ನವದೆಹಲಿ:ಏ.೦೩: ಪ್ರಧಾನಿ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳಿರುವುದನ್ನ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನ್ಯಾಯಾಂಗದ ಮೇಲೆ “ಅನಾವಶ್ಯಕ ಒತ್ತಡ” ಹೇರಲು ಪ್ರಯತ್ನಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಆಡಳಿತವಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಇತರ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷದ ನಾಯಕರು ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಅವರೊಂದಿಗೆ ಆಗಮಿಸಿದ್ದಾರೆ. ಸೋಮವಾರ (ಇಂದು) ಸೆಷನ್ಸ್ ಕೋರ್ಟ್ ಈ ವಿಷಯವನ್ನು ವಿಚಾರಣೆ ನಡೆಯುತ್ತಿದೆ ಎಂದು ಗಾಂಧಿ ಪರ ವಕೀಲರು ತಿಳಿಸಿದ್ದಾರೆ.