• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಜರಾತ್ | ಖಾಸಗಿ ಕಂಪನಿಯೊಂದರ ಸಂದರ್ಶನಕ್ಕೆ ಅಭ್ಯರ್ಥಿಗಳ ನೂಕುನುಗ್ಗಲು: ಕಳಚಿ ಬಿದ್ದ ರೇಲಿಂಗ್

ಪ್ರತಿಧ್ವನಿ by ಪ್ರತಿಧ್ವನಿ
July 12, 2024
in Top Story, ಇತರೆ / Others
0
ಗುಜರಾತ್ | ಖಾಸಗಿ ಕಂಪನಿಯೊಂದರ ಸಂದರ್ಶನಕ್ಕೆ ಅಭ್ಯರ್ಥಿಗಳ ನೂಕುನುಗ್ಗಲು: ಕಳಚಿ ಬಿದ್ದ ರೇಲಿಂಗ್
Share on WhatsAppShare on FacebookShare on Telegram

ಅಹಮದಾಬಾದ್: ದೇಶದಲ್ಲಿ ಬಿಗಡಾಯಿಸುತ್ತಿರುವ ನಿರುದ್ಯೋಗ ಸಮಸ್ಯೆಗೆ ಕನ್ನಡಿ ಹಿಡಿಯುವಂತೆ, ಗುಜರಾತ್‌ನ ಖಾಸಗಿ ಕಂಪನಿಯೊಂದು ಆಯೋಜಿಸಿದ್ದ 10 ಹುದ್ದೆಗಳಿಗಾಗಿನ ನೇಮಕಾತಿ ಸಂದರ್ಶನಕ್ಕೆ 1,800ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದು, ಈ ಸಂದರ್ಭದಲ್ಲಿ ಏರ್ಪಟ್ಟ ನೂಕುನುಗ್ಗಲಿನಲ್ಲಿ ಸಂದರ್ಶನ ಆಯೋಜಿಸಲಾಗಿದ್ದ ಹೋಟೆಲ್‌ನ ಮೆಟ್ಟಿಲಿನ ರೇಲಿಂಗ್ ಕಳಚಿ ಬಿದ್ದಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.ಗುಜರಾತ್‌ನ ಭರೂಚ್‌ನಲ್ಲಿರುವ ಖಾಸಗಿ ಕಂಪನಿಯೊಂದು 10 ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿತ್ತು.‌ ಹೋಟೆಲ್ ಒಂದರಲ್ಲಿ ಆಯೋಜನೆಗೊಂಡಿದ್ದ ಈ ಉದ್ಯೋಗ ನೇಮಕಾತಿ ಸಂದರ್ಶನಕ್ಕೆ 1,800ಕ್ಕೂ ಹೆಚ್ಚು ಅಭ್ಯರ್ಥಿಗಳು ಆಗಮಿಸಿದ್ದರು.

ADVERTISEMENT

📽️ Watch | Railing Collapses As 1,800 Aspirants Turn Up For 10 Jobs In Gujarat https://t.co/Vy4eJUjq2b pic.twitter.com/87fdRurayS

— NDTV (@ndtv) July 11, 2024

ಈ ಸಂದರ್ಭದಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದ ಅಭ್ಯರ್ಥಿಗಳ ನಡುವೆ ನೂಕುನುಗ್ಗಲು ಉಂಟಾಗಿ, ಮೆಟ್ಟಿಲಿನ ರೇಲಿಂಗ್ ಕಳಚಿ ಬಿದ್ದಿದೆ. ಆಗ ಕೆಲ ಅಭ್ಯರ್ಥಿಗಳು ಮೆಟ್ಟಿಲಿನ ಮೇಲಿಂದ ಕೆಳಕ್ಕೆ ಬಿದ್ದಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.ಈ ಘಟನೆಯ ವಿರುದ್ಧ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷವಾದ ಕಾಂಗ್ರೆಸ್, ಈ ಘಟನೆಯು ದೇಶದಲ್ಲಿ ಏರಿಕೆಯಾಗುತ್ತಿರುವ ನಿರುದ್ಯೋಗಕ್ಕೆ ಪುರಾವೆಯಾಗಿದ್ದು, ಭಾರಿ ಪ್ರಚಾರ ಪಡೆದ ಗುಜರಾತ್ ಮಾದರಿಯ ವೈಫಲ್ಯಕ್ಕೆ ನಿದರ್ಶನವಾಗಿದೆ ಎಂದು ಟೀಕಿಸಿದೆ.ಆದರೆ, ಈ ಘಟನೆಗೆ ಸಂದರ್ಶನ ಏರ್ಪಡಿಸಿದ್ದ ಖಾಸಗಿ ಕಂಪನಿಯ ವೈಫಲ್ಯವೇ ಕಾರಣ ಎಂದು ಆಡಳಿತಾರೂಢ ಬಿಜೆಪಿಯ ಭರೂಚ್ ಲೋಕಸಭಾ ಕ್ಷೇತ್ರದ ಸಂಸದ ಮನ್ಷುಕ್ ವಾಸವ ಪ್ರತಿ ಆರೋಪ ಮಾಡಿದ್ದಾರೆ.

Tags: Education and Employment
Previous Post

ಪ್ರೊಬೇಷನರಿ ಐಎಎಸ್‌ ಅಧಿಕಾರಿ ವಿರುದ್ದ ಆರೋಪ ತನಿಖೆಗೆ ಸಮಿತಿ ರಚಿಸಿದ ಕೇಂದ್ರ ಸರ್ಕಾರ

Next Post

ಕಲಬುರಗಿ |ಬಿಬಿಎಂಪಿ ಸಹಾಯಕ ಆಯುಕ್ತರ ಮನೆಯಲ್ಲಿ ಹುಲಿ ಉಗುರು, ಕ್ಯಾಸಿನೋ ಕಾಯಿನ್ ಪತ್ತೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಕಲಬುರಗಿ |ಬಿಬಿಎಂಪಿ ಸಹಾಯಕ ಆಯುಕ್ತರ ಮನೆಯಲ್ಲಿ ಹುಲಿ ಉಗುರು, ಕ್ಯಾಸಿನೋ ಕಾಯಿನ್ ಪತ್ತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!