• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರ ನಡೆಗೆ ರಾಜ್ಯಾದ್ಯಂತ ಆಕ್ರೋಶ.. ಸಿಎಂ ಪರವಾಗಿ ಪ್ರತಿಭಟನೆ..

ಕೃಷ್ಣ ಮಣಿ by ಕೃಷ್ಣ ಮಣಿ
August 17, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ತನಿಖೆಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮವನ್ನು ವಿರೋಧಿಸಿ ರಾಜ್ಯಾದ್ಯಂತ ಹೋರಾಟ ಶುರುವಾಗಿದೆ. ಸಿಎರಂ ಸಿದ್ದರಾಮಯ್ಯ ಈಗಾಗಲೇ ನ್ಯಾಯಾಂಗ ತನಿಖೆಗೆ ಆದೇಶ ಮಾಡಿದ್ದಾರೆ. ಹೀಗಿದ್ದರೂ ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವ ಮೂಲಕ ರಾಜಭವನ ರಾಜಕೀಯ ಕೇಂದ್ರವಾಗಿ ಬದಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.

ADVERTISEMENT

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರ ಅನುಮತಿ ನೀಡಿರುವುದನ್ನು ವಿರೋಧಿಸಿ ಕಲಬುರಗಿಯಲ್ಲಿ ಪ್ರತಿಭಟನೆ ಮಾಡಲಾಗಿದೆ. ಕಲಬುರಗಿ ಜಿಲ್ಲಾ ಪ್ರದೇಶ ಕುರುಬ ಸಂಘ ಹಾಗು ಹಿಂದುಳಿದ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿದ್ದು, ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ಮಾಡಿದ್ದಾರೆ. ಇದೇ ವೇಳೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದ್ದು, ರಾಜ್ಯದಿಂದ ರಾಜ್ಯಪಾಲರನ್ನ ತೊಲಿಗಿಸಿ, ಕೇಂದ್ರ ಕೈಗೊಂಬೆ ಆದ ರಾಜ್ಯಪಾಲರನ್ನ ವಜಾ ಮಾಡುವಂತೆ ಆಗ್ರಹ ಮಾಡಿದ್ದಾರೆ.

ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಳೆ ಮೈಸೂರು – ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ. ಸಿಎಂ ಪರವಾಗಿ ಪ್ರತಿಭಟನೆ ಮಾಡಿದ್ದು, ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಕ್ಕೆ ಆಕ್ರೋಶಗೊಂಡಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್‌ನಿಂದ ಗೋ ಬ್ಯಾಕ್ ಚಳುವಳಿ ಮೂಲಕ ರಾಜ್ಯಪಾಲರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ. ಗೋ ಬ್ಯಾಕ್ ಗೋ ಬ್ಯಾಕ್ ಗವರ್ನರ್.. ಗೋ ಬ್ಯಾಕ್ ಗೌವರ್ನರ್‌‌ ಎಂದು ಘೋಷಣೆ ಕೂಗಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ದವೂ ಧಿಕ್ಕಾರ ಕೂಗಿದ್ದಾರೆ ಪ್ರತಿಭಟನಾಕಾರರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಗೌವರ್ನರ್ ಬಿಜೆಪಿ ಏಜೆಂಟ್ ರೀತಿ ವರ್ತನೆ ಮಾಡ್ತಿದ್ದಾರೆ. ಷಡ್ಯಂತ್ರ ಮಾಡಿ ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಕಾಂಗ್ರೆಸ್ ಅಸ್ಥಿರಗೊಳಿಸಲು ಬಿಜೆಪಿ -ಜೆಡಿಎಸ್ ಪ್ರಯತ್ನ ಮಾಡುತ್ತಿವೆ ಎಂದು ದೂರಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಮಾಡಲಾಗಿದೆ. ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ ಕಾಂಗ್ರೆಸ್ ಕಾರ್ಯಕರ್ತರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿ, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯಪಾಲರು ಬಿಜೆಪಿ ಹೈಕಮಾಂಡ್ ಕೈಗೊಂಬೆಯಂತೆ ನಡೆಯುತಿದ್ದಾರೆ. ಕೂಡಲೇ ರಾಷ್ಟ್ರಪತಿ ಮುರ್ಮು ಅವರು ರಾಜ್ಯಪಾರಲನ್ನು ವಜಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರ‌ ಒತ್ತಾಯ ಮಾಡಿದ್ದಾರೆ.

ಕೃಷ್ಣಮಣಿ

Tags: BJPCM Siddaramaiahcm siddaramaiah in muda scamcm siddaramaiah wife in muda scamCongress Partykarnataka cm siddaramaiahMuda Scammuda scam in karnatakamuda site allocation scammuda site scammuda site scam puts cm under the scannermulti crore scam in mudasiddaramaiahsiddaramaiah government scamsiddaramaiah muda scamsiddaramaiah newssiddaramaiah vs by vijayendra over muda scamsiddaramaiah wifeಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ₹4000 crore scam in muda
Previous Post

ಐಫೋನ್ ತಯಾರಕ ಫಾಕ್ಸ್‌ಕಾನ್ ಕಂಪನಿ ಮುಖ್ಯಸ್ಥರ ಜೊತೆ ಸಿಎಂ, ಡಿಸಿಎಂ ಚರ್ಚೆ

Next Post

20 ಕೋಟಿ ರೂಪಾಯಿ ಮೌಲ್ಯದ ಕೊಕೇನ್‌ ನೊಂದಿಗೆ ಕೀನ್ಯಾ ಮಹಿಳೆ ಬಂಧನ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post

20 ಕೋಟಿ ರೂಪಾಯಿ ಮೌಲ್ಯದ ಕೊಕೇನ್‌ ನೊಂದಿಗೆ ಕೀನ್ಯಾ ಮಹಿಳೆ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada