ರಾಜ್ಯದಲ್ಲಿ 188 ಹೊಸ ಇಂದಿರಾ ಕ್ಯಾಂಟೀನ್(Indira Canteen) ಆರಂಭಿಸಲು ಸರ್ಕಾರ ಚಿಂತನೆಯನ್ನು ನಡೆಸಿದೆ ಎನ್ನಲಾಗುತ್ತದೆ. ಹಾಗೂ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ಗಳಿಗೆ ಹೊಸ ಜಾಗ ಮತ್ತು ನಿರ್ದಿಷ್ಟ ಆಹಾರದ ಪಟ್ಟಿಯನ್ನು ಪ್ರಸ್ತಾಪಿಸಲಾಗಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್(Minister Rahim Khan) ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಈ ಕುರಿತು ಬುಧವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆಸಲಾದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ರಹೀಂ ಖಾನ್, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಿರ್ಧಾರದಂತೆ ಇಂದಿರಾ ಕ್ಯಾಂಟೀನ್ಗಳಲ್ಲಿ ಹೊಸ ಆಹಾರ ಪಟ್ಟಿಗಳಿಗಾಗಿ ಹೊಸ ಟೆಂಡರ್ಗಳನ್ನು ನೀಡಲಾಗುವುದು ಎಂದು ಪ್ರಸ್ತಾಪಿಸಿದರು. ಪ್ರಸ್ತುತ, ಬಿಬಿಎಂಪಿ ಹೊರತುಪಡಿಸಿ ರಾಜ್ಯದಲ್ಲಿ 197 ಇಂದಿರಾ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ, 188 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ಆರಂಭಿಸಲಾಗುವುದು ಎಂಬ ಮಾಹಿತಿಯನ್ನು ನೀಡಿದ್ದಾರೆ
ಈ ಹಿಂದೆಯೂ ಕೂಡ ರಾಜ್ಯದ್ಯಂತ ಹಲವು ಕಡೆಗಳಲ್ಲಿ ಇಂದಿನ ಕ್ಯಾಂಟೀನ್ ಆರಂಭಿಸಲು ಸರ್ಕಾರಕ್ಕೆ ಒತ್ತಾಯವನ್ನ ಮಾಡಲಾಗಿತ್ತು ಆದರೆ ಹಿಂದಿನ ಬಿಜೆಪಿ ಸರ್ಕಾರ ಇದಕ್ಕೆ ಕಿವಿ ಕೊಟ್ಟಿರಲಿಲ್ಲ ಆದರೆ ಇಂದಿನ ಯೋಜನೆ ಸಿಎಂ ಸಿದ್ದರಾಮಯ್ಯ ಅವರ ಕನಸಿನ ಯೋಜನೆಯಾಗಿದೆ ಇದನ್ನ ರಾಜ್ಯದ್ಯಂತ ವಿಸ್ತರಿಸಲು ಈ ಹಿಂದೆ ತೀರ್ಮಾನವನ್ನು ಕೈಗೊಳ್ಳಲಾಗಿತ್ತು ಆದರೆ ಈಗ ಇನ್ನಷ್ಟು ಹೊಸ ಹಿಂದಿನ ಕ್ಯಾಂಟೀನ್ಗಳನ್ನ ಸ್ಥಾಪಿಸಲು ಸಾಧ್ಯವಿದೆಯೇ ಎಂಬ ಪ್ರಶ್ನೆಗಳು ಉದ್ಭವಗೊಂಡಿದೆ
ಇದಕ್ಕೆ ಪ್ರಮುಖವಾದ ಕಾರಣ ಅಂದ್ರೆ ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣದ ಅಭಾವ ಕಂಡು ಬಂದಿರುವುದು ಈಗಾಗಲೇ ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಸಾಕಷ್ಟು ಹಣವನ್ನ ಖರ್ಚು ಮಾಡಿದೆ ಇದರ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಕೂಡ ರಾಜ್ಯ ಸರ್ಕಾರ ಮುಂದುವರಿಸಬೇಕಾದ ಅನಿವಾರ್ಯತೆಯಲ್ಲಿ ಇದೆ
ಹೀಗಾಗಿನೇ ಹೊಸ ಯೋಜನೆಗಳಿಗೆ ಮತ್ತು ಹೊಸ ಜಿಲ್ಲೆಗಳ ಸ್ಥಾಪನೆಗೆ ಸರ್ಕಾರದ ಬಳಿ ಹಣವಿಲ್ಲ ಎಂದು ಅಧಿಕಾರಿಗಳು ಮತ್ತು ಸರ್ಕಾರದ ಪ್ರಮುಖ ಸಚಿವರುಗಳೆ ಹೇಳಿಕೆಯನ್ನು ನೀಡುತ್ತಿದ್ದಾರೆ ಇದರ ನಡುವೆ ಇನ್ನೂ ಹಲವು ರೀತಿಯಾದ ಆರ್ಥಿಕ ಸಮಸ್ಯೆಗಳು ಸರ್ಕಾರವನ್ನು ಕಾಡುತ್ತಿದೆ ಹೀಗಿರುವಾಗ ಮತ್ತೆ ಸರ್ಕಾರ ಹೊಸದಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪನೆ ಮಾಡಲಿದೆ ಎನ್ನಲಾಗುತ್ತಿರುವುದು ನಿಜಕ್ಕೂ ಅಚ್ಚರಿಯ ಸಂಗತಿ.