ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಭಾರೀ ದೊಡ್ಡ ಸಂಚಲನವೇ ಸಂಭವಿಸಿದೆ. ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಬಹುದು ಎಂಬ ಊಹಾಪೋಹಗಳ ನಡುವೆಯೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಂಗಕ್ಕೆ ವಿದಾಯ ಘೋಷಿಸಿದ್ದಾರೆ.

ಕೆ.ಎಸ್ ಈಶ್ವರಪ್ಪ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದು ತಮ್ಮ ರಾಜಕೀಯ ಜೀವನದ ಮುಂದಿನ ನಡೆದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ.
ಇನ್ನು ಈ ಎಲ್ಲಾ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದ್ರೆ ಈ ಬಾರಿ ಬಿಜೆಪಿ ರಾಜ್ಯದಲ್ಲಿ ಗುಜರಾತ್ ಹಾಗೂ ಉತ್ತರ ಪ್ರದೇಶ ಮಾದರಿಯಲ್ಲಿಯೇ ಟಿಕೆಟ್ ಹಂಚಿಕೆ ಮಾಡೋದು ಪಕ್ಕಾ ಆಗಿದೆ. ಹೀಗಾಗಿ ಈ ಬಾರಿ ವಸತಿ ಸಚಿವ ವಿ.ಸೋಮಣ್ಣಗೂ ಟಿಕೆಟ್ ಸಿಗೋದು ಡೌಟ್ ಎನ್ನಲಾಗ್ತಿದೆ. ಹೀಗಾಗಿ ಬಿಜೆಪಿ ಹಿರಿಯ ನಾಯಕರೆಲ್ಲರಿಗೂ ಈಗ ಢವ ಢವ ಶುರುವಾಗಿದೆ.