• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 31, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:“ರಾಜ್ಯಪಾಲರ ಹುದ್ದೆ ಸಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ADVERTISEMENT

ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು.

ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ “ರಾಜಭವನ ಚಲೋ” ಪ್ರತಿಭಟನೆ ಮೂಲಕ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು, ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಅರ್ಜಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

“ಲೋಕಾಯುಕ್ತ, ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ಆದರೆ ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ?” ಎಂದು ಹೇಳಿದರು.

“ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿ, ಮಾಜಿ ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಸಂಸ್ಥೆ ಮನವಿ ಮಾಡಿದ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ತೀರ್ಮಾನ ತೆಗೆದುಕೊಳ್ಳದೆ ಪಕ್ಷಪಾತ ಮಾಡಿದ್ದಾರೆ” ಎಂದು ಹೇಳಿದರು.

ನಾವ್ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯಪಾಲರ ಭವನ ರಾಜಕೀಯ ಕಚೇರಿ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ. ರಾಜ್ಯಪಾಲರ ಸ್ಥಾನ ನ್ಯಾಯಯುತವಾದ ಪೀಠ. ಸರ್ಕಾರವನ್ನು ರಚನೆ ಮಾಡುವ ಪೀಠ. ನ್ಯಾಯಾಲಯದ ಸ್ಥಾನಮಾನ ಹೊಂದಿರುವ ಪೀಠ. ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ” ಎಂದರು.

“ಸಿದ್ದರಾಮಯ್ಯ ಅವರ ಪ್ರಕರಣ ನ್ಯಾಯಾಲಯದಲ್ಲಿ ಇದ್ದು. ಅಲ್ಲಿ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ನಮ್ಮ ಈ ರಾಜಭವನ ಚಲೋ ಹೋರಾಟ ಸಿದ್ದರಾಮಯ್ಯ ಅವರ ಪ್ರಕರಣಕ್ಕೆ ಸಂಬಂಧಿಸಿಲ್ಲ. ನ್ಯಾಯಾಲಯದಲ್ಲಿ ತೀರ್ಮಾನವಾದ ನಂತರ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತೇವೆ” ಎಂದರು.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದೆ ಬೇರೆ ದಾರಿ ಇಲ್ಲ.

ರಾಜ್ಯಪಾಲರ ಸ್ಪಂದನೆಯಿಂದ ನ್ಯಾಯ ದೊರೆಯುತ್ತದೆ ಎನ್ನುವ ಭರವಸೆ ಮೂಡಿದೆಯೇ ಎಂದು ಕೇಳಿದಾಗ “ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ.ನಾವು ರಾಜ್ಯದ ಜನತೆಯ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಪಾಲರ ಬಳಿ ಪರ್ಯಾಯ ದಾರಿಗಳಿಲ್ಲ.ಅವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇಬೇಕು” ಎಂದರು.ಅರ್ಜಿಗಳು ಇತ್ಯರ್ಥ ಆಗಿದ್ದಾವೆ ಎಂದು ರಾಜ್ಯಪಾಲರು ನಿಮಗೆ ತಿಳಿಸಿದ್ದಾರೆಯೇ ಎಂದಾಗ “ಒಳಗಿನ ವಿಚಾರವನ್ನು ನಾನು ನಿಮ್ಮ ಬಳಿ ಚರ್ಚೆ ಮಾಡುವುದಿಲ್ಲ.ಅವರು ನನ್ನ ಬಳಿ ಯಾವುದೇ ಅರ್ಜಿಗಳಿಲ್ಲ ಎಂದು ಹೇಳಿದ್ದಾರೆ ಅದನ್ನು ನಾವು ಪರಿಶೀಲಿಸುತ್ತೇವೆ” ಎಂದರು.

Tags: Congress PartyDCM DK ShivakumarEnergy Minister KJ George
Previous Post

ಕೊರಿಯನ್ಸ್ ರೀತಿ ನಿಮ್ದು ಕೂಡ ಗ್ಲಾಸಿ ಸ್ಕಿನ್ ಆಗ್ಬೇಕಾ? ಹಾಗಿದ್ರೆ ತಪ್ಪದೇ ಈ ರೂಟೀನ್ ಫಾಲೋ ಮಾಡಿ.!

Next Post

ಇದೇ ಕಾರಣಕ್ಕೆ ತಪ್ಪದೆ ಮಾಯಿಶ್ಚರೈಸರ್ ಬಳಸಿ ಅನ್ನೋದು.!

Related Posts

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ
Top Story

ನಕಲಿ ಮತದಾರರ ಅರ್ಜಿ ಸಲ್ಲಿಸಿದರೆ ಕಾನೂನು ಕ್ರಮ: ಫಾರಂ 6, 6A, 7, 8 ಕುರಿತು ಕರ್ನಾಟಕ CEO ಖಡಕ್ ಸೂಚನೆ

by ಪ್ರತಿಧ್ವನಿ
October 1, 2026
0

ಬೆಂಗಳೂರು, ಅ.1: ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಅಥವಾ ತಪ್ಪು ಘೋಷಣೆ ನೀಡಿ ಅರ್ಜಿ ಸಲ್ಲಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ...

Read moreDetails
ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!

ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!

October 1, 2026
ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

ಕಾಕ್‌ಪಿಟ್‌ನಲ್ಲಿ ಚಾಕು ದಾಳಿ ನಡೆದಾಗ ಸ್ಮಿತ್ ಮಚ್ಚಾರ್ ಮಾಡಿದ್ದೇನು?ಸಾವಿನಂಚಿನಲ್ಲಿದ್ದ 174 ಪ್ರಯಾಣಿಕರು ಪಾರಾಗಿದ್ದು ಹೇಗೆ? 

October 1, 2026
₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

₹3 ಕೋಟಿ ಮೇಲ್ಪಟ್ಟ FDಗೆ ಹೊಸ ನಿಯಮ: ಅಕ್ಟೋಬರ್ 1ರಿಂದ ಬಲ್ಕ್ ಡೆಪಾಸಿಟ್ ಬಡ್ಡಿದರ ಪ್ರಕಟಣೆಯಲ್ಲಿ ಬದಲಾವಣೆ

October 1, 2026
Transfer of 49 Civil Police Inspectors in the State Police Department

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 49 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ |  Transfer

October 1, 2026
Next Post
ಇದೇ ಕಾರಣಕ್ಕೆ ತಪ್ಪದೆ ಮಾಯಿಶ್ಚರೈಸರ್ ಬಳಸಿ ಅನ್ನೋದು.!

ಇದೇ ಕಾರಣಕ್ಕೆ ತಪ್ಪದೆ ಮಾಯಿಶ್ಚರೈಸರ್ ಬಳಸಿ ಅನ್ನೋದು.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada