ಇತ್ತೀಚೆಗಷ್ಟೇ ಪುನರಾರಂಭಗೊಂಡಿರುವ ಗುಜರಾತ್ನ ಮೋರ್ಬಿಯಲ್ಲಿರುವ ತೂಗು ಸೇತುವೆ ಕುಸಿದು ಬಿದ್ದಿದ್ದು ಕನಿಷ್ಟ 132 ಮಂದಿ ಮೃತಪಟ್ಟಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಸೇತುವೆ ಕುಸಿಯುವಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು ಎಂದು ಮಾಧ್ಯಮಗಳ ವರದಿ ಹೇಳಿದೆ.
ಮೋರ್ಬಿ ತೂಗು ಸೇತುವೆಯು ಹಲವು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ದುರಸ್ತಿ ಮತ್ತು ನವೀಕರಣದ ನಂತರ, ಕೇವಲ ನಾಲ್ಕು ದಿನಗಳ ಹಿಂದೆ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಪುನರಾರಂಭಿಸಲಾಗಿತ್ತು.
ಇನ್ನು ಬಿಡ್ಜ್ ದುರಂತದ ಕುರಿತು ಸಂತಾಪ ಸೂಚಿಸಿರುವ ರಷ್ಟ್ರಪತಿ ದ್ರೌಪದಿ ಮುರ್ಮು ಮೃತರ ಆತ್ಮಕ್ಕೆ ಶಾಂತಿ ಕೋರಿ ಟ್ವೀಟ್ ಮಾಡಿದ್ದಾರೆ.
ಮೋರ್ಬಯಲ್ಲಿ ನಡೆದ ದುರಂತದಿಂದಾಗಿ ನಾನು ತೀವ್ರ ದುಃಖಿತನಾಗಿದ್ದೇನೆ ಮತ್ತು ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಅಲ್ಲಿನ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ
ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ಡ್ಯೂಬಾ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.