• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in ಕರ್ನಾಟಕ
0
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
Share on WhatsAppShare on FacebookShare on Telegram

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು, ಸುಮಾರು ಆರು ಸುತ್ತು ಗುಂಡು ಹಾರಿಸಿರುವ ಘಟನೆ ನಡೆದಿದೆ. ಇದೇ ವೇಳೆ, ಕಲ್ಲು ಎತ್ತಿಹಾಕಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ADVERTISEMENT

 

ತಾಂಗರುನ ದೊಡ್ಡಿ ನಿವಾಸಿ ರಾಜು ಎಂಬಾತನನ್ನು ಕಲ್ಲಿನಿಂದ ಹೊಡೆದು ಕೊಲೆ ಮಾಡಲಾಗಿದೆ. ಘಟನೆ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ಮತ್ತು ಹತ್ಯೆ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.ಇದನ್ನೂ ಮೀರಿಸಿ, ಮತ್ತೊಂದು ಆಘಾತಕಾರಿ ಪ್ರಕರಣ ಮಹಾರಾಷ್ಟ್ರ-ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

 

ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಎಂಬಾತ ತನ್ನ ಆರು ವರ್ಷದ ಮಗ ಸಿದ್ಧಾರ್ಥ್‌ನನ್ನು ಕೃಷ್ಣಾ ನದಿಗೆ ಎಸೆದು ಕೊಲೆ ಮಾಡಿದ ಘಟನೆ ಬಹಿರಂಗವಾಗಿದೆ.ಮಗು ತನ್ನ ಹೋಲಿಕೆಯಲ್ಲಿಲ್ಲ ಎಂಬ ಅನುಮಾನದಿಂದ ಕಳೆದ ಒಂದೂವರೆ ವರ್ಷಗಳಿಂದ ದಂಪತಿ ನಡುವೆ ಜಗಳ ನಡೆಯುತ್ತಿತ್ತು. ಇದೇ ಅನುಮಾನ ಕೊನೆಗೆ ಕ್ರೂರ ಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 16 ರಂದು ಮಗನನ್ನು ಶಾಲೆಗೆ ಸೇರಿಸುವ ನೆಪದಲ್ಲಿ ಹೊರಗೆ ಕರೆದುಕೊಂಡು ಹೋಗಿದ್ದ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಬಳಿ ಕೃಷ್ಣಾ ನದಿಗೆ ಮಗುವನ್ನು ತಳ್ಳಿದ್ದಾನೆ.

 

ಮಾರ್ಚ್ 18 ರಂದು ನದಿಯಲ್ಲಿ ಮಗುವಿನ ಶವ ಪತ್ತೆಯಾಗಿದ್ದರೂ, ಆರೋಪಿಯು ಮಗನನ್ನು ಹಾಸ್ಟೆಲ್‌ಗೆ ಸೇರಿಸಿದ್ದೇನೆ ಎಂದು ಕುಟುಂಬದವರನ್ನು ತಪ್ಪು ದಾರಿಗೆಳೆದುಕೊಂಡಿದ್ದ. ಬಳಿಕ ಏಪ್ರಿಲ್ 1 ರಂದು ಮಗನ ಹುಟ್ಟುಹಬ್ಬದಂದು ಅನುಮಾನಗೊಂಡ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ವೇಳೆ ಮೊಬೈಲ್ ಲೊಕೇಶನ್ ಆಧಾರವಾಗಿ ಸತ್ಯ ಹೊರಬಂದಿದೆ.ಪೊಲೀಸರ ವಿಚಾರಣೆಯಲ್ಲಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಇದೀಗ ಬಂಧನದಲ್ಲಿದ್ದಾನೆ. ಈ ಘಟನೆ ನಾಗಠಾಣೆ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ. ಜಿಲ್ಲೆಯಲ್ಲಿನ ಈ ಸರಣಿ ಅಪರಾಧ ಘಟನೆಗಳು ಸಾರ್ವಜನಿಕರಲ್ಲಿ ಆತಂಕ ಹೆಚ್ಚಿಸಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

Tags: Breaking NewsChild murderGun FireKarnataka CrimeMaharashtra BorderMurder Casepolice investigationpratidavaniVijayapura Crime
Previous Post

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

Next Post

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada