ಬೀದರ: ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರು ಅಥಾವಾ ಲಿಂಗತ್ವ ಅಲ್ ಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನೆ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ National Portal for Transgender Persons ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪ ಸಂಖ್ಯಾತರ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ.
ಪ್ರಯುಕ್ತ ಜುಲೈ.8 ರಿಂದ ಲಿಂಗತ್ವ ಅಲ್ಪ ಸಂಖ್ಯಾತರು ಪ್ರಸ್ತುತ ವಾಸವಾಗಿರುವ ಜಿಲ್ಲೆಯ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕಚೇರಿಗೆ ತೆರಳಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್ ಜೆಂಡರ್ ಗುರುತಿನ ಚೀಟಿ, ಪಾಸ್ಪೋರ್ಟ ಸೈಜ್ ಪೋಟೋ ಮತ್ತು ಆಧಾರ್ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೈಲೂರ ಬೀದರ ಜಿಲ್ಲೆ ಹಾಗೂ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಮೈಲೂರ ಬೀದರ ದೂರವಾಣಿ ಸಂಖ್ಯೆ: 9880899271 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.