• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ : ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
July 10, 2023
in Top Story, ರಾಜಕೀಯ
0
ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ನುಡಿದಂತೆ ನಡೆಯದ ಸರ್ಕಾರ : ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು: ಗ್ಯಾರೆಂಟಿ ಯೋಜನೆಗಳ ಜಾರಿಯಲ್ಲಿ ನುಡಿದಂತೆ ನಡೆಯದ ಕವಲು ದಾರಿಯಲ್ಲಿ ಸರ್ಕಾರ ನಡೆಯುತ್ತಿದ್ದು, ಒಂದೇ ತಿಂಗಳಲ್ಲಿ ಅಪಖ್ಯಾತಿಗೆ ಒಳಗಾದ ಸರ್ಕಾರ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ADVERTISEMENT


ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಂಚ ಗ್ಯಾರಂಟಿ ಜಾರಿಗೊಳಿಸುವಲ್ಲಿ ಗೊಂದಲ ಇದೆ. ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಅಂತ ಆರೋಪ ಮಾಡಿದ್ದೀರಿ, ಎಫ್‌ಸಿ‌ಐ ಅಧಿಕಾರಿಗೆ ಒಂದು ರಾಜ್ಯಕ್ಕೆ ಅಕ್ಕಿ ಕೊಡುವ ಅಧಿಕಾರ ಇಲ್ಲ. ನೀವು ಕೇಂದ್ರ ಸರ್ಕಾರದ ಜತೆ ಮಾತಾಡಬೇಕಿತ್ತು ಅಷ್ಟಕ್ಕೂ ಕೇಂದ್ರ ಸರ್ಕಾರ ನಿಮ್ಮ ಅನ್ನ ಭಾಗ್ಯಕ್ಕೆ ಅಕ್ಕಿ ಕೊಡ್ತೀವಿ ಅಂತ ಹೇಳಿತ್ತಾ ? ಕೇಂದ್ರದ ಜೊತೆಗೆ ಇದರ ಬಗ್ಗೆ ಚರ್ಚೆ ಮಾಡಿದ್ದಿರಾ ಎಂದು ಪ್ರಶ್ನಿಸಿದರು.


ಮಾನ್ಸೂನ್ ಕಾರಣದಿಂದ ಅಕ್ಕಿ ಅಲಭ್ಯತೆ ಇದೆ, ಹಾಗಾಗಿ ಕೇಂದ್ರ ಅಕ್ಕಿ ಕೊಡಕ್ಕಾಗಿಲ್ಲ ಪಂಜಾಬ್‌ ಸರ್ಕಾರ ಅಕ್ಕಿ ಕೊಡಲು ತಯಾರಾಗಿದ್ದರು, ಆಂಧ್ರಪ್ರದೇಶ, ಛತ್ತೀಸ್‌ಗಡ ಸರ್ಕಾರಗಳು ಸಹಾಯ ಮಾಡಲು ಮುಂದಾಗಿದ್ದವು. ತೆಲಂಗಾಣ ಸರ್ಕಾರ ಭತ್ತ ಕೊಡಲು ಸಿದ್ದರಿದ್ದರು. ನಿಮಗೆ ಜನರಿಗೆ ಅಕ್ಕಿ ಕೊಡುವ ಇಚ್ಛಾಶಕ್ತಿ ಇಲ್ಲ. ಈಗ ದುಡ್ಡು ಕೊಡಲು ಮುಂದಾಗಿದ್ದೀರಾ, ಜನರು ಹಣ ತಿಂತಾರಾ ಅಂತ ಸಿಎಂ ಕೇಳಿದ್ದಾರೆ. ಸರ್ಕಾರ 5 ಕೆಜಿ ಅಕ್ಕಿ ಬದಲು 170 ರೂ. ನೀಡುವುದು ಒಬ್ಬ ಬಡ ಮಹಿಳೆಯ ಅರ್ಧ ದಿನದ ಕೂಲಿಗೆ ಸಮವಾಗಿದೆ ಎಂದು ಹೇಳಿದರು.


ಅಕ್ಕಿ ಕೊಡುವುದು ಹೊಸತೇನಲ್ಲ


ಪಡಿತರ ವ್ಯವಸ್ಥೆ ಸ್ವಾತಂತ್ರ್ಯ ಬಂದಾಗಿನಿಂದಲೂ‌ ಇದೆ. ಇಂಗ್ಲೆಂಡಿನ ಆಡಳಿತದ ಕಾಲದಿಂದಲೇ ಪಡಿತರ ಕೊಡುವ ವ್ಯವಸ್ಥೆ ಇತ್ತು. ಆಗ ದುಡ್ಡು ತೆಗೆದುಕೊಂಡು ಪಡಿತರ ಕೊಡುತ್ತಿದ್ದರು. ಅಕ್ಕಿ, ಸಕ್ಕರೆ, ಗೊಧಿ ಕೊಡುತ್ತಿದ್ದರು.
ಆ ಮೇಲೆ ಆಹಾರ ಭದ್ರತಾ ಕಾಯ್ದೆ ಬಂದ ನಂತರ ಪಡಿತರ ವ್ಯವಸ್ಥೆಯನ್ನು ಕಾನೂನು ವ್ಯಾಪ್ತಿಗೆ ತರಲಾಯಿತು. ಮೊದಲು ಕೇಂದ್ರ ಸರ್ಕಾರ 3 ರೂ. ಗೆ ಕೊಡಲಾಗುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ 5 ಕೆಜಿ ಉಚಿತವಾಗಿ ಕೊಡುತ್ತಿದೆ. ಈಗ ಹೆಚ್ಚಿಗೆ ಕೊಡಲು ರಾಜ್ಯ ಸರ್ಕಾರ ಕೊಡಬೇಕಿದೆ. ನಮ್ಮ ಸರ್ಕಾರದ ಅವಧಿಯಲ್ಲೂ 10 ಕೆಜಿ ಕೊಡುತ್ತಿದ್ದೇವು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ನಿರಂತರವಾಗಿ ಮಾರಾಟವಾಗುತ್ತಿವೆ. ಹೆಚ್ಚು ಅಕ್ಕಿ ಕೊಟ್ಟಷ್ಟು ಕಾಳ ಸಂತೆಕೋರರಿಗೆ ಉತ್ತೇಜನ ನೀಡಿದಂತಾಗಬಾರದು. ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟಾವಾಗುತ್ತಿರುವುದಕ್ಕೆ ಕಾಲ ಕಾಲಕ್ಕೆ ಪ್ರಕರಣಗಳು ದಾಖಲಾಗುತ್ತಿರುವುದೇ ಸಾಕ್ಷಿ. ಅದರಿಂದ ಒಬ್ಬ ಐಎಎಸ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಅಷ್ಟೊಂದು ಅಕ್ಕಿ ಕೊಡುವ ಬದಲು ರಾಗಿ‌ಜೋಳ ನೀಡಿದರೆ ನಮ್ಮ ರೈತರಿಗೆ ಅನುಕೂಲವಾಗುತ್ತದೆ. ಆರೋಗ್ಯಕ್ಕೂ ಒಳ್ಳೆಯದಾಗುತ್ತದೆ ಎಂದು ಸಲಹೆ ನೀಡಿದರು.

ಜಾರಿಯಾಗದ ಯುವನಿಧಿ


ಯುವನಿಧಿ ಯೋಜನೆ ಪದವಿ ಮುಗಿಸಿ ಆರು ತಿಂಗಳು ಉದ್ಯೋಗ ಸಿಗದವರಿಗೆ ನೀಡುವುದಾಗಿ ಹೇಳುತ್ತಾರೆ. ಪದವಿ‌ಮುಗಿಸಿ ಎರಡು ಮೂರು ವರ್ಷ ಕಳೆದರೂ ಉದ್ಯೋಗ ಸಿಗದವರಿಗೆ ಯುವನಿಧಿ ನೀಡಿದ್ದರೆ ಅನುಕೂಲ ಆಗುತ್ತಿತ್ತು. ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದಿರಿ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ಈಗ ವಾರ್ಷಿಕ ಬಳಕೆಯ ಸರಾಸರಿ ಮೇಲೆ ಹತ್ತು ಪರ್ಸೆಂಟ್ ಹೆಚ್ಚಿಗೆ ನೀಡುವುದಾಗಿ‌ ಹೇಳುತ್ತಿದ್ದೀರಿ. ಗ್ರಾಮೀಣ ಮಹಿಳೆಯರಿಗೆ ಉತ್ತಮ ಜೀವನ ನಡೆಸಲು ಅವಕಾಶ ಕಲ್ಪಿಸಬಾರದೇ ಅವರಿಗೆ ಉಚಿತ ವಿದ್ಯುತ್ ನಿಂದ ಬೇರೆ ಬೇರೆ ಕೆಲಸಗಳಿಗೆ ಅನೂಕೂಲ ಆಗುತ್ತಿರಲಿಲ್ಲವೇ , ನಗರದ ಮಹಿಳೆಯರೂ ಮಾತ್ರ ಉತ್ತಮ ಜೀವನ ನಡೆಸಬೇಕಾ, ಹಳ್ಳಿ ಮಹಿಳೆಯರು ಹೊಗೆ ಕುಡಿತಾ ಇರಬೇಕಾ ಎಂದು ಪ್ರಶ್ನಿಸಿದರು. ಈ ಮಧ್ಯೆ ಕರೆಂಟ್ ದರ ಹೆಚ್ಚಳ ಮಾಡಿ ಜನರಿಗೆ ಭಾರ ಹಾಕಿದ್ದಾರೆ.

ಗೃಹಜ್ಯೋತಿ ಯೋಜನೆ ಅನಷ್ಠಾನದಲ್ಲಿ ನುಡಿದಂತೆ ನಡೆದಿಲ್ಲ. ಗೃಹ ಲಕ್ಷ್ಮೀ ಯೋಜನೆಯಲ್ಲಿ ಅತ್ತೆ ಸೊಸೆಗೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ. ಗೃಹಲಕ್ಷ್ಮೀಗೆ ಗೃಹಣ‌ ಹಿಡಿದಿದೆ. ಹೆಣ್ಣು ಮಕ್ಕಳಿಗೆ ಬಸ್ ಪಾಸ್ ವ್ಯವಸ್ಥೆ ಮಾಡಿದ್ದಾರೆ. ಅದರ ಆವಾಂತರ ಎಲ್ಲರೂ ನೋಡಿದ್ದೇವೆ. ಪುರುಷರಿಗೂ ಮಹಿಳೆಯರ ಟಿಕೆಟ್ ಕೊಟ್ಟು ಕಾರ್ಪೊರೇಷನ್ ಹೆಚ್ಚಿನ ಹಣ ಪಡೆಯಲು ಪ್ರಯತ್ನ ನಡೆದಿದೆ. ಈ ಮಿಸ್ ಯೂಸ್ ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು. ಹಳ್ಳಿಗಳಲ್ಲಿ ಶಾಲೆ, ಆರೋಗ್ಯ ಸೇವೆ ಅಗತ್ಯವಿದೆ. ಉದ್ಯೋಗ ಸೃಷ್ಟಿ ಮಾಡಬೇಕು. ನಮ್ಮ ಅವಧಿಯಲ್ಲಿ ವಾರ್ಷಿಕ 6 ಲಕ್ಷ‌ 36 ಸಾವಿರ ಉದ್ಯೊಗ ಸೃಷ್ಟಿಯಾಗಿದೆ. ಗ್ಯಾರೆಂಟಿ ಯೋಜನೆಗಳಿಗೆ ವಾರ್ಷಿಕ 52 ಸಾವಿರ ಕೋಟಿ ಹೆಚ್ಚುವರಿ ಹಣ ಸಂಗ್ರಹ ಮಾಡಬೇಕು.ಇದು ಪ್ರತಿ ವರ್ಷ 52 ಸಾವಿರ ಕೋಟಿ ಹಣ ಸಂಗ್ರಹ ಮಾಡಬೇಕು. ಈ ಹಿನ್ನೆಲೆಯಲ್ಲಿ ಕೃಷ್ಣಾ, ಕಾವೇರಿ, ಮೇಕೆದಾಟು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಆಗುವುದಿಲ್ಲ. ನೀರಾವರಿ ಯೋಜನೆಗಳಿಗೆ ಇದರಿಂದ ದೊಡ್ಡ ಹೊಡೆತ ಬೀಳುತ್ತದೆ ಎಂದು ಹೇಳಿದರು.

ನಮ್ಮ ಯೋಜನೆಗಳ ಬದಲಾವಣೆ


ಶಿಕ್ಷಣದ ಬಗ್ಗೆ ಬಹಳ ಮಾತನಾಡುತ್ತಾರೆ. ನಾವು ಒಂದೇ ವರ್ಷ 8 ಸಾವಿರ ಶಾಲೆಗಳ ನಿರ್ಮಾಣಕ್ಕೆ ಆದೇಶ ಮಾಡಿದ್ದೇವೆ. ಮೂರು ವರ್ಷದಲ್ಲಿ 24 ಸಾವಿರ ಶಾಲಾ‌ ಕಟ್ಟಡ ನಿರ್ಮಾಣ ಮಾಡುವ ಗುರಿ‌ ಇತ್ತು. ನೀವು ನಮ್ಮ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದೀರಿ ಹೊಸದಾಗಿ ಶಾಲಾ ಕಟ್ಟಡ‌ನಿರ್ಮಾಣ ಮಾಡುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಇನ್ನು ಶಿಕ್ಷಣದಲ್ಲೂ ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಲು ಐಟಿಐಗಳನ್ನು ಮೇಲ್ದರ್ಜೆಗೆ ಏರಿಸಿದ್ದೇವು. ನೀವು ಅವುಗಳನ್ನು ಕೈ ಬಿಟ್ಟೀದ್ದೀರಿ.
ಮಕ್ಕಳು ಮುಕ್ತವಾಗಿ ಅಧ್ಯಯನ ಮಾಡಲು ಎನ್ ಇಪಿ ಜಾರಿ ಮಾಡಿದ್ದೇವು. ನಿವು ಅದನ್ನು ಬದಲಾವಣೆ ಮಾಡಿದ್ದೀರಿ, ನಾವು ಮಾಡಿದ್ದನ್ನೆಲ್ಲ ಬದಲಾವಣೆ ಮಾಡಲಿಕ್ಕೆ ನೀವು ಬಂದಿದ್ದರೆ ಮಾಡಿ, ಆದರೆ, ನೀತಿಗಳನ್ನು ಮುಂದುವರೆಸಿಕೊಂಡು ಹೋಗಬೇಕಾಗುತ್ತದೆ ಎಂದು ಹೇಳಿದರು. ರಾಜ್ಯಪಾಲಯ ಭಾಷಣ ನೋಡಿದರೆ ಸರ್ಕಾರ‌ ಕವಲು ದಾರಿಯಲ್ಲಿದೆ ಅನಿಸುತ್ತಿದೆ. ವಿದ್ಯಾನಿಧಿ ಯೋಜನೆಯಿಂದ ಸುಮಾರು 8 ಲಕ್ಷ ರೈತರ ಮಕ್ಕಳಿಗೆ ಅನುಕೂಲವಾಗುತ್ತಿತ್ತು. ರೈತರಿಗೆ ಬಿತ್ತನೆಗೆ ಅನುಕೂಲವಾಗಲು 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆ‌ ಇತ್ತು ಅದನ್ನು ಕೈ ಬಿಟ್ಟಿದ್ದೀರಿ. ರೈತರಿಗೆ ಅನ್ಯಾಯ ಮಾಡುವುದು ನಿಮ್ಮದು ಯಾವ ರೀತಿಯ ರೈತಪರ ಸರ್ಕಾರ ಎಂದು ಪ್ರಶ್ನಿಸಿದರು.

Tags: Basavaraja BommaiBJPCongress Guarantee
Previous Post

ಕೇಂದ್ರ ಸರ್ಕಾರದಿಂದ ರಾಜಕೀಯ ದ್ವೇಷದ ಬಡವರ ವಿರೋಧಿ ಡರ್ಟಿ ಪಾಲಿಟಿಕ್ಸ್: ಸಿದ್ದರಾಮಯ್ಯ ಆಕ್ರೋಶ

Next Post

ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿದ ವಾಲಟ್ಟಿ ಟ್ರೈಲರ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿದ ವಾಲಟ್ಟಿ ಟ್ರೈಲರ್

ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆ ಮೂಡಿಸಿದ ವಾಲಟ್ಟಿ ಟ್ರೈಲರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada