಸುಪ್ರೀಂʼ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಪ್ರಭುನಾಥ್‌ ಸಿಂಗ್‌

ಜೋಡಿ ಕೊಲೆ ಪ್ರಕರಣ | ಮಾಜಿ ಸಂಸದ ಪ್ರಭುನಾಥ್‌ ಸಿಂಗ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ʼಸುಪ್ರೀಂʼ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada