• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ : ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ 

ಪ್ರತಿಧ್ವನಿ by ಪ್ರತಿಧ್ವನಿ
October 1, 2023
in Top Story, ಕರ್ನಾಟಕ
0
ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ : ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ 
Share on WhatsAppShare on FacebookShare on Telegram

ಬೆಂಗಳೂರು: ಮುಂದಿನ ಆರು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಭವಿಷ್ಯ ನುಡಿದಿದ್ದು, ಈ ಹೇಳಿಕೆ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದನ್ನು ಬಿಟ್ಟು ತಮ್ಮದೇ ಪಕ್ಷದ ಬಗ್ಗೆ ಯೋಚಿಸಬೇಕು ಎಂದು ಹೇಳಿದ್ದಾರೆ.

ADVERTISEMENT

ಆರು ತಿಂಗಳಲ್ಲಿ ಸರ್ಕಾರ ಬೀಳುತ್ತದೆ ಎಂಬ ಹೇಳಿಕೆ ಈ ವಾರದ ಅತ್ಯುತ್ತಮ ಜೋಕ್. ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ಭವಿಷ್ಯದ ಬಗ್ಗೆ ಚಿಂತಿಸುವುದು ಬಿಟ್ಟು, ಈಗಾಗಲೇ ಜನರ ಮನಸ್ಸಿನಿಂದ ಗೇಟ್‌ಪಾಸ್ ಆಗಿರುವ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಚಿಂತಿಸಲಿ. ಅಧಿಕಾರವಿಲ್ಲದೆ ಅತೃಪ್ತ ಆತ್ಮವಾಗಿರೋ ಹೆಚ್’ಡಿಕೆ ಹತಾಶೆಯಿಂದ ಸರ್ಕಾರ ಬೀಳುವ ಕನಸು ಕಾಣುತ್ತಿದ್ದಾರೆ. ನಮ್ಮ ಸರ್ಕಾರಕ್ಕೆ ರಾಜ್ಯದ ಜನ ನಾವು ನಿರೀಕ್ಷೆ ಮಾಡದಷ್ಟು ಸಂಪೂರ್ಣ ಜನಾದೇಶ ನೀಡಿದ್ದಾರೆ‌.  ನಾವು ಪೂರ್ಣಾವಧಿ ಆಡಳಿತ ನಡೆಸುವುದು ನಿಶ್ಚಿತ. ಇನ್ನೊಬ್ಬರ ಆಸರೆಯಲ್ಲಿ ಸರ್ಕಾರ ರಚಿಸಿಲ್ಲ. ಸ್ವಂತ ಬಲದಿಂದ ಈ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಾಗಿ ಸರ್ಕಾರ ಬೀಳಲಿದೆ ಎಂಬ ಕನಸು ತಿರುಕನ ಕ‌ನಸಷ್ಟೆ.

ಸ್ಥಾಪಿತ ಸರ್ಕಾರವನ್ನು ಕೆಡವುವ ಕೆಟ್ಟ ಚಾಳಿ ಆರಂಭಿಸಿದ್ದೇ ಬಿಜೆಪಿ. ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ ಎಂಬಂತೆ BJP ಜೊತೆ ಮೈತ್ರಿ ಮಾಡಿಕೊಂಡ ತಕ್ಷಣವೆ ಹೆಚ್’ಡಿಕೆಗೂ ಆ ಚಾಳಿ ಅಂಟಿಕೊಂಡಂತಿದೆ. ಹೀಗಾಗಿ ಸರ್ಕಾರ ಬೀಳಿಸುವ ಮಾತನಾಡುತ್ತಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು‌. ಇದು ಕೊನೆಗೆ, ಸಿಗದ ದ್ರಾಕ್ಷಿ ಹುಳಿ ಎಂಬ ನರಿಯ ಕಥೆಯಂತಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕರನ್ನು ಭೀತಿಗೊಳಗಾಗುವಂತೆ ಮಾಡಲು ಐಟಿ, ಇಡಿ ಮತ್ತು ಸಿಬಿಐ ಅನ್ನು ಬಳಸಿಕೊಳ್ಳಲು ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರಬಹುದು ಎಂದು ಆರ್‌ಡಿಪಿಆರ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Tags: BangloreDinesh Gundu RaoHD KumaraswamyNews
Previous Post

ಖಾಸಗಿ ಆಸ್ಪತ್ರೆಯ ವೈದ್ಯೆ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಿದ್ದ ಕರ್ನಾಟಕ ಹೈಕೋರ್ಟ್

Next Post

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ: ಸಿಡಬ್ಲ್ಯುಎಂಎಗೆ ರಾಜ್ಯ ಸರ್ಕಾರ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada