• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವಜನತೆಗೆ ಉದ್ಯೋಗಾವಕಾಶ ನೀಡಲು ಸರ್ಕಾರ ಬದ್ಧ: ಸಚಿವ ಸಂತೋಷ್‌ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
February 24, 2026
in Top Story, ಕರ್ನಾಟಕ, ರಾಜಕೀಯ
0
ಯುವಜನತೆಗೆ ಉದ್ಯೋಗಾವಕಾಶ ನೀಡಲು ಸರ್ಕಾರ ಬದ್ಧ: ಸಚಿವ  ಸಂತೋಷ್‌ ಲಾಡ್
Share on WhatsAppShare on FacebookShare on Telegram

ಧಾರವಾಡ: ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಾದ್ಯಂತ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದ್ದು, ಉದ್ಯೋಗಾವಕಾಶದ ನಿರೀಕ್ಷೆಯಲ್ಲಿರುವ ಯುವಕರಿಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್  ಹೇಳಿದರು.

ADVERTISEMENT
Krishna Byre Gowda :  RTC ಇದ್ದು, ಅನುಭವ ಹೊಂದಿರುವ ರೈತರಿಗೆ ಪಕ್ಕ ದಾಖಲೆ #pratidhvani

ಕರ್ನಾಟಕ ಕಾಲೇಜು (ಕೆಸಿಡಿ) ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಜಿಲ್ಲಾ ಕೌಶಲ್ಯ ಮಿಶನ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯ ಉದ್ಯೋಗ ಮೇಳದಲ್ಲಿ ನಿರುದ್ಯೋಗ ಮತ್ತು ಆಸಕ್ತ ಯುವಕ, ಯುವತಿಯರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗುತ್ತದೆ. ಉದ್ಯೋಗಕ್ಕೆ ಹಾಜರಾದ ಅಭ್ಯರ್ಥಿಗಳಿಂದ ಅಭಿಪ್ರಾಯ ಪಡೆಯಲಾಗುತ್ತದೆ. ಈ ಕುರಿತು ಕ್ರಮ ವಹಿಸಲು ಕೌಶಲ್ಯಾಭಿವೃದ್ಧಿ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

 

ಸರ್ಕಾರ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಬದ್ಧವಾಗಿದ್ದು, ಈಗಾಗಲೇ 40,000ಕ್ಕೂ ಹೆಚ್ಚು ಉದ್ಯೋಗಗಳನ್ನು ನೀಡಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಉದ್ಯೋಗದಾತರನ್ನು ಭೇಟಿ ಮಾಡುವ ಅವಕಾಶ ಕಲ್ಪಿಸುವುದು ಉದ್ಯೋಗ ಮೇಳಗಳ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

Yatnal on Vijayendra: ವಿಜಯೇಂದ್ರ ಶಿಕಾರಿಪುರದಲ್ಲಿ ನಿಲ್ಲಲ್ಲ.. ಗೆಲ್ಲಲ್ಲ ಬರೆದಿಟ್ಟುಕೊಳ್ಳಿ ಯತ್ನಾಳ್ ಕಿಡಿ

ಸರ್ಕಾರವು ಮತ್ತೊಂದು ಮಹತ್ವದ ನಿರ್ಣಯ ಕೈಗೊಂಡಿದ್ದು, 56,000 ಹೊಸ ಹುದ್ದೆಗಳ ನೇಮಕಾತಿಗೆ ತೀರ್ಮಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯನ್ನು ಬಜೆಟ್‍ನಲ್ಲಿ ತೆಗೆದುಕೊಂಡು ನಿರ್ಣಯ ಮಾಡಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಸರ್ಕಾರ ನಿರಂತರ ಪ್ರಯತ್ನಿಸುತ್ತಿದ್ದು, ಯುವಕರು ಈ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

Shivamogga SSLC Student Death | KS Eshwarappa | ಸ್ಥಳಕ್ಕೆ ಡಿ.ಸಿ, ಎಸ್‌.ಪಿ, ಜಿಲ್ಲಾ ಮಂತ್ರಿ ಬರುವಂತೆ ಪಟ್ಟು

ಈ ಸಂದರ್ಭದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಯೋಜನಾಧಿಕಾರಿ ಬಿ.ಎಸ್.ರಾಠೋಡ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರವೀಂದ್ರ ದ್ಯಾಬೇರಿ, ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಸೇರಿದಂತೆ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Tags: BJPCM SiddaramaiahcongressDCM DK ShivakumarDharwadKarnatakaPoliticsprotestUnemployment
Previous Post

ದಲಿತ ಸಿಎಂ ಚರ್ಚೆ: ಮಹದೇವಪ್ಪರಿಗೆ ಮಾಹಿತಿ ಇರಬಹುದು ಎಂದ ಡಿ.ಕೆ ಶಿವಕುಮಾರ್

Next Post

ಕೇರಳ ರಾಜ್ಯದ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತೆ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ಕೇರಳ ರಾಜ್ಯದ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತೆ

ಕೇರಳ ರಾಜ್ಯದ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada