• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ BJP ಸರ್ಕಾರ ಕೈಗೊಂಡ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ ; ಸಿದ್ದರಾಮಯ್ಯ

Any Mind by Any Mind
April 14, 2023
in Top Story, ಇದೀಗ, ಕರ್ನಾಟಕ, ದೇಶ
0
ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ BJP ಸರ್ಕಾರ ಕೈಗೊಂಡ ನಿರ್ಧಾರ  ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ ; ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ, ಮೀಸಲಾತಿ ಪರಿಷ್ಕರಣೆ ಮಾಡಿದ್ದ ಬಿಜೆಪಿ ಸರ್ಕಾರದ ನಿರ್ಧಾರ ದೋಷ ಪೂರಿತವಾದುದ್ದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಸಂಬಂಧ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆ ಬಿಡುಗಡೆಗೊಳಿಸಿ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ADVERTISEMENT

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಲಾದರೂ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು.

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ ಕರ್ನಾಟಕ ಸರ್ಕಾರ ಕೈಗೊಂಡಿರುವ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ಯನ್ನು ಆಧರಿಸಿದೆ. ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಬುನಾದಿಯೇ ಅತ್ಯಂತ ಅಸ್ಥಿರವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿರುವುದು ರಾಜ್ಯ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ.
‘ಮುಸ್ಲಿಮರು ಕೇವಲ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಪರಿಗಣಿಸಿತ್ತು ಎಂಬ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಹೇಳಿಕೆ ಸಂಪೂರ್ಣ ತಪ್ಪು ಮಾಹಿತಿಯಾಗಿದೆ. ‘ಮುಸ್ಲಿಂಮರು ಸಾಮಾಜಿಕವಾಗಿಯೂ ಹಿಂದುಳಿದಿದ್ದಾರೆ’ ಎಂದು ಚಿನ್ನಪ್ಪ ರೆಡ್ಡಿ ಆಯೋಗ ಹೇಳಿತ್ತು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಯನ ಆಧರಿತವಾದ ವರದಿ, ವಿಶ್ವಾಸಾರ್ಹ ಅಂಕಿ-ಅಂಶಗಳ ಸಂಗ್ರಹ ಹೀಗೆ ಯಾವುದೇ ತಯಾರಿ ಇಲ್ಲದೆ ಅತ್ಯವಸರದಿಂದ ಮುಸ್ಲಿಂ ಮೀಸಲಾತಿ ರದ್ದುಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳಿರಲಿಲ್ಲ. ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿ ಉಳಿಸಿಕೊಂಡ ಶೇ. 4ರಷ್ಟು ಮೀಸಲಾತಿಯನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿಕೆ ಮಾಡಿರುವುದರಿಂದ ಮುಸ್ಲಿಂ ಮೀಸಲಾತಿ ರದ್ದತಿ ಆದೇಶ ರದ್ದಾದರೆ ಆ ಎರಡೂ ಸಮುದಾಯಗಳಿಗೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ. ಒಳ ಮೀಸಲಾತಿ ಮತ್ತು ಒಕ್ಕಲಿಗ, ಲಿಂಗಾಯತ ಇಲ್ಲವೇ ಇತರ ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್ ಪಕ್ಷದ ವಿರೋಧ ಇಲ್ಲ. ಆದರೆ ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ.

ಒಟ್ಟು ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇ.75ಕ್ಕೆ ಹೆಚ್ಚಿಸಿ ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವುದೊಂದೇ ಈಗಿನ ಮೀಸಲಾತಿ ವಿವಾದಕ್ಕೆ ಶಾಶ್ವತ ಪರಿಹಾರ. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿಯನ್ನು ಹೆಚ್ಚಿಸಲು ಖಂಡಿತ ಕ್ರಮಕೈಗೊಳ್ಳುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸದೆ ಸರ್ವಸಮ್ಮತ ಪರಿಹಾರ ನೀಡುತ್ತೇವೆ. ಮೀಸಲಾತಿಗೆ ಶೇಕಡಾ 50ರ ಮಿತಿ ಎನ್ನುವುದು ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು ಅದು ಸಾಂವಿಧಾನಿಕವಾದುದೇನಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ. ನ್ಯಾಯವಾದಿ ಕಾಂತರಾಜ್ ಅಧ್ಯಕ್ಷತೆಯ ಆಯೋಗ ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿಯನ್ನು ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ.

ಕೇಂದ್ರ ಸರ್ಕಾರ ಈಗಾಗಲೇ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ನೀಡಿ ಶೇಕಡಾ 50ರ ಮಿತಿಯನ್ನು ಉಲ್ಲಂಘಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಅನುಕೂಲವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು.

#Reservation

Tags: BJP GovernmentBJP PartybjpkarnatakacmbommaiCongress High CommandCovid 19ModiMuslimsPMModireservation politicsReservation SystemreservationsSC ST Reservation in PromotionssiddaramaiahSupreme Court of Indiasuprimಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ʻಉಂಡೆನಾಮʼ ಚಿತ್ರ ವಿಮರ್ಶೆ.. ಪ್ರೇಕ್ಷಕರನ್ನ ಮತ್ತೆ ನಗಿಸಲು ಬಂದ ಕೋಮಲ್‌..!  ‌

Next Post

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ

Related Posts

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada