
ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಅಕ್ರಮ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಆ.19ರ ಸೋಮವಾರ ಕೋರ್ಟ್‍ನಲ್ಲಿ ಕೇವಿಯೆಟ್ ಅರ್ಜಿ ಸಲ್ಲಿಸುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸ್ಪಷ್ಟಪಡಿಸಿದ್ದಾರೆ.
ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ದೂರುದಾರರಾದ ಟಿ.ಜೆ.ಅಬ್ರಹಾಂ, ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಖುದ್ದು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಜಯವೆಂದು ಹೇಳುವುದಕ್ಕೆ ಆಗುವುದಿಲ್ಲ. ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದೇವೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1983 ಸೆಕ್ಷನ್ 17 ‘ಎ’ ಮತ್ತು ಭಾರತೀಯ ಸುರಕ್ಷಾ ಸಂಹಿತೆಯ 218 ಅಡಿ ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೋರ್ಟ್ ಅನುಮತಿ ಪಡೆದು ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲು ಮಾಡಿಸಲು ಹೋರಾಟ ನಡೆಸುತ್ತೇವೆ ಎಂದು ಹೇಳಿದರು .
ನಾನು ರಾಜಕೀಯವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಹೇಳುವುದಿಲ್ಲ. ಕಾನೂನು ಹೋರಾಟ ಮುಂದುವರೆಸುತ್ತೇನೆ. ಸೋಮವಾರ ಹೈಕೋರ್ಟ್‍ನಲ್ಲಿ ಕೇವಿಯಟ್ ಅರ್ಜಿ ಸಲ್ಲಿಸಲಾಗುವುದು’ ಎಂದು ಅಬ್ರಹಾಂ ಮಾಹಿತಿ ನೀಡಿದರು.
‘ಪ್ರಾಸಿಕ್ಯೂಷನ್‍ಗೆ ರಾಜ್ಯಪಾಲರ ಅನುಮತಿ ಪತ್ರ ತೆಗೆದುಕೊಂಡು ಕೋರ್ಟ್‍ಗೆ ಸಲ್ಲಿಸುತ್ತೇವೆ. ನಮ್ಮ ಹೋರಾಟಕ್ಕೆ ಜಯ ಸಿಕ್ಕಿದ್ದು, ಕಾನೂನು ಹೋರಾಟ ನಡೆಸುತ್ತೇವೆ. ಸಿಎಂ ಪತ್ನಿ ಸೇರಿದಂತೆ ಎಲ್ಲರಿಗೂ ಶಿಕ್ಷೆ ಕೊಡಿಸಲು ಮುಂದಾಗುತ್ತೇನೆ. ಸಿಎಂ ರಾಜೀನಾಮೆಗೆ ಒತ್ತಾಯಿಸುವುದಿಲ್ಲ. ಅವರೇ ನೈತಿಕವಾಗಿ ರಾಜೀನಾಮೆ ಕೊಟ್ಟರೆ ಅವರ ಗೌರವ ಹೆಚ್ಚಾಗಲಿದೆ’





