ರಾಜ್ಯದ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಸುಮಾರು 1 ಕೋಟಿ 10 ಲಕ್ಷ ಮನೆ ಯಜಮಾನಿಯರು ಈ ಯೋಜನೆಯ ಲಾಭ ಪಡೆದುಕೊಳ್ಳಲಿದ್ದಾರೆ.

ಇನ್ನು ಈ ಯೋಜನೆಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗುವುದರಿಂದ ಯೋಜನೆಯ ಜಾರಿಗಾಗಿ ಸಾಕಷ್ಟು ಮನೆಯ ಯಜಮಾನಿಯರು ಕಾತುರದಿಂದ ಕಾದು ನೋಡುತ್ತಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು ಮೈಸೂರಿನಂತಹ ಪ್ರಮುಖ ನಗರ ಪ್ರದೇಶಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಹೆಚ್ಚಾಗಿದೆ

ಹೌದು…ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒಟ್ಟು 6.16 ಲಕ್ಷ ಮಂದಿ ಗೃಹಲಕ್ಷ್ಮಿ ಯೋಜನೆಗೆ ಮಹಿಳಾ ಫಲಾನುಭವಿಗಳು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಮೈಸೂರಿನಲ್ಲಿ ಸರ್ಕಾರ ಯೋಜನೆಗೆ ಚಾಲನೆ ನೀಡುತ್ತಿದ್ದರೆ, ನಗರದ 1.6 ಲಕ್ಷ ಮಹಿಳಾ ಫಲಾನುಭವಿಗಳಿಗೆ 2 ಸಾವಿರ ಅವರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಈ ಕುರಿತು ಮಹಿಳಾ ಫಲಾನುಭವಿಗಳ ಮೊಬೈಲ್ ಸಂಖ್ಯೆ ಸಂದೇಶ ರವಾನೆ ಆಗಲಿದೆ ಎಂದು ಬೆಂಗಳೂರು ನಗರ ಹಾಗೂ ಬಿಬಿಎಂಪಿ ವ್ಯಾಪ್ತಿಯ ಗೃಹಲಕ್ಷ್ಮಿ ಯೋಜನೆಯ ನೋಡಲ್ ಅಧಿಕಾರಿ ಲಕ್ಷ್ಮೀ ಮಾಹಿತಿ ನೀಡಿದ್ದಾರೆ.