ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹುಂಡೈ ಕಾರ್ ಕಂಪನಿ ಪ್ರತ್ಯೇಕವಾದಿಗಳಿಗೆ ಬೆಂಬಲ ಸೂಚಿಸಿದ ಫ್ರೀ ಕಾಶ್ಮೀರ ಪೋಸ್ಟ್ ಸಾಮಾಜಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆ ಕಂಪನಿ ವಿರುದ್ದ ಟೀಕೆ ವ್ಯಕ್ತವಾಗಿತ್ತು. ಈ ಮಧ್ಯೆ ದಕ್ಷಿಣ ಕೊರಿಯಾ ಸರ್ಕಾರವು ಘಟನೆಯ ಸಂಬಂಧ ವಿಷಾದ ವ್ಯಕ್ತಪಡಿಸಿದೆ.
ಈ ಕುರಿತು ಇಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ರ ಜೊತೆ ಮಾತನಾಡಿದ ದಕ್ಷಿಣ ಕೊರಿಯಾದ ವಿದೇಶಾಂಗ ಸಚಿವ ಚುಂಗ್ ಇಯು_ಯೋಂಗ್ ಭಾರತದ ಜನರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕೆ ತೀವ್ರ ವಿಷಾದ ತಿಳಿಸುತ್ತೇವೆ ಎಂದಿದ್ದಾರೆ.
ಘಟನೆಯ ಕುರಿತು ಕ್ಷಮೆಯಾಚಿಸಿರುವ ಹುಂಡೈ ಕಂಪನಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸುವ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಭಾವನೆಗಳ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ದಕ್ಷಿಣ ಕೊರಿಯಾದ ಭಾರತದ ರಾಯಭಾರಿ ಅರಿಂದಮ್ ಭಾಗ್ಚಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರವು ಭಾರತದ ಪ್ರಾದೇಶಿಕ ಸಮಗ್ರತೆಗೆ ಸಂಬಂಧಿಸಿರುವ ಕಾರಣ ಯಾವುದೇ ರಾಜಿಯಿಲ್ಲ ಎಂದು ತಮ್ಮ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಹುಂಡೈ ಕಾರು ಕಂಪನಿ ಟ್ವೀಟ್ ಮಾಡಿ “ಪಾಕಿಸ್ತಾನದ ಸ್ವತಂತ್ರ ಸ್ವಾಮ್ಯದ ವಿತರಕರು ತಮ್ಮ ಸ್ವಂತ ಖಾತೆಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಕಂಪನಿಯ ಮೋಟಾರ್ ನೀತಿಗೆ ಸಂಪೂರ್ಣ ವಿರುದ್ದವಾಗಿದೆ ಎಂದು ಹೇಳಿದೆ.












