2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಶಕಗಳ ನಂತರ ಪ್ರಧಾನಮಂತ್ರಿ ಮೋದಿ ವಿರುದ್ಧದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ವಿಶೇಷ ತನಿಖಾ ತಂಡವು (SIT) ಗುಜರಾತ್ ರಾಜ್ಯದ ಅಂದಿನ ಸಿಎಂ ಆಗಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 62 ಜನರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಕಿಯಾ ಝಫ್ರಿ ಅರ್ಜಿ ವಿಚಾರಣೆ ನಡೆಸಿದ ಅಹಮದಾಬಾದ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಬಿ. ಜೆ. ಗನತ್ರ ತೀರ್ಪುನೀಡಿದ್ದರು. ಗುಜರಾತ್ ಗಲಭೆ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಮೋದಿ ಸೇರಿದಂತೆ ಪ್ರಕರಣದ 57 ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿ, ವರದಿ ನೀಡಿತ್ತು.