• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಲುಷಿತ ನೀರು ಸೇವನೆಯಿಂದ ಮರಣ ಸಂಭವಿಸಿದರೆ ಜಿ.ಪಂ ಸಿಇಒ ಅಮಾನತು: ಸಿದ್ದರಾಮಯ್ಯ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in Top Story, ಕರ್ನಾಟಕ, ರಾಜಕೀಯ
0
ಕಲುಷಿತ ನೀರು ಸೇವನೆಯಿಂದ ಮರಣ ಸಂಭವಿಸಿದರೆ ಜಿ.ಪಂ ಸಿಇಒ ಅಮಾನತು: ಸಿದ್ದರಾಮಯ್ಯ ಎಚ್ಚರಿಕೆ
Share on WhatsAppShare on FacebookShare on Telegram

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ   ಪ್ರಕರಣಗಳು ಮರುಕಳಿಸಿದರೆ  ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ADVERTISEMENT

   ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ  ಕುಡಿಯುವ ನೀರಿನ ಸಮಸ್ಯೆ ಕುರಿತಂತೆ  ಸಭೆಯಲ್ಲಿ ಅವರು ಮಾತನಾಡಿದರು.

15 ದಿನಗಳಲ್ಲಿ ವರದಿ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ  ಕುಡಿಯುವ ನೀರಿನ ಪೈಪ್  ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು. 

 ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ   ಸಾವಿಗೀಡಾಗಿದ್ದು, ಚಿತ್ರ ದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ನಾಲ್ಕು ಇಲಾಖೆಗಳ ನಡುವೆ ಸಮನ್ವಯ

ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಒಬ್ಬರು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ  ಇಂಥ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ – ಈ  ನಾಲ್ಕು ಇಲಾಖೆಗಳು ಸಮನ್ವಯದಿಂದ  ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

 ಹಾಸ್ಟೆಲ್ ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ . ಈ ಬಗ್ಗೆ     ಸಮರೋಪಾದಿಯಲ್ಲಿ ಕೆಲಸಗಳಾಗಬೇಕು ಎಂದರು.

ಟ್ಯಾಂಕ್ ಗಳ ಸ್ವಚ್ಛತಾ ಕಾರ್ಯ

. ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು ಎಂದು ಆರೋಗ್ಯ ಸಚಿವರು ಅಭಿಪ್ರಾಯ ಪಟ್ಟರು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ  ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

39 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ  ಎಂದು ಗ್ರಾಮೀಣಾಭಿವೃದ್ಧಿ ಸಚಿವರು ಸಭೆಯ ಗಮನಕ್ಕೆ ತಂದರು.

ಸ್ವಚ್ಛತೆಯ ಬಗ್ಗೆ ಜಾಗೃತಿ

ಎಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ನೀರಿನ ಸ್ವಚ್ಛತೆ ಬಗ್ಗೆ ಆದ್ಯತೆ ವಹಿಸಿ ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಸ್ವಚ್ಛತೆಯ ಬಗ್ಗೆ ಜನರಲ್ಲಿ  ಜಾಗೃತಿ ಮೂಡಿಸಬೇಕು ಎಂದರು.

ಆರೋಗ್ಯ ಸಚಿವ ಗುಂಡೂ ರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ  ರಹೀಮ್ ಖಾನ್,  ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: siddaramaiah
Previous Post

ಎನ್ಇಪಿ ರದ್ದು ಮಾಡಿದರೆ ಜನಾಂದೋಲನವಾಗಲಿದೆ: ಬಸವರಾಜ ಬೊಮ್ಮಾಯಿ

Next Post

ಭಾರತದ ನಾಗರಿಕತೆಯ ಪ್ರಾಚೀನತೆ: ವಿದೇಶಿ ತಜ್ಞರ ದೃಷ್ಟಿಕೋನ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಭಾರತದ ನಾಗರಿಕತೆ

ಭಾರತದ ನಾಗರಿಕತೆಯ ಪ್ರಾಚೀನತೆ: ವಿದೇಶಿ ತಜ್ಞರ ದೃಷ್ಟಿಕೋನ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada