• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in Top Story
0
ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Share on WhatsAppShare on FacebookShare on Telegram

ಬೆಂಗಳೂರು :

ADVERTISEMENT

ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಬಹಳ ದಿನಗಳ ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಜಿಟಿ ದೇವೇಗೌಡ, ಕೆಲ ಕಾಲ ಮಾತುಕತೆ ನಡೆಸಿದರು. ಜೆಡಿಎಸ್‌ನಿಂದ ದೂರವಾಗಿದ್ದಾರೆ ಹಾಗೂ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ ಎಂಬ ಸುದ್ದಿಗಳ ನಡುವೆಯೇ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

 

ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಟಿ ದೇವೇಗೌಡ, “ದೇವೇಗೌಡರು ದೇಶದ ಪ್ರಖ್ಯಾತ ನಾಯಕರು. ರೈತರ ಪರವಾಗಿ ಕೆಲಸ ಮಾಡಿದವರು. ಅವರ ಬಗ್ಗೆ ಅಪಾರ ಗೌರವ ಇದೆ. ಅವರು ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ” ಎಂದು ಹೇಳಿದರು.

ಜೆಡಿಎಸ್‌ನಿಂದ ದೂರವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಇನ್ನೂ ಜನತಾದಳದಲ್ಲೇ ಇದ್ದೇನೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.

 

ಜಿಟಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಮಧ್ಯೆ ಕಳೆದ ಕೆಲವು ತಿಂಗಳಿಂದ ಅಸಮಾಧಾನ ಮುಂದುವರಿದಿತ್ತು. ಪಕ್ಷದ ಕಾರ್ಯಚಟುವಟಿಕೆಗಳಿಂದ ಜಿಟಿಡಿ ದೂರ ಉಳಿದಿದ್ದು, ಇಬ್ಬರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು.ಜಿಟಿಡಿ ವಿರುದ್ಧ ಕುಮಾರಸ್ವಾಮಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. “ಅವರು ನಮ್ಮ ಜೊತೆ ಇಲ್ಲ. ಪಕ್ಷದ ಬಗ್ಗೆ ನಿಷ್ಠೆ ಇಲ್ಲದವರನ್ನು ನಮ್ಮ ಜೊತೆ ಇಟ್ಟುಕೊಳ್ಳಬೇಕಾ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಜಿಟಿ ದೇವೇಗೌಡ ಕೂಡ ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದರು.

 

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿಟಿಡಿಯನ್ನು ಬದಲಿಸಿ ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿಗೆ ಜವಾಬ್ದಾರಿ ನೀಡಿದ್ದೇ ಅಸಮಾಧಾನಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಯ ಬಳಿಕ ಜಿಟಿಡಿ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಈ ಹಿಂದೆ ಕೂಡ ಜಿಟಿಡಿ ಮುನಿಸು ತಣಿಸಲು ಸ್ವತಃ ದೇವೇಗೌಡರು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದೀಗ ಮತ್ತೊಮ್ಮೆ ದೇವೇಗೌಡರ ಭೇಟಿಯಾದ ಜಿಟಿ ದೇವೇಗೌಡ, ಜೆಡಿಎಸ್‌ನಲ್ಲೇ ಮುಂದುವರಿಯುವುದಾಗಿ ಘೋಷಿಸಿರುವುದು ಪಕ್ಷದ ಒಳರಾಜಕೀಯಕ್ಕೆ ಹೊಸ ತಿರುವು ನೀಡಿದಂತಾಗಿದೆ.

Tags: breaking political newsGT DevegowdaKarnataka leadersKarnataka PoliticsPolitical developmentsPolitical Strategypolitical twistpolitical visitpratidavaniregional politicsstate politics
Previous Post

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

Related Posts

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು
Top Story

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

by ಪ್ರತಿಧ್ವನಿ
May 15, 2026
0

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದರೂ, ಈ ತೀರ್ಪು ಮುಂದಿನ ದಿನಗಳಲ್ಲಿ ದರ್ಶನ್ ಪರವಾಗಿಯೇ ಕೆಲಸ ಮಾಡುವ...

Read moreDetails
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada