
,ಬೆಂಗಳೂರು.ಮೈಸೂರು,: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಜೊತೆಗೆ ಮುಡಾ ಹಗರಣ ಸಹ ಕರ್ನಾಟಕದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಂಬಂಧ ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿವೆ.
ಇದರ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಹಗರಣದಲ್ಲಿ ಮಧ್ಯಪ್ರವೇಶ ಮಾಡಿದ್ದು, ಹಗರಣ ಸಂಬಂಧ ಸಂಪೂರ್ಣ ವಿವರ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರಿಗೆ ವರದಿ ಕೇಳಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಬಹುಕೋಟಿ ಹಗರಣ ಆರೋಪ ಕೇಳಿಬಂದಿದೆ. 50:50 ಅನುಪಾತದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ನಿಯಮಬಾಹಿರವಾಗಿ ನಿವೇಶಗಳನ್ನು ಹಂಚಿಕೆ ಮಾಡಿದೆ ಎಂದು ತಿಳಿದುಬಂದಿದೆ.
ಈ ಹಗರಣದಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬಸ್ಥರ ಹೆಸರು ಕೇಳಿಬಂದಿದೆ. ಹೀಗಾಗಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.