ಕರ್ನಾಟಕದ ರಾಜಕಾರಣದಲ್ಲಿ ಅಚ್ಚಳಿಯದ ಹೆಸರು, ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ನವರ ನಿವಾಸದ ಮಾರಾಟದ ಕುರಿತು ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗಳು ನಡೆದಿದ್ದವು. ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸ ಮಾರಾಟಕ್ಕಿದೆ ಎಂಬ ವಿಚಾರ ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.
ಇದೀಗ ಜನರ ಆಕ್ರೋಶವನ್ನು ಅರಿತ ರಾಜ್ಯ ಸರ್ಕಾರ, ಅಂತಿಮವಾಗಿ ಅವರ ಮನೆಯನ್ನು ಖರೀದಿ ಮಾಡಲು ಮುಂದಾಗಿದೆ. ಆ ಮೂಲಕ ಸಾರ್ವಜನಿಕರ ಕೆಂಗಣಿನಿಂದ ಪಾರಾಗಲು ಯತ್ನಿಸಿದೆ.
ದಿವಂಗತ ಎಸ್.ನಿಜಲಿಂಗಪ್ಪ ಅವರ ಚಿತ್ರದುರ್ಗದಲ್ಲಿರುವ ಮನೆಯನ್ನು ಸರ್ಕಾರ ಸ್ಮಾರಕವನ್ನಾಗಿ ಮಾಡಬೇಕು. ಆದ್ರೆ ಅದನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ಮೂಡಿತ್ತು.
2020-21ನೇ ಸಾಲಿನ ಬಜೆಟ್ ನಲ್ಲಿ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ಅನುದಾನ ಮೀಸಲಿಟ್ಟಿತ್ತು. ಆದ್ರೆ ಈ ಬಗ್ಗೆ ಸರ್ಕಾರ ನಿರ್ಲಕ್ಷ ತೋರಿತ್ತು.ಈಗ ಅದೇ ಅನುದಾನದ ಮೂಲಕ ಮನೆ ಖರೀದಿಗೆ ರಾಜ್ಯ ಸರ್ಕಾರ ಮುಂದಾಗಿದೆ.