ಹಿರಿಯ ರಾಜಕಾರಣಿ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸೇರ್ಪಡೆ ಕುರಿತ ವದಂತಿ ಕುರಿತು ಪ್ರತಿಕ್ರಿಯಿಸಿದ ಆಜಾದ್, ಬಿಜೆಪಿಯವರನ್ನು ನನ್ನನ್ನು ಸಂಪರ್ಕಿಸಿಲ್ಲ. ನಾನು ಆ ಪಕ್ಷವನ್ನು ಸೇರುವುದಿಲ್ಲ. ನನ್ನದೇ ಆದ ಪಕ್ಷವನ್ನು ಸ್ಥಾಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವನೆ ಘೋಷಣೆ ಹೊಸ್ತಿಲಲ್ಲಿ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಗುಲಾಮ್ ನಬಿ ಆಜಾದ್ ಹೇಳಿಕೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಪ್ರಮುಖ ಹುದ್ದೆಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಅಜಾದ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಎಂಟು ವರ್ಷಗಳಲ್ಲಿ ಪಕ್ಷದ ಚುಕ್ಕಾಣಿಯನ್ನು ಮಕ್ಕಳಂತೆ ಆಡುವ ಗಂಭೀರ ಸ್ವಭಾವವಿಲ್ಲದ ವ್ಯಕ್ತಿಗೆ ನೀಡಲು ಯತ್ನಿಸಲಾಗಿತ್ತು. ಪಕ್ಷಕ್ಕೋಸ್ಕರ ಎಲ್ಲವನ್ನ ಮುಡಿಪಾಗಿಟ್ಟ ಪ್ರಮುಖ ನಾಯಕರಿಗೆ ಕಡೆಗಣಿಸಿದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಇಂದಿನ ದಿನ ಇಂತಹ ಪರಿಸ್ಥಿತಿ ಎದುರಾಗಿರುವುದು ಎಂದು ಕಿಡಿಕಾರಿದ್ದಾರೆ.