ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಡಳಿತದಲ್ಲಿ ಇದ್ದಾಗ ಬಡವರಿಗಾಗಿ ಹಾಗೂ ಯಾರು ಹೊಟ್ಟೆ ಹಸಿವಿಕೊಂಡು ಇರುಬಾರದು ಎಂದ ಉದ್ದೇಶದಿಂದ ರಾಜ್ಯದಲ್ಲಿ ಸಿದ್ದರಾಮಯ್ಯನವರು ಹಲವು ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಜನರಿಗಾಗಿ ತಂದರು. ಇಂದಿರಾ ಕ್ಯಾಂಟೀನ್ ತುಂಬಾ ಉಪಯ್ತಕವಾದ ಯೋಜನೆ ಇದು ಆದ್ರೆ ತುಂಬಾ ದಿನಗಳಿಂದ ಈ ಬಿಜೆಪಿನವರು ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಇಂದಿರಾ ಕ್ಯಾಂಟೀನ್ ಗಳ ಬಂದ್ ಮಾಡಲು ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ನಡೆಸಲು ಬಿಜೆಪಿ ಸರ್ಕಾರ ಕಳೆದ ಮೂರು ವರ್ಷಗಳಿಂದ ಉದ್ದೇಶಪೂರ್ವಕವಾಗಿಯೇ ಬಜೆಟ್ನಲ್ಲಿ ಹಣ ಮೀಸಲಿಡುತ್ತಿಲ್ಲ ಯಾಕೆ ಈ ರೀತಿ ಮಾಡುತ್ತಾ ಇದ್ದೆ ಬಡವರಿಗಾಗಿ ನಮ್ಮ ಕಾಂಗ್ರೆಸ್ ಪಕ್ಷ ತಂದಿದೆ ಆದ್ರೆ ನೀವು ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಮೀಸಲಿಡದೆ, ಬಡವರು ಮತ್ತು ದೀನ ದಲಿತರಿಗೆ ಆಹಾರ ನೀಡಲು ಸರ್ಕಾರ ಯಾವುದೇ ರೀತಿಯ ಹಣವನ್ನು ಮೀಸಲಿಡುತ್ತಿಲ್ಲ. ಇದೀಗ ಸರ್ಕಾರಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ವಲಸೆ ಕಾರ್ಮಿಕರು, ಗ್ರೂಪ್ ಡಿ ನೌಕರರು ಮತ್ತು ಬಡವರಿಗೆ ಸಾರ್ವಜನಿಕ ಕ್ಯಾಂಟೀನ್ನಲ್ಲಿ ಮೂರು ಹೊತ್ತಿನ ಊಟ ನೀಡಲು ವರ್ಷಕ್ಕೆ 100 ಕೋಟಿ ವಿನಿಯೋಗಿಸಲಾಗುವುದು ಎಂದು ಹೇಳಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಮಾಜಿ ವಿರೋಧ ಪಕ್ಷದ ನಾಯಕ ಎನ್ ಶಿವರಾಜ್ ಮಾತನಾಡಿ, ಯಾವುದೇ ಮೊಬೈಲ್ ಕ್ಯಾಂಟೀನ್ಗಳಿಲ್ಲ, ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್’ನ್ನು ಸರ್ಕಾರ ಬಂದ್ ಮಾಡಲಿದೆ.

ಬಿಬಿಎಂಪಿ ನೀಡಿರುವ ಮಾಹಿತಿಗಳ ಪ್ರಕಾರ, ಒಟ್ಟಾರೆಯಾಗಿ ನಗರದಲ್ಲಿ 174 ಇಂದಿರಾ ಕ್ಯಾಂಟೀನ್ ಗಳಿದ್ದು, 15 ಮೊಬೈಲ್ ಕ್ಕ್ಯಾಟೀನ್ ಗಳಿದ್ದವು. ಆದರೆ, ಇದೀಗ ಮೊಬೈಲ್ ಕ್ಯಾಂಟೀನ್ಗಳನ್ನು ಬಂದ್ ಮಾಡಲಾಗಿದೆ ಎಂದು ತಿಳಿಸಿದೆ. ಬಡವರು ಮತ್ತು ದೀನ ದಲಿತರಿಗೆ ಆಹಾರ ನೀಡಲು ಸರ್ಕಾರ ಯಾವುದೇ ರೀತಿಯ ಹಣವನ್ನು ಮೀಸಲಿಡುತ್ತಿಲ್ಲ. ಇದೀಗ ಸರ್ಕಾರಕ್ಕೆ ಜನರು ಇಂದಿರಾ ಕ್ಯಾಂಟೀನ್ ನಲ್ಲಿ ಯಾವುದೇ ರೀತಿಯಾಗಿ ಒಳ್ಳೆ ಊಟ ಹಾಗೂ ತಿಂಡಿ ಬಿಜೆಪಿ ಸರ್ಕಾರ ದಿಂದ ಬಡ ನಜನಿಗೆ ಅನ್ಯಾಯ ವಾಗುತ್ತಿದೆ ಜನರು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ಆರೋಪಸಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಕೂಡಲೇ ಸಾರ್ವಜನಿಕ ಕ್ಯಾಂಟೀನ್ಗಳನ್ನು ಬಡವರಿಗೆ ಸಮರ್ಪಿಸಲು ವಾರ್ಷಿಕ 100 ಕೋಟಿ ರೂ ಮೀಸಲಿಡುತ್ತೇವೆ. ಕೋವಿಡ್ ಸಮಯದಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಸುಮಾರು ಎರಡು ಲಕ್ಷ ಬಡವರಿಗೆ ನೀಡಲಾಗಿತ್ತು ಎಂಬುದನ್ನು ಸ್ಮರಿಸಬೇಕಿದೆ ಎಂದು ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಇಂದಿರಾ ಕ್ಯಾಂಟೀನ್ ಗಳನ್ನು ಬಂದ್ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇಂದಿರಾ ಕ್ಯಾಂಟೀನ್ ನಡೆಸಲು ಸರ್ಕಾರದಿಂದ ಪ್ರತ್ಯೇಕವಾಗಿ ಹಣ ಮಂಜೂರಾಗಿಲ್ಲ, ಪಾಲಿಕೆ ಇವುಗಳ ನಿರ್ವಹಣೆ ಮಾಡಬೇಕಿದೆ ಆದ್ರೆ ಕಡಿಮೆ ಇದ್ದ ಭಾಗಗಳಲ್ಲಿ ಕ್ಯಾಂಟೀನ್ ಬಂದ್ ಮಾಡಲಾಗಿದೆ ಎಂದರು. ಆದ್ರೆ ಕೈ ನಾಯಕರು ಇಂದಿರಾ ಕ್ಯಾಂಟೀನ್ ಮತ್ತೆ ನಾವು ಜನರಗಾಗಿ ಒಳ್ಳೆಯ ಯೋಜನೆ ಜೊತೆಗೆ ಆಧಿಕಾರಕ್ಕೆ ಬಂದ್ ಇಂದಿರಾ ಕ್ಯಾಂಟೀನ್ ಕಡೆ ಮುಖ ಮಾಡುವಂತೆ ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ .