• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದನ್ನು ತಪ್ಪಿಸಲು ಸರ್ಕಾರ ಸಾಮಾನ್ಯ ನಿಯಮಗಳನ್ನು ತಿರುಚುತ್ತಿದ್ದೆ – ಸಿದ್ದರಾಮಯ್ಯ

Any Mind by Any Mind
September 29, 2021
in ಕರ್ನಾಟಕ
0
ಇಡೀ ಸರ್ಕಾರ RSS ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ – ಸಿದ್ದರಾಮಯ್ಯ
Share on WhatsAppShare on FacebookShare on Telegram

ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ  ಕ್ರಮ ಸರಿಯಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ರಾಜ್ಯ ಸರ್ಕಾರವು ಷರತ್ತು ರಹಿತವಾಗಿ ಪ್ರಕೃತಿ ವಿಕೋಪ ನಿಯಮಗಳಡಿ ನೀಡುವ ಪರಿಹಾರದಂತೆಯೆ, ಕೋವಿಡ್‌ನಿಂದ ಮೃತಪಟ್ಟ ಎಲ್ಲರ ವಾರಸುದಾರರಿಗೂ ೫ ಲಕ್ಷ ರೂಪಾಯಿಗಳನ್ನು ಕಡ್ಡಾಯವಾಗಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್-19ರ ಎರಡೂ ಅಲೆಗಳಿಂದ ಕನಿಷ್ಠವೆಂದರೂ 4 ಲಕ್ಷ ಜನ ಮರಣ ಹೊಂದಿದ್ದಾರೆ. ಹಾಗಾಗಿ ಕುಟುಂಬಗಳಲ್ಲಿ ದುಡಿಯುವ ಸದಸ್ಯರುಗಳನ್ನು ಕಳೆದುಕೊಂಡು ಈ ಕುಟುಂಬಗಳು ಅನಾಥವಾಗಿವೆ.

ಅಸಂಖ್ಯಾತ ಕುಟುಂಬಗಳಲ್ಲಿ ತಂದೆ ತಾಯಿಯರಿಬ್ಬರನ್ನೂ ಕಳೆದುಕೊಂಡ  ಮಕ್ಕಳು ದಿಕ್ಕು ತೋಚದೆ ಕೂತಿದ್ದಾರೆ. ದುಡಿವ ಮಕ್ಕಳನ್ನು ಕಳೆದುಕೊಂಡ ವೃದ್ಧ ತಂದೆ ತಾಯಿಗಳು ತಬ್ಬಲಿಗಳಾಗಿದ್ದಾರೆ.

ಹಾಗಾಗಿ ಅಸಹಾಯಕರು ಸಣ್ಣ ಮಟ್ಟದ ಬದುಕು ಕಟ್ಟಿಕೊಳ್ಳಬೇಕಾದರೆ ನಾಗರಿಕವೆನ್ನಿಸಿಕೊಂಡ ಸರ್ಕಾರಗಳು ನೊಂದ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ವಿಪತ್ತು ನಿಧಿಯ ನಿಯಮಗಳ ಪ್ರಕಾರ ಪ್ರತಿ ಕುಟುಂಬಕ್ಕೆ ೫ ಲಕ್ಷ ರೂಪಾಯಿಗಳನ್ನಾದರೂ ಕೊಡಬೇಕು ಎಂದು ಒತ್ತಾಯಿಸಿದ್ದೆವು.

ಕೇಂದ್ರ ಸರ್ಕಾರ ದಿನಾಂಕ 14-3-2020 ರಂದು ಕೋವಿಡ್‌ನಿಂದ ಮರಣ ಹೊಂದಿದ ಪ್ರತಿ ವ್ಯಕ್ತಿಗೆ ೪ ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಬೇಕು ಎಂದು  ಆದೇಶ ಹೊರಡಿಸಿ ಅದೇ ದಿನ ಮಾರ್ಪಡಿಸಿಕೊಂಡಿದೆ.

ಸರ್ಕಾರಗಳು ಪ್ರಕೃತಿ ವಿಕೋಪದ ನಿಯಮಗಳಡಿ ಕೋವಿಡ್-19 ಸಾಂಕ್ರಾಮಿಕವನ್ನು ನಿರ್ವಹಿಸುತ್ತಿವೆ. ಪ್ರಕೃತಿ ವಿಕೋಪಗಳಾದ ಮಳೆ, ಗಾಳಿ, ಸಿಡಿಲು, ಗುಡುಗು, ಭೂ ಕುಸಿತ, ಭೂಕಂಪ ಮುಂತಾದವುಗಳಿಂದ  ಮರಣ ಹೊಂದಿದವರಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಲಾಗುತ್ತದೆ [ಕೇಂದ್ರ ೪ ಲಕ್ಷ, ರಾಜ್ಯ ಸರ್ಕಾರ-೧ ಲಕ್ಷ]. ಹಾಗಾಗಿ ಕೋವಿಡ್-೧೯ ನಿಂದ ಮರಣ ಹೊಂದಿದವರಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ಕೊಡಲೇಬೇಕೆಂದು ಒತ್ತಾಯಿಸಿದ್ದೆವು.

 ಆದರೆ ದಿನಾಂಕ; 28-9-2021 ರಂದು ಹೊರಡಿಸಿರುವ ಆದೇಶದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ಕುಟುಂಬಗಳ ದುಡಿಯುವ ವ್ಯಕ್ತಿ ಕೋವಿಡ್-19 ರಿಂದ ಮೃತ ಪಟ್ಟರೆ ರಾಜ್ಯದ ಸಂಧ್ಯಾ ಸುರಕ್ಷಾ ಯೋಜನೆಯಡಿ 1 ಲಕ್ಷ ರೂಪಾಯಿಗಳನ್ನು, ಕೇಂದ್ರ ಸರ್ಕಾರದಿಂದ 50 ಸಾವಿರ ರೂಪಾಯಿಗಳನ್ನು [ಬಿಪಿಎಲ್ ಅಲ್ಲದ ಕುಟುಂಬಗಳೂ ಸೇರಿದಂತೆ ಯಾರೆ ವ್ಯಕ್ತಿಯು ಕೋವಿಡ್ ನಿಂದ ಮೃತಪಟ್ಟರೆ] ನೀಡುವುದಾಗಿ ಆದೇಶ ಹೊರಡಿಸಲಾಗಿದೆ.

ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡುವುದರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಾಮಾನ್ಯ ನಿಯಮಗಳನ್ನು ತಮಗೆ ಬೇಕಾದಂತೆ ತಿರುಚಿಕೊಂಡು ನೊಂದ ಜನರಿಗೆ ದ್ರೋಹವೆಸಗಲಾಗುತ್ತಿದೆ.

ಕೋವಿಡ್ ಬಿಕ್ಕಟ್ಟು ತುಟ್ಟತುದಿಯಲ್ಲಿದ್ದಾಗ ಸಮರ್ಪಕವಾದ ಚಿಕಿತ್ಸಾ  ವ್ಯವಸ್ಥೆ ಮಾಡದೆ ಜನರು ಬೀದಿ ಬೀದಿಗಳಲ್ಲಿ ಮರಣ ಹೊಂದುವಂತಹ ಅರಾಜಕತೆಯನ್ನು ಸೃಷ್ಟಿಸಲಾಯಿತು. ಈಗ ಪರಿಹಾರ ನೀಡುವುದರಿಂದಲೂ ನುಣುಚಿಕೊಳ್ಳಲಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳ ಈ ನಿಲುವು ಮಾನವೀಯವೆನ್ನಿಸುವುದಿಲ್ಲ.

ಪ್ರಕೃತಿ ವಿಕೋಪ ನಿಯಮಗಳಲ್ಲಿ ಬಿಪಿಎಲ್ ಕುಟುಂಬಗಳ ದುಡಿಯುವ ವ್ಯಕ್ತಿಗಳು ಮೃತಪಟ್ಟರೆ ಮಾತ್ರ ಪರಿಹಾರ ನೀಡಬೇಕು ಎಂಬ ಷರತ್ತು ಎಲ್ಲೂ ಇರುವುದಿಲ್ಲ, ಹಾಗಾಗಿ ಕೋವಿಡ್- 19 ಸಾಂಕ್ರಾಮಿಕದಿಂದ ಯಾರೇ ವ್ಯಕ್ತಿ ಮೃತಪಟ್ಟರೂ ಸಹ ಅವರ ಕುಟುಂಬಗಳಿಗೆ ತಲಾ ೫ ಲಕ್ಷ ರೂಪಾಯಿಗಳನ್ನು ನೀಡಬೇಕು.

ಪ್ರಕೃತಿ ವಿಕೋಪ ನಿಯಮಗಳಲ್ಲಿ, ವಿಕೋಪಗಳಿಂದ ಮರಣ ಹೊಂದಿದ ಪ್ರತಿಯೊಬ್ಬರಿಗೂ ಪರಿಹಾರ ನೀಡಬೇಕು ಎಂದಿದೆ.  ರಾಜ್ಯ ಸರ್ಕಾರ ಅದನ್ನು ತಿರುಚಿ ಯಾವುದೆ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದರೂ, ಆ ಕುಟುಂಬಕ್ಕೆ, ಅದರಲ್ಲೂ ಬಿ.ಪಿ.ಎಲ್ ಕಾರ್ಡು ಇದ್ದವರಿಗೆ ಮಾತ್ರ  ಕೇವಲ 1.5 ಲಕ್ಷ [ಕೇಂದ್ರ, ರಾಜ್ಯಗಳೆರಡೂ ಸೇರಿ] ರೂಪಾಯಿಗಳನ್ನು ನೀಡಲಾಗುವುದೆಂದು ಹೇಳಲಾಗಿದೆ. ಇದು ಸರಿಯಲ್ಲ.

ರಾಜ್ಯ ಸರ್ಕಾರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ನೀಡಲಾಗುವ ಪರಿಹಾರದ ನಿಯಮಗಳಂತೆ ಕೇಂದ್ರ ಸರ್ಕಾರವು ಹಣವನ್ನು ಬಿಡುಗಡೆ ಮಾಡಬೇಕೆಂದು ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ರಾಜ್ಯ ಸರ್ಕಾರ ಕೇಂದ್ರವನ್ನು ಆಗ್ರಹಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Tags: BJPCongress PartyCovid 19covid19ಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆಧಾರ್-ವೋಟರ್ ಐಡಿ ಲಿಂಕಿಂಗ್: ಚುನಾವಣಾ ಆಯೋಗದ ಅಪಾಯಕಾರಿ ನಡೆ, ಹಿಂದಿದೆ ಮೋದಿ ಸರ್ಕಾರದ ತಂತ್ರ!

Next Post

ಪಕ್ಷದ ನಾಯಕತ್ವವನ್ನು ನಿಂದಿಸಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ ಅವರ ನಿವಾಸದ ಮುಂದೆ ಯೂತ್ ಕಾಂಗ್ರೆಸ್ ಪ್ರತಿಭಟನೆ

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಪಕ್ಷದ ನಾಯಕತ್ವವನ್ನು ನಿಂದಿಸಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ  ಅವರ ನಿವಾಸದ ಮುಂದೆ ಯೂತ್ ಕಾಂಗ್ರೆಸ್ ಪ್ರತಿಭಟನೆ

ಪಕ್ಷದ ನಾಯಕತ್ವವನ್ನು ನಿಂದಿಸಿದ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ವಿರುದ್ಧ ಅವರ ನಿವಾಸದ ಮುಂದೆ ಯೂತ್ ಕಾಂಗ್ರೆಸ್ ಪ್ರತಿಭಟನೆ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!