ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಪ್ರತಿಧ್ವನಿಯ ವಿಶೇಷ ಪಾಡ್ ಕಾಸ್ಟ್‌ನಲ್ಲಿ ಈ ಕುರಿತು ರಾಜ್ಯ ವೈದ್ಯಕೀಯ ಸಂಘದ ನಿಕಟ ಪೂರ್ವ ಅಧ್ಯಕ್ಷರಾಗಿದ್ದ ಡಾ.ಹೆಚ್.ಎನ್.ರವೀಂದ್ರ ಧ್ವನಿ ಎತ್ತಿದ್ದರು. ಇದೀಗ ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಈ ಮೂಲಕ ಪ್ರತಿಧ್ವನಿಯ ವರದಿಯು ಸರ್ಕಾರದ ಮಟ್ಟದಲ್ಲಿ ಬಿಗ್ ಇಂಪ್ಯಾಕ್ಟ್ ತರುವಲ್ಲಿ ಯಶಸ್ವಿಯಾಗಿದೆ.
ಪ್ರತಿಧ್ವನಿಯಲ್ಲಿ ಚರ್ಚೆಯಾಗಿದ್ದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ ತ್ರಿವಳಿ ತಜ್ಞರ ಹುದ್ದೆಗಳು ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತ್ರಿವಳಿ ತಜ್ಞರ ಕೊರತೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದೆ. ಅದರಂತೆ ಕಳೆದ ಡಿಸೆಂಬರ್ 11ರಂದು ವೇಳಾಪಟ್ಟಿ ಪ್ರಕಟವಾಗಿತ್ತು. ಆದರೆ 22-12-2025 ರಂದು ಅಂತಿಮ ಪಟ್ಟಿ ಹಾಗೂ ದಿನಾಂಕವನ್ನು ತಿಳಿಸಲು 26-12-2025ರಂದು ನಿಗದಿ ಪಡಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಅದನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.












