ಮೈಸೂರಿನ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರಿಗೆ ಕಾಂಗ್ರೆಸ್ ಬಾಗಿಲು ಬಂದ್ ಆಗಿರುವ ಸಾಧ್ಯತೆ ಇದ್ದು, ಇದರಿಂದ ಜಿ.ಟಿ.ದೇವೇಗೌಡರು ಕಾಂಗ್ರೆಸ್ ಸೇರುವ ಯತ್ನದಿಂದ ಯೂ ಟರ್ನ್ ಹೊಡೆದಿದ್ದಾರೆ.
ಕಾಂಗ್ರೆಸ್ ಸೇರುವೆ ಎಂದು ತುದಿಗಾಲಲ್ಲಿ ನಿಂತಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಎಂದೂ ನನಗೆ ಆಫರ್ ಕೊಟ್ಟಿಲ್ಲ. ಆದರೆ ಬಿಜೆಪಿಗೆ ಹೋಗಬೇಡ ಎಂದಷ್ಟೆ ಸಲಹೆ ನೀಡಿದ್ದರು ಎಂದು ಸ್ಪಷ್ಟಪಡಿಸಿದರು.
ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ಮೂರು ತಿಂಗಳಲ್ಲಿ ನಿರ್ಧಾರ ಮಾಡುತ್ತೇನೆ ಎಂದು ಅವರು ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿರುವ ಕಾರಣ ಮತ್ತೆ ಇದೇ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅವರು ಈ ಕ್ಷೇತ್ರದಲ್ಲಿ ನಿಲ್ಲಲು ಆತಂಕ ಪಡುತ್ತಿದ್ದಾರೆ. ಈ ಕಾರಣ ಗೆದ್ದು ಬರುವ ಸೇಫ್ ಪ್ಲೇಸ್ ಹುಡುಕುತ್ತಿದ್ದಾರೆ ಎಂದು ಜಿ.ಟಿ.ದೇವೇಗೌಡರು ಅಭಿಪ್ರಾಯಪಟ್ಟರು.