ಉಡುಪಿ: ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಒತ್ತಾಯಿಸಿ ಕಾರಣವಿಲ್ಲದೇ ಮನಸೋ ಇಚ್ಛೆ ಬಸ್ಕಿ ಹೊಡೆಸಿರುವ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಕಾರ್ಕಳದ ಮೊರಾರ್ಜಿ ದೇಸಾಯಿ ಶಾಲೆಗೆ ಅತಿಥಿ ಶಿಕ್ಷಕರಾಗಿ ಬಂದ ಮದರಶಾ ಎಸ್.ಮಕಂದಾರ್, ವಿದ್ಯಾರ್ಥಿಗಳು ಕೈಗೆ ಕಟ್ಟಿರುವ ದಾರ ಹಾಗೂ ಧರಿಸಿದ್ದ ಜನಿವಾರದ ಬಗ್ಗೆ ಪ್ರಶ್ನಿಸಿ, ತೆಗೆಯುವಂತೆ ಒತ್ತಾಯಿಸಿದ್ದಾರೆ. ಜನಿವಾರ ಹಾಗೂ ದಾರ ತೆಗೆಯಲು ಒಪ್ಪದ ಮಕ್ಕಳಿಗೆ 200 ಬಸ್ಕಿ ಹೊಡೆಸಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ವಿಚಾರ ತಿಳಿಸಿದ್ದಾರೆ.

ಈ ಬಗ್ಗೆ ತಿಳಿದ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಗೆ ಜಮಾಯಿಸಿದ್ದು, ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಇನ್ನು ಪೋಷಕರೊಂದಿಗೆ ವಾದಕ್ಕಿಳಿದಿದ್ದ ಶಿಕ್ಷಕ, ಮಾತಿನ ಭರದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಕರ್ತವ್ಯದಿಂದ ಅಮಾನತು ಮಾಡಿದೆ.








