ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್ನ ರಾಣಿಪ್ ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಗುಜರಾತ್‌ನ 14 ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ. 93 ವಿಧಾನಸಭಾ ಕ್ಷೇತ್ರಗಳಲ್ಲಿ ಅಹಮದಾಬಾದ್, ವಡೋದರಾ, ಗಾಂಧಿನಗರ ಮುಖ್ಯವಾದವುಗಳಾಗಿವೆ. 2ನೇ ಹಂತದ ಮತದಾನದಲ್ಲಿ ಬಿಜೆಪಿ , ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಸೇರಿದಂತೆ 61 ರಾಜಕೀಯ ಪಕ್ಷಗಳಿಂದ 833 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖ ನಾಯಕರು ತಮ್ಮ ಮತ ಚಲಾಯಿಸಿದರು .

ಬಿಜೆಪಿ ಮತ್ತು ಆಮ್ ಆದ್ಮಿ ಪಾರ್ಟಿ ಎಲ್ಲಾ 93 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ 90 ಸ್ಥಾನಗಳಲ್ಲಿ ಮತ್ತು ಅದರ ಮೈತ್ರಿ ಪಕ್ಷವಾದ ಎನ್‌ಸಿಪಿ 2 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇತರ ಪಕ್ಷಗಳ ಪೈಕಿ, ಭಾರತೀಯ ಬುಡಕಟ್ಟು ಪಕ್ಷ 12 ಅಭ್ಯರ್ಥಿಗಳನ್ನು ಮತ್ತು ಬಹುಜನ ಸಮಾಜ ಪಕ್ಷ 44 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ನಾಮನಿರ್ದೇಶಿತರಲ್ಲಿ 285 ಸ್ವತಂತ್ರ ಅಭ್ಯರ್ಥಿಗಳೂ ಇದ್ದಾರೆ. 1.29 ಕೋಟಿ ಪುರುಷರು ಮತ್ತು 1.22 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 2.51 ಕೋಟಿ ಮತದಾರರು ಇಂದು ನಡೆಯುವ ಚುನಾವಣೆಗೆ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ.ಚುನಾವಣಾ ಆಯೋಗ 14,975 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಇದಕ್ಕಾಗಿ 1.13 ಲಕ್ಷ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 18ರಿಂದ 19 ವರ್ಷದೊಳಗಿನ 5.96 ಲಕ್ಷ ಮತದಾರರಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು , ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
https://twitter.com/narendramodi/status/1599620347053375488?cxt=HHwWgIDUmeCO_7IsAAAA