ಗುಜರಾತ್‌ನ (Gujarat) ರಾಜ್ ಕೋಟ್‌ನಲ್ಲಿನ ಗೇಮ್ ರೋನ್ (Game zone) ದುರಂತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ ಆಗಿದೆ. ಕರ್ನಾಟಕದಲ್ಲಿ (Karnataka) ಇಂಥ ಘಟನೆಗಳು ಯಾವುದೇ ಕಾರಣಕ್ಕೂ ಆಗದಂತೆ ಮುನ್ನೆಚ್ಚರಿಕಾ ಕ್ರಮಕ್ಕೆ ಮುಂದಾಗಿದೆ.

ಈ ಸಂಬಂಧ ಬಿಬಿಎಂಪಿ (BBMP) ಆಯುಕ್ತರಿಗೆ ಪತ್ರ ಬರೆದಿರೋ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar), ರಾಜಧಾನಿಯಲ್ಲಿರೋ ಮನರಂಜನಾ ಕೇಂದ್ರಗಳಲ್ಲಿ ಮುನ್ನಚ್ಚರಿಕೆ ಪರಿಶೀಲಿಸಿ ಅಂತಾ ಸೂಚನೆ ಕೊಟ್ಟಿದ್ದಾರೆ. ರಾಜ್‌ಕೋಟ್‌ನ ಮನರಂಜನಾ ಕೇಂದ್ರದಲ್ಲಿ ಸಂಭವಿಸಿರುವ ಅಗ್ನಿ ಅವಘಡ ಅತ್ಯಂತ ಕಳವಳಕಾರಿಯಾಗಿದೆ ಅಂತಾ ಡಿಸಿಎಂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ದುರಂತ ಎಚ್ಚರಿಕೆ ಗಂಟೆಯಾಗಿದ್ದು, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಕೇಂದ್ರಗಳಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಗುಜರಾತ್‌ನಂತಹ ಯಾವುದೇ ದುರ್ಘಟನೆ ನಡೆಯಬಾರದು ಅಂತಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.