SSLC, PUC ಪರೀಕ್ಷೆ ವಿಚಾರ: ಎಡಬಿಡಂಗಿ ನಿರ್ಧಾರಕ್ಕೆ ಕಡಿವಾಣ ಹಾಕಿ ಸರ್ಕಾರಕ್ಕೆ ಹೆಚ್ಡಿಕೆ ಆಗ್ರಹ

ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.


ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ ಪರೀಕ್ಷೆ ಎಂಬ ಮೊಂಡುತನವನ್ನು ಸರ್ಕಾರ ಕೈಬಿಡಬೇಕು. ಮಕ್ಕಳ ಜೀವದೊಂದಿಗೆ ಚೆಲ್ಲಾಟ ಆಡುವುದನ್ನು ಬಿಟ್ಟು, ಶಿಕ್ಷಣ ಸಚಿವರು ಎಡಬಿಡಂಗಿ ನಿರ್ಧಾರ ತೆಗೆದು ಕೊಂಡಿರುವುದಕ್ಕೆ ಮುಖ್ಯಮಂತ್ರಿಗಳು ಕಡಿವಾಣ ಹಾಕಬೇಕೆಂದಿದ್ದಾರೆ.

ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಕ್ಕಳಿಗೆ ಏಕರೂಪ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ ಎಂದಾದರೆ ಅದು ಅವರಿಗಿಂತ ಕಿರಿಯರಾದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೂ ಅನ್ವಯಿಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿದ್ದಕ್ಕೆ ಪ್ರಧಾನಮಂತ್ರಿಯ ‘ಗುಮ್ಮ’ ಕಾರಣ. ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷೆ ನಡೆಸಲು ಮುಂದಾಗಿರುವ ಬೃಹಸ್ಪತಿ ಶಿಕ್ಷಣ ಸಚಿವರೋ? ಪೋಷಕರು, ವಿದ್ಯಾರ್ಥಿಗಳ ತಾಳ್ಮೆ ಕೆಣಕುವ ಪರೀಕ್ಷಾ ಮಂತ್ರಿಯೋ?

ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ವಿಷಯದಲ್ಲಿ ಮೌನಿ ಆಗಿರುವ ಶಿಕ್ಷಣ ಸಚಿವರು ಬಿಸಿ ಊಟ ಸಿಗದೆ ಕಂಗಾಲಾಗಿರುವ ಬಡ ವಿದ್ಯಾರ್ಥಿಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯಲ್ಲಿ ಪಾಸಾಗುವ ಏಳೆಂಟು ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನಾಯಾಸವಾಗಿ ಸೀಟು ದಕ್ಕಿಸಿಕೊಳ್ಳಲು ವ್ಯವಸ್ಥೆ ಮಾಡುವ ಕಡೆ ಚಿತ್ತ ಹರಿಸಲಿ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...