
ಬೆಳಗಾವಿ:ರಾಜ್ಯ ಕಾಂಗ್ರೆಸ್ ಸರ್ಕಾರದ (Congress Governament) ಮಹತ್ವಾಕಾಂಕ್ಷಿಯ ಯೋಜನೆಯಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಿಂದಾಗಿ (Gruha Lakshmi Scheme) ಲಕ್ಷಾಂತರ ಬಡವರು ಅದರ ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು.
ಇನ್ನೂ ಈ ಮಹಿಳೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಅಭಿನಂದನೆ ಸಲ್ಲಿಸಿದ್ದಾರೆ.ಇದೀಗ ಅಂತಹದ್ದೇ ಘಟನೆಯೊಂದು ಬೆಳಗಾವಿಯಲ್ಲಿ ಮರುಕಳಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿ ಎಂಬಅತನಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ.
ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ. ‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ.
ಮಹಾನವಮಿ ಅಕ್ಟೋಬರ್ 11ರಂದು ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ ಖುಷಿಯಾಗಿದೆ. ತಾಯಿ -ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಶ್ರೀಮತಿ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಹಣ ಕೂಡಿಟ್ಟು, ತನ್ನ ಮಗನಾದ ಶ್ರೀ ರಮೇಶ ನೀಲಪ್ಪ ಸಣ್ಣಕ್ಕಿ ಯವರಿಗೆ ದ್ವಿಚಕ್ರ ವಾಹನ ಖರೀದಿಸಲು ಮುಂಗಡ ಹಣ ನೀಡಿರುವ ಸುದ್ದಿ ಕೇಳಿ ಮನಸ್ಸಿಗೆ ಖುಷಿ ತಂದಿದೆ.
— Laxmi Hebbalkar (@laxmi_hebbalkar) October 10, 2024
'ಗೃಹಲಕ್ಷಿ' ಯೋಜನೆಯ ಹಣ ಇಂದು… pic.twitter.com/4SCLrbU0cf