• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
November 18, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು.  ತುಮಕೂರು ಜಿಲ್ಲಾ ಮಟ್ಟದ ಪೂರ್ವ ಭಾವಿ ಸಭೆಯಲ್ಲಿ ಸಚಿವರ ಕರೆ

ADVERTISEMENT

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಪರಮೇಶ್ವರ್ ಸಹಕಾರ ಸ್ಮರಿಸಿದ ಸಚಿವರು
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ತುಮಕೂರಿನವರೇ ಆದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಸಹಕಾರದಿಂದ ಇಂದು ನಾನು ಸಚಿವೆಯಾಗಿರುವೆ. ಪರಮೇಶ್ವರ್ ಅವರು ನನಗೆ ನಾಲ್ಕು ಬಾರಿ ಬಿ ಫಾರ್ಮ್ ಕೊಟ್ಟಿದ್ದಾರೆ. ಅವರ ಸಹಕಾರವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಸಚಿವರು ಸ್ಮರಿಸಿದರು.‌

ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ ತರಬೇಕು, ಶಿಸ್ತು ತರಬೇಕು ಅಂತ ಕೆಲಸ ಮಾಡುತ್ತಿರುವೆ. ಎಲ್ಲರ ಸಹಕಾರದಿಂದ ಇಂದು ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದೆ. ಮೊದಲು ಕೆಡಿಪಿ ಸಭೆಗಳಲ್ಲಿ ನಮ್ಮ ಇಲಾಖೆ ಚರ್ಚೆ ಕೊನೆಯಲ್ಲಿ ಇರುತ್ತಿತ್ತು, ಈಗ ಗೃಹಲಕ್ಷ್ಮಿ ಯೋಜನೆ ಬಂದ್ಮೇಲೆ ಮೊದಲ ಸ್ಥಾನದಲ್ಲಿದೆ ಎಂದರು.

ಎಫ್ ಆರ್ ಎಸ್ ಸಿಸ್ಟಮ್ ನಲ್ಲಿ ಶೇಕಡ 99ರಷ್ಟು ಜಾರಿಗೆ ತಂದ ಕೀರ್ತಿ ತುಮಕೂರಿಗೆ ಸಲ್ಲುತ್ತದೆ. ಕರ್ನಾಟಕ ಯಾವತ್ತು ಮಾಡೆಲ್ ಆಗಿಯೇ ಕೆಲಸ ಮಾಡುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಕಾರಣ. ತುಮಕೂರಿನಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ನಾಲ್ಕು ಷೇರುದಾರರನ್ನು ನೋಂದಾಯಿಸಬೇಕು ಎಂದು ಸಚಿವರು ಕರೆ ನೀಡಿದರು.

ನಮ್ಮ ಇಲಾಖೆ ಸಾಮಾಜಿಕ ಬದ್ಧತೆಯ ಜೊತೆಗೆ ಮನುಷ್ಯತ್ವವನ್ನು ಕೊಡುತ್ತದೆ. ಅನುಕಂಪದಿಂದ ಹೃದಯದಿಂದ ಕೆಲಸ ಮಾಡುತ್ತೇವೆ, ಅದಕ್ಕಾಗಿ ಮಹಿಳೆಯರಿಗೆ ‌ಈ ಇಲಾಖೆಯನ್ನು ಕೊಡಲಾಗಿದೆ.‌ ಕೇಂದ್ರದಲ್ಲಿ ಎನ್ ಡಿಎ ಸರ್ಕಾರವಿದ್ದರೂ ಕೇಂದ್ರದಿಂದ ಅತಿಹೆಚ್ಚು ಅನುದಾನ ತಂದಿರುವುದು ನಾನು. ಪ್ರತಿಯೊಂದು ಗ್ರಾಮದಲ್ಲಿ ಅಂಗನವಾಡಿ ಕಟ್ಟಡಗಳನ್ನು ಕಟ್ಟಲಾಗಿದೆ ಎಂದರು.

ಖಾಸಗಿ ನರ್ಸರಿಗಳಿಗೆ ಸಾವಿರಾರು ರೂಪಾಯಿ ಕಟ್ಟಬೇಕು. ಬಡ ಮಕ್ಕಳಿಗೆ ತಳಹದಿಯಲ್ಲಿ ಉತ್ತಮ ಶಿಕ್ಷಣ ನೀಡುವ ಸಲುವಾಗಿ ನಮ್ಮ ಇಲಾಖೆಯಿಂದಲೇ ಎಲ್ ಕೆಜಿ ಯುಕೆಜಿ ಆರಂಭಿಸಲಾಗುತ್ತಿದೆ. ನಮ್ಮ ಇಲಾಖೆಯಲ್ಲಿ 15000 ಕಾರ್ಯಕರ್ತೆಯರು ಪದವೀಧರಾಗಿದ್ದಾರೆ. ಇವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಅಕ್ಕಪಡೆ ಆರಂಭಿಸಲಾಗುತ್ತಿದ್ದು, ಗಸ್ತು ವಾಹನದಲ್ಲಿ 5 ರಿಂದ 10 ಮಹಿಳೆಯರು ‌ಇರ್ತಾರೆ, ಇಬ್ಬರು ಮಹಿಳಾ ಪೊಲೀಸರು ಇರಲಿದ್ದಾರೆ. ಒಟ್ಟು 31 ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ಹೇಳಿದರು.

ಮಹಿಳೆಯರ ಸಬಲೀಕರಣಕ್ಕೆ ಸ್ತ್ರೀ ಶಕ್ತಿ ನಾಂದಿ
ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮೋಟಮ್ಮ ಅವರು ಸಚಿವರಾಗಿದ್ದಾಗ ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಇದೀಗ ನನ್ನ ಹೃದಯಕ್ಕೆ ಹತ್ತಿರವಾಗಿರುವ ಗೃಹಲಕ್ಷ್ಮಿ ಬ್ಯಾಂಕ್ ತರಲಾಗುತ್ತಿದೆ ಎಂದರು.

ಈ ಹಿಂದೆ ಗಂಡನ ಉದ್ಯಮದಲ್ಲಿ ಹೆಂಡತಿ ಕೈಜೋಡಿಸುತ್ತಿದ್ದಳು. ಆದರೆ, ಇತ್ತೀಚೆಗೆ ಮಹಿಳೆಯರೆ ಉದ್ಯಮಿಗಳಾಗುತ್ತಿದ್ದಾರೆ. ಇಂತಹ ಮಹಿಳೆಯರಿಗೆ ‌ಸಹಾಯ‌ ಮಾಡುವ ಉದ್ದೇಶದಿಂದಲೇ ಗೃಹಲಕ್ಷ್ಮಿ ಬ್ಯಾಂಕ್ ಆರಂಭಿಸಲಾಗುತ್ತಿದೆ. ಧರ್ಮಸ್ಥಳ ಸ್ವ ಸಹಾಯ ಸಂಘ ಕಳೆದ 20 ವರ್ಷಗಳಿಂದ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಅವರ ಸೇವೆ ಸದಾ ಸ್ಮರಣೀಯ. ಆದರೆ ಕೆಲವೊಂದು ಖಾಸಗಿ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಗೃಹಲಕ್ಷ್ಮಿ ಸಂಘ‌ ಸಹಾಯವಾಗಲಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮಿ ಸಂಘಕ್ಕೆ ಸೇರ ಬಯಸುವವರಿಗೆ ಯಾವುದೇ ಒತ್ತಡ ಇಲ್ಲ. ಬ್ಯಾಂಕ್ ಗೆ ಸೇರ ಬಯಸುವವರು ಸಾವಿರ ರೂಪಾಯಿ ಕೊಟ್ಟು ಶೇರ್ ಹೋಲ್ಡರ್ ಆಗಬೇಕು. ಸಂಪೂರ್ಣ ಕ್ಯಾಶ್ ಲೆಸ್ ವ್ಯವಹಾರ ನಡೆಯಲಿದ್ದು, ಷೇರುದಾರರಾದ ಬಳಿಕ ಪ್ರತಿ ತಿಂಗಳು ಇನ್ನೂರು ರೂಪಾಯಿ ಕಟ್ಟಬೇಕು, ಆರು ತಿಂಗಳಲ್ಲಿ ‌ಲೋನ್ ಪಡೆಯಬಹುದು, ಮೂವತ್ತು ಸಾವಿರದಿಂದ ಮೂರು ಲಕ್ಷದವರೆಗೂ ಸಾಲ ನೀಡಲಾಗುವುದು. ಗೃಹಲಕ್ಷ್ಮಿ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಮಾತ್ರ ನೀಡಲಾಗುವುದು, ಗುಂಪು, ಸಂಘಗಳಿಗೆ ಸಾಲ ನೀಡಲಾಗುವುದಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇದು ಇಡೀ ವಿಶ್ವದಲ್ಲೇ ದಾಖಲೆಯಾಗಿ ಉಳಿಯಲಿದೆ. ಬ್ಯಾಂಕ್ ಬಗ್ಗೆ ಇಂಥಹ ಪರಿಕಲ್ಪನೆಯನ್ನು ಇಟ್ಟುಕೊಂಡಿರುವೆ ಎಂದರು.

ಮುಂದೆ ಯಾವುದೇ ಸರ್ಕಾರಗಳು ಬಂದರೂ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಮುಚ್ಚುವ ಪ್ರಯತ್ನ ಮಾಡುವುದಿಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರಿಗೆ ಅನುಕೂಲ ಆಗುವ ದೃಷ್ಟಿಯಿಂದ ಬ್ಯಾಂಕ್ ತೆರೆಯಲಾಗುತ್ತಿದ್ದು, ಕೃಷಿ, ಹೈನುಗಾರಿಕೆ, ವಾಹನ, ‌ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ರೀತಿಯಲ್ಲಿ ಲೋನ್ ತೆಗೆದುಕೊಳ್ಳಬಹುದು ಎಂದರು.

ಗೌರವಧನ ಹೆಚ್ಚಳಕ್ಕೆ ಕ್ರಮ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ‌ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು‌ ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ತುಮಕೂರು ನಗರದ ಶಾಸಕ ಜ್ಯೋತಿ ಗಣೇಶ್, ಜಿಲ್ಲಾಧಿಕಾರಿ ‌ಶುಭಾ ಕಲ್ಯಾಣ್, ಗ್ಯಾರಂಟಿ ಯೋಜನೆಯ ವಿವಿಧ ತಾಲೂಕಿನ ಅಧ್ಯಕ್ಷರಾದ ಚಂದ್ರಶೇಖರ್, ವೆಂಕಟೇಶ್ ಮೂರ್ತಿ, ಚಂದ್ರಕಲಾ, ಕುಮುದಾ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಸಿದ್ದರಾಮಣ್ಣ, ನಿರೂಪಣಾಧಿಕಾರಿ ಅಂಬಿಕಾ, ಇಲಾಖೆಯ ಅಧಿಕಾರಿಗಳು, ನೂರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪಾಲ್ಗೊಂಡಿದ್ದರು.. ‌

 

Tags: Lakshmi hebbalkarlakshmi hebbalkar addresslakshmi hebbalkar brotherlakshmi hebbalkar car accidentlakshmi hebbalkar congress newslakshmi hebbalkar cricketlakshmi hebbalkar dancelakshmi hebbalkar dancinglakshmi hebbalkar interviewlakshmi hebbalkar latest newslakshmi hebbalkar livelakshmi hebbalkar newslakshmi hebbalkar press meetlakshmi hebbalkar speechlakshmi hebbalkar statementlakshmi hebbalkar today newslakshmi hebbalkar videoMinister Lakshmi Hebbalkar
Previous Post

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

Next Post

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada