• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
December 13, 2025
in Top Story, ಕರ್ನಾಟಕ, ರಾಜಕೀಯ
0
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport) ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ ಸಂಸ್ಥೆಯ ಆಯ್ಕೆಗಾಗಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು (ಕೆಎಸ್ಐಐಡಿಸಿ) ಟೆಂಡರ್ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು 2026ರ ಜನವರಿ 12 ಕೊನೆಯ ದಿನವಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್(M. B. Patil) ತಿಳಿಸಿದ್ದಾರೆ.

ADVERTISEMENT
Yatnal : ಸದನದಲ್ಲಿ ನೇರವಾಗಿ ವಿಜಯೇಂದ್ರಗೆ ಯತ್ನಾಳ್‌ ಸವಾಲ್‌..! #yatnal #bsyediyurappa #byvijayendra

ಈ ಬಗ್ಗೆ ಮಾಹಿತಿ ನೀಡಿರುವ ಅವರು, 2ನೇ ವಿಮಾನ ನಿಲ್ದಾಣಕ್ಕಾಗಿ ರಾಜ್ಯ ಸರಕಾರವು ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ, ಸೋಮನಹಳ್ಳಿ ಮತ್ತು ನೆಲಮಂಗಲದ ಬಳಿ ಸ್ಥಳಗಳನ್ನು ಗುರುತಿಸಿದೆ. ಭಾರತೀಯ ವಿಮಾನನಿಲ್ದಾಣ ಪ್ರಾಧಿಕಾರದ ಉನ್ನತ ಮಟ್ಟದ ತಂಡವು ಇವುಗಳ ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೀಡಿದೆ. ಈಗ ಟೆಂಡರಿನಲ್ಲಿ ಆಯ್ಕೆಯಾಗುವ ಸಲಹಾ ಸಂಸ್ಥೆಯು 5 ತಿಂಗಳಲ್ಲಿ ಸರಕಾರಕ್ಕೆ ತನ್ನ ಸಮಗ್ರ ತಾಂತ್ರಿಕ ಮತ್ತು ಆರ್ಥಿಕ ಕಾರ್ಯಸಾಧ್ಯತಾ ವರದಿ ಕೊಡಬೇಕಾಗುತ್ತದೆ ಎಂದಿದ್ದಾರೆ.

Yatnal : ಉತ್ತರ ಕರ್ನಾಟಕದ ಅಭಿವೃದ್ಧಿ ಕಾಂಗ್ರೆಸ್‌ ಸರ್ಕಾರಕ್ಕೆ ಯತ್ನಾಳ್‌ ಚಾಟಿ..! #uttarakarnataka

ಕಳೆದ 5 ವರ್ಷಗಳಲ್ಲಿ ವಾರ್ಷಿಕವಾಗಿ 250 ಕೋಟಿ ರೂ. ಮೊತ್ತದ ಕೆಲಸಗಳನ್ನು ನಿರ್ವಹಿಸಿರುವಂಥ ಮತ್ತು ಸದರಿ ಕ್ಷೇತ್ರದಲ್ಲಿ ಕನಿಷ್ಠ ಪಕ್ಷ ಐದು ಯೋಜನೆಗಳನ್ನಾದರೂ ನಿರ್ವಹಿಸಿರುವ/ಸಲಹಾ ವರದಿ ನೀಡಿರುವಂತಹ ಸಂಸ್ಥೆಗಳು ಟೆಂಡರ್ ನಲ್ಲಿ ಭಾಗವಹಿಸಬಹುದು. ಟೆಂಡರ್‌ನಲ್ಲಿ ಆಯ್ಕೆಯಾಗುವ ಸಂಸ್ಥೆಯು ನಾವು ಸೂಚಿಸುತ್ತಿರುವ ಮೂರೂ ಸ್ಥಳಗಳ ಮಳೆ ಪ್ರಮಾಣ, ಭೂಲಕ್ಷಣ, ವಿದ್ಯುತ್, ನೀರು, ಒಳಚರಂಡಿ, ತ್ಯಾಜ್ಯ ನಿರ್ವಹಣೆಯಂಥ ಮೂಲಸೌಕರ್ಯಗಳು, ಸುತ್ತಮುತ್ತಲಿನ ಜನಸಂಖ್ಯೆ, ಅಭಿವೃದ್ಧಿ, ಶಬ್ದ ಮತ್ತು ವಿಮಾನ ನಿಲ್ದಾಣದಿಂದ ಉಂಟಾಗುವ ಮಾಲಿನ್ಯ ಇತ್ಯಾದಿಗಳತ್ತ ಗಮನ ಹರಿಸಲಿದೆ ಎಂದು ಅವರು ಹೇಳಿದ್ದಾರೆ.

Yatnal : ಉತ್ತರ ಕರ್ನಾಟಕದ ಅಭಿವೃದ್ಧಿ ಕಾಂಗ್ರೆಸ್‌ ಸರ್ಕಾರಕ್ಕೆ ಯತ್ನಾಳ್‌ ಚಾಟಿ..! #uttarakarnataka

ಇದಲ್ಲದೇ ಉದ್ದೇಶಿತ 2ನೇ ವಿಮಾನ ನಿಲ್ದಾಣ ಅಭಿವೃದ್ಧಿಗೆ ತಗುಲುವ ವೆಚ್ಚ, ಅಗತ್ಯ ಇರುವ ಭೂಮಿ, ರಕ್ಷಣಾ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಸೇರಿದಂತೆ ಹಲವು ಕಡೆಗಳಿಂದ ಪಡೆಯಬೇಕಾಗುವ ಅನುಮೋದನೆಗಳ ವಿವರಗಳು ಮುಂತಾದವನ್ನೂ ಈ ಕಾರ್ಯಸಾಧ್ಯತಾ ವರದಿಯಲ್ಲಿ ನೀಡಬೇಕಾಗುತ್ತದೆ. ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದಿಂದ ಇಲ್ಲಿನ ಕೈಗಾರಿಕೆ, ಪ್ರವಾಸೋದ್ಯಮ, ಜನರ ಓಡಾಟ ಇತ್ಯಾದಿ ಅಂಶಗಳನ್ನೂ ಅದು ವಿವರಿಸಲಿದೆ ಎಂದು ಅವರು ನುಡಿದಿದ್ದಾರೆ.

DK Shivakumar : ಅವ್ನ್ಯಾರೋ ಕಿರಣ್‌ ಹೆಬ್ಬಾರ್‌ ಅಂತೆ, ಅವ್ನಿಗೆ ನಾನ್ಯಾರು ಅಂತ ಗೊತ್ತಿಲ್ಲಾ ಅನ್ಸುತ್ತೆ..

ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಹಾಲಿ ಇರುವ ವಿವಿಧ ರೀತಿಯ ಸಂಪರ್ಕ, ವಿಮಾನ ನಿಲ್ದಾಣ ನಿರ್ಮಾಣ ನಂತರ ಏನೆಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆಯೂ ಸಲಹಾ ಸಂಸ್ಥೆ ಅಧ್ಯಯನ ನಡೆಸಲಿದೆ. ಇದಲ್ಲದೆ, ಸರಕು ಸಾಗಣೆ ಮತ್ತು ಪ್ರಯಾಣಿಕ ಸೇವೆಗಳು ಹಾಗೂ ಅದರಿಂದಾಗುವ ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆಯೂ ಅಧ್ಯಯನ ನಡೆಸಬೇಕಾಗಿದೆ. ಒಟ್ಟಿನಲ್ಲಿ ಮೂರೂ ಸ್ಥಳಗಳ ಬಗ್ಗೆ ಅಧ್ಯಯನ ನಡೆಸಿ, ಯಾವುದು ಹೆಚ್ಚು ಸೂಕ್ತ‌ ಎನ್ನುವ ಅಭಿಪ್ರಾಯ ಕೂಡ ಸಲಹಾ ಸಂಸ್ಥೆ ನೀಡಲಿದೆ ಎಂದು ಅವರು ಹೇಳಿದರು.

V . Somanna : ಚಪ್ಪಾಳೆ ಹೊಡಿರಿ..ಸ್ವಪಕ್ಷೀಯರ ಕಾಲೆಳೆದ ವಿ.ಸೋಮಣ್ಣ #pratidhvani #vsomanna #tumkuru

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ದಟ್ಟಣೆಯಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿದೆ. 2033ರ ಹೊತ್ತಿಗೆ ನಾವು ಮತ್ತೊಂದು ವಿಮಾನ ನಿಲ್ದಾಣ ಹೊಂದಬೇಕಾಗಿದೆ. ಮುಂದಾಲೋಚನೆಯನ್ನು ಇಟ್ಟುಕೊಂಡು ಈಗಿನಿಂದಲೇ ಪ್ರಯತ್ನಗಳನ್ನು ಆರಂಭಿಸಲಾಗಿದೆ. ಈಗಾಗಲೇ ಹೊಸದೆಹಲಿ ಮತ್ತು ಮುಂಬೈ ನಗರಗಳು ಎರಡೆರಡು ವಿಮಾನ ನಿಲ್ದಾಣ ಹೊಂದಿವೆ. ಕಾರ್ಯಸಾಧ್ಯತಾ ವರದಿ ಬಂದ ನಂತರ ಮುಂದಿನ ಹೆಜ್ಜೆ ಏನಿರಬೇಕೆಂದು ನಿರ್ಧರಿಸಲಾಗುವುದು ಎಂದು ಎಂ.ಬಿ ಪಾಟೀಲ್ ವಿವರಿಸಿದ್ದಾರೆ.

Tags: airportBengaluru AirportInternational AirportKarnatakaMB Patil
Previous Post

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

Next Post

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!