ಬೆಂಗಳೂರು : ನಿನ್ನೆಯಷ್ಟೇ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೂ ಸಹ ತಾಯಿಗೆ ಗೃಹಲಕ್ಷ್ಮೀ ಯೋಜನೆ ಸಿಗಲಿದೆ ಎಂದು ಹೇಳುವ ಮೂಲಕ ರಾಜ್ಯದ ಅನೇಕ ಮಹಿಳೆಯರಿಗೆ ರಿಲೀಫ್ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಬೇಕು ಎಂಭ ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ಇದೀಗ ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಗೆ ಮನೆ ಬಾಗಿಲಿಗೆ ಬರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಕಚೇರಿ ಅಲೆಯಬೇಕಿಲ್ಲ. ಸಿಬ್ಬಂದಿಯೇ ಬಂದು ನಿಮ್ಮ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಿಮ್ಮ ಮನೆ ಬಾಗಿಲಲ್ಲೇ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಟ್ಟು 1.30 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಾಗಿದ್ದು ಎಲ್ಲರ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನು ಕೇವಲ 2 ತಿಂಗಳಲ್ಲಿ ಪೂರ್ಣಗೊಳ್ಳಬೇಕಿದೆ.
