ಇಂದಿನ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಸುದೀರ್ಘ ನಿರ್ಣಯ ಪಾಸ್ ಮಾಡಲಾಗಿದೆ. ಈ ಸಭೆಯಲ್ಲಿ ರಾಜ್ಯಪಾಲರ ನೋಟಿಸ್ (Governer notice) ಕುರಿತು ನಿರ್ಣಯ ಪಾಸ್ ಮಾಡಲಾಗಿದ್ದು, ರಾಜ್ಯಪಾಲರು ತಮ್ಮ ನೋಟಿಸ್ ವಾಪಸ್ ಪಡೆಯಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯಪಾಲರ ನೋಟಿಸ್‌ಗೆ ಸಂಪುಟ ಸಭೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದು, ನೋಟಿಸ್‌ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಮುಡಾ ಹಗರಣದ (MUDA Scam) ಕುರಿತು ಬಿಜೆಪಿ (Bjp) ಸಿಎಂ ಸಿದ್ದರಾಮಯ್ಯ (Cm siddaramiah)| ವಿರುದ್ಧ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿತ್ತು. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯು ವಿರುದ್ಧ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದ ಹಿನ್ನಲೇ ರಾಜ್ಯಪಾಲರು ಈ ಬಗ್ಗೆ ಮುಖ್ಯಮಂತ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದರು.
ರಾಜ್ಯಪಾಲರ ಈ ನಡೆಯ ವಿರುದ್ಧ ಸಚಿವರು ಸಂಪುಟ ಸಭೆ ನಡೆಸಿ, ರಾಜ್ಯಪಾಲರ ನೋಟಿಸ್ ವಿರುದ್ಧ ನಿರ್ಧಾರ ಕೈಹೊಂಡಿದ್ದು, ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜ್ಯಪಾಲರ ಭವನವನ್ನು ಬಳಕೆ ಮಾಡಿಕೊಳ್ಳುತ್ತಿದ್ದೆ ಎಂದು ತೀರ್ಮಾನಿಸಿ, ರಾಜ್ಯಪಾಲರ ನೋಟಿಸ್ ಹಿಂಪಡೆಯಬೇಕು ಎಂದು ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.