• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮ ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ..!!

ಪ್ರತಿಧ್ವನಿ by ಪ್ರತಿಧ್ವನಿ
October 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ರಾಜ್ಯದಲ್ಲಿ ಖಾಸಗಿ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಸ್ಥಳ, ಆವರಣ ಹಾಗೂ ಸಾರ್ವಜನಿ ಆಸ್ತಿಗಳನ್ನು ಬಳಸಿಕೊಳ್ಳುವುದನ್ನು ನಿಯಂತ್ರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸರ್ಕಾರದ ಜಂಟಿ ಕಾರ್ಯದರ್ಶಿ ಟಿಪ್ಪಣಿ ಹೊರಡಿಸಿದ್ದು, ಅದರಲ್ಲಿ ದಿನಾಂಕ:16-10-2025ರ ಸಚಿವ ಸಂಪುಟದಲ್ಲಿ ಕೆಳಕಂಡಂತೆ ನಿರ್ಣಯ ಕೈಗೊಳ್ಳಲಾಗಿದೆ.

ADVERTISEMENT

1) ಸರ್ಕಾರದ / ಸರ್ಕಾರಿ ಸಾಮ್ಯದ / ನಿಗಮ/ಮಂಡಳಿಗಳ ಶಾಲಾ-ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು, ತೆರೆದ ಸ್ಥಳಗಳು ಮತ್ತು ಇತರ ಆಸ್ತಿ / ಜಾಗಗಳು ನಾಗರೀಕರ ಸದ್ಬಳಕೆಗೆ ನಿರ್ಧಿಷ್ಟಪಡಿಸಲಾಗಿರುತ್ತದೆ. ಇವುಗಳನ್ನು ಸಾರ್ವಜನಿಕರು ಬಳಸಲು ಯಾವುದೇ ಅಡಚಣೆಗಳು, ಬೆದರಿಕೆಗಳು ಉದ್ಭವಿಸದಂತೆ ಕ್ರಮವಹಿಸುವುದು ಅತ್ಯಗತ್ಯವಾಗಿರುತ್ತದೆ. ಹಾಗೆಯೇ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು, ಸಾರ್ವಜನಿಕರ ಸಾರ್ವತ್ರಿಕ ಅಸಮಾಧಾನಗಳನ್ನು ನಿವಾರಿಸುವುದು ಸಹ ಅವಶ್ಯವಾಗಿರುತ್ತದೆ.

2) ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪುಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್‌ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು / ಸರ್ಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರ್ಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದ ಬಳಸಿಕೊಳ್ಳುತ್ತಿರುವುದು ಕಂಡುಬಂದಿದೆ. ಇಂತಹ ಕ್ರಿಯೆಗಳು ಅಕ್ರಮ ಪ್ರವೇಶ (Tresspass) ಎಂದು ಪರಿಗಣಿಸಲ್ಪಡುತ್ತವೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನು ಉಂಟುಮಾಡುತ್ತವೆ. ಈ ಕಾರಣದಿಂದ ಸರ್ಕಾರದ ಯಾವುದೇ ಆಸ್ತಿ | ಸ್ಥಳದ ಬಳಕೆಯನ್ನು ಸಾರ್ವಜನಿಕ ಹಿತದೃಷ್ಟಿಯಿಂದ ನಿಯಂತ್ರಿಸುವ ಸಲುವಾಗಿ ಯಾವುದೇ ಸಂಘಟನೆ, ಸಂಸ್ಥೆ, ಸಂಘವು ಆಯಾ ಸಾರ್ವಜನಿಕ ಆಸ್ತಿ/ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆದು ಬಳಸಿಕೊಳ್ಳಲು ಅನುಮತಿ ನೀಡುವುದು ಅಗತ್ಯವಾಗಿರುತ್ತದೆ.

3) ಯಾವುದೇ ಚಟುವಟಿಕೆಗಳು ಸಾರ್ವಜನಿಕರಿಗೆ ಅನಾನುಕೂಲವಾಗುವುದಾದಲ್ಲಿ ಹಾಗೂ ಸಂಬಂಧಿಸಿದ ಸಂಸ್ಥೆಗಳ ಆವರಣ/ಜಾಗದಲ್ಲಿ ನಡೆಯುವ ಚಟುವಟಿಕೆಗಳಿಂದ ಆ ಸಂಸ್ಥೆಗಳ ಮೂಲ ಧೈಯಕ್ಕೆ ಧಕ್ಕೆ ಉಂಟಾಗುವುದಾದಲ್ಲಿ ಅಂತಹ ಚಟುವಟಿಕೆಗಳ ಆಯೋಜನೆಗೆ ಸಕ್ಷಮ ಪ್ರಾಧಿಕಾರಗಳು ಅನುಮತಿಯನ್ನು ನಿರಾಕರಿಸತಕ್ಕದ್ದು.

4) ಈ ಕೆಳಕಂಡ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲಾಗುವ ಖಾಸಗಿ ಸಂಘ, ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅವುಗಳ ಎದುರಿಗೆ ನಮೂದಿಸಲಾದ ಮಾಲಿಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವುದನ್ನು ಪರಿಶೀಲಸತಕ್ಕದ್ದು:-

ಸರ್ಕಾರದ/ಸರ್ಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣ ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ

ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ.
ಸಾರ್ವಜನಿಕ ರಸ್ತೆಗಳು, ಸರ್ಕಾರದ ಇತರೆ ಆಸ್ತಿ/ ಸ್ಥಳಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು/ ಪೊಲೀಸ್ ಅಧೀಕ್ಷಕರು.

5) ಮೇಲೆ ನಮೂದಿಸಿದ ಇಲಾಖೆ, ಸಕ್ಷಮ ಪ್ರಾಧಿಕಾರಗಳು ಇಂತಹ ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ, ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸತಕ್ಕದ್ದು.

ಸಚಿವ ಸಂಪುಟವು ಕೈಗೊಂಡಿರುವ ಮೇಲಿನ ನಿರ್ಣಯದಂತೆ ಒಳಾಡಳಿತ ಇಲಾಖೆಯಿಂದ ಹೊರಡಿಸಲಾಗಿರುವ ಉಲ್ಲೇಖಿತ ಆದೇಶವನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಆದೇಶದಲ್ಲಿ ತಿಳಿಸಿರುವಂತೆ, ಆಯಾ ಇಲಾಖಾ ವ್ಯಾಪ್ತಿಗೆ ಸಂಬಂಧಿಸಿದಂತೆ, ಸೂಕ್ತ ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಮುಂದುವರೆದು, ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸುವವರೆಗೆ, ಉಲ್ಲೇಖಿತ ಆದೇಶದಲ್ಲಿ ನಮೂದಿಸಿರುವ ಸಕ್ಷಮ ಪ್ರಾಧಿಕಾರವು ಚಾಲ್ತಿಯಲ್ಲಿರುವ ತಮ್ಮ ಇಲಾಖೆಯ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸದರಿ ಆದೇಶದಲ್ಲಿ ಉಲ್ಲೇಖಿಸಿರುವ ಸಿದ್ಧಾಂತಗಳನ್ನು ಪಾಲಿಸಿ ನ್ಯಾಯಿಕ ಆದೇಶವನ್ನು ಹೊರಡಿಸಲು ಕ್ರಮಕೈಗೊಳ್ಳುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಹೊರಡಿಸಲಾದ ಮಾರ್ಗಸೂಚಿಯ ಪ್ರತಿಯನ್ನು ಒಳಾಡಳಿತ ಇಲಾಖೆಗೆ ಕಳುಹಿಸುವಂತೆ ತಿಳಿಸಿದ್ದಾರೆ.

Tags: BJPCM SiddaramaiahcongressGovt Groundsgovt of karnatakagovt School GroundsKarnatakaPriyank KhargeVidhanasouda
Previous Post

Priyank Kharge: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ: ಪ್ರಿಯಾಂಕ್‌ ಖರ್ಗೆ

Next Post

KJ George: ಬಿಜೆಪಿಯ ‘ವೋಟ್ ಚೋರಿ’ ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post

KJ George: ಬಿಜೆಪಿಯ 'ವೋಟ್ ಚೋರಿ' ಪ್ರಜಾಪ್ರಭುತ್ವದ ಕಗ್ಗೊಲೆ: ಸಚಿವ ಕೆ.ಜೆ.ಜಾರ್ಜ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada