ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಜಿ.ಟಿ.ದೇವೇಗೌಡರ ಮೊಮ್ಮಗಳು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಜಿಟಿಡಿ ಪುತ್ರ ಎಂಸಿಡಿಸಿಸಿ ಅಧ್ಯಕ್ಷ ಹರೀಶ್ ಗೌಡರ ಪುತ್ರಿ ಗೌರಿ(3)ಯನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪುಟ್ಟ ಕಂದಮ್ಮ ಸಾವನಪ್ಪಿದೆ.
ಮೈಸೂರು ತಾಲ್ಲೂಕಿನ ಗುಂಗಾಲ್ ಛತ್ರ ಗ್ರಾಮದಲ್ಲಿ ಮಧ್ಯಾಹ್ಷ 12 ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರವನ್ನ ನೆರವೇರಿಸಲಾಯಿತ್ತು. ಇನ್ನು ಗೌರಿ ಸಾವಿಗೆ ರಾಜಕೀಯ ಕ್ಷೇತ್ರದ ಗಣ್ಯರು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.