ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ (Gruha Laxmi Yojana)ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ (Two months)ಹಣ ಒಟ್ಟಿಗೆ ಖಾತೆಗೆ( account) ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. (2 Monthly dues)ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ ಮಾಡಲಾಗುವುದು. ಗೃಹಲಕ್ಷ್ಮಿ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಬರದಿರುವ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.