ಗ್ಯಾರಂಟಿ ಯೋಜನೆಗಳಂತಹ ಕಾರ್ಯಕ್ರಮಗಳಿಂದ ಕರ್ನಾಟಕ ಆರ್ಥಿಕ ದಿವಾಳಿಯಾಗಲ್ಲ, ಮಹಿಳೆಯರ ಆರ್ಥಿಕ ಶಕ್ತಿ ಇನ್ನಷ್ಟು ಹೆಚ್ಚಾಗಲಿದೆ, ತಾಯಿ ಚಾಮುಂಡೇಶ್ವರಿ ಕೃಪೆಯಿಂದ ನಮಗೆ ಫಲ ಸಿಕ್ಕಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದ ಕಾರ್ಯಕ್ರಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ
ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ. ನಾವು ಘೋಷಿಸಿದಂತೆ ಗ್ಯಾರಂಟಿಗಳನ್ನ ಸರ್ಕಾರ ಅಧಿಕಾರಕ್ಕೆ ಬಂದ 100 ದಿನದೊಳಗೆ ಈಡೇರಿಸುತ್ತಿದ್ದೇವೆ
ರಾಜ್ಯದ ಮಹಿಳೆಯರು ಈಗ ಆರ್ಥಿಕ ಸ್ವಾತಂತ್ರ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಆರ್ಥಿಕವಾಗಿ ಮಹಿಳೆಯರು ಸಬಲೀಕರಣದತ್ತ ಹೆಜ್ಜೆಯನ್ನ ಇಡುತ್ತಿದ್ದಾರೆ ಇದು ಕಾಂಗ್ರೆಸ್ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು ನಮ್ಮ ಅಧಿಕಾರ ಅವಧಿಯಲ್ಲಿ ಅತ್ಯುತ್ತಮ ಜನಸೇವೆಯನ್ನು ಮಾಡುವಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ ಎಂದು ಕೆಲ ಮಾಧ್ಯಮಗಳಿಗೆ ಕೂಡ ಹೇಳಿಕೆಯನ್ನು ನೀಡಿದ್ದಾರೆ
ಇನ್ನು ಮೈಸೂರಿನಲ್ಲಿ ನಡೆಯುತ್ತಿರುವ ಗ್ರಹಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದ ಹಾಗೆ ಸರ್ಕಾರದ ಹಲವು ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು