ಮಂಡ್ಯ : 5 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆಯು ಮಂಡ್ಯ ತಾಲೂಕಿನ ಬೇಲೂರು ಗ್ರಾ, ಪಂಚಾಯ್ತಿಯಲ್ಲಿ ನಡೆದಿದೆ. ಇ ಸ್ವತ್ತು ಖಾತೆ ಮಾಡಿಕೊಳ್ಳಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಹೆಚ್ಚು ಓದಿದ ಸ್ಟೋರಿಗಳು

ಬೇಲೂರು ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ದಯಾನಂದ್ ಬಂಧಿತ ಆರೋಪಿ. ಲಂಚದ ರೂಪದಲ್ಲಿ ಸ್ವೀಕರಿಸಿದ್ದ 5 ಸಾವಿರ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮಂಡ್ಯದ ಮಂಜುನಾಥ್ ಎಂಬವರ ಮನೆ , ಖಾಲಿ ನಿವೇಶನ ಇ – ಸ್ವತ್ತು ಮಾಡಿಕೊಡಲು 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಲಂಚದ ರೂಪದಲ್ಲಿ ಐದು ಸಾವಿರ ರೂಪಾಯಿ ಮುಂಗಡ ಹಣ ಪಡೆಯುತ್ತಿದ್ದ ವೇಳೆಯಲ್ಲಿ ಗ್ರಾಮ ಪಂಚಾಯ್ತಿ ಕಾರ್ಯದರ್ಶ ದಯಾನಂದ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ.