'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸೂರತ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿrahul gandhi) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಗುಜರಾತ್ ಹೈಕೋರ್ಟ್ ಇಂದು ಆರಂಭಿಸಿದೆ. ಸೆಷನ್ಸ್ ನ್ಯಾಯಾಲಯದ ಏಪ್ರಿಲ್ 20 ರ ಆದೇಶವನ್ನು ಪ್ರಶ್ನಿಸಿ, ರಾಹುಲ್ ಗಾಂಧಿ ಸಲ್ಲಿಸಿದ್ದ ಕ್ರಿಮಿನಲ್ ಪರಿಷ್ಕರಣೆ ಅರ್ಜಿಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಪ್ರಚ್ಚಕ್(hemanth prachhak) ಕೈಗೆತ್ತಿಕೊಂಡಿದ್ದಾರೆ. ಹೈಕೋರ್ಟ್(high court) ಅವರ ಮನವಿಯನ್ನು ಅನುಮತಿಸಿದ್ರೆ, ರಾಹುಲ್ ಗಾಂಧಿಯವರ ಸಂಸತ್ತಿನ ಸದಸ್ಯರಾಗಿ ಮರುಸ್ಥಾಪನೆಗೆ ದಾರಿಯಾಗಬಹುದು. ಕಳೆದ ಬುಧವಾರ, ಹೈಕೋರ್ಟ್(high court) ನ್ಯಾಯಾಧೀಶರಾದ ನ್ಯಾಯಮೂರ್ತಿ ಗೀತಾ ಗೋಪಿ ಅವರು ಪ್ರಕರಣವನ್ನು ತುರ್ತು ವಿಚಾರಣೆಗಾಗಿ ತಮ್ಮ ಮುಂದೆ ತಂದ ನಂತರ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ. ಬಳಿಕ ಈ ವಿಷಯವನ್ನು ನ್ಯಾಯಮೂರ್ತಿ ಪ್ರಚ್ಛಕ್ ನ್ಯಾಯಾಲಯಕ್ಕೆ(court) ವಹಿಸಲಾಯಿತು.
ಕೇಂದ್ರ ಹಣಕಾಸು ಸಚಿವರು ಅಸಹಾಯಕತೆ ವ್ಯಕ್ತಪಡಿಸಿದರೆ ಹೇಗೆ? ಸಿಎಂ ಪ್ರಶ್ನೆ
ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ, ನವೆಂಬರ್ 21: ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ...
Read moreDetails