ನಾಡಹಬ್ಬ ದಸರಾ (Dasara 2025) ಸಿದ್ಧತೆಗಳು ಆರಂಭವಾಗಿದ್ದು, ಈಗಾಗಲೇ ಈ ಬಾರಿಯ ದಸರಾ ಆಚರಣೆಗೆ ಪೂರಕವಾದ ಕಾರ್ಯಗಳು ಆರಂಭವಾಗಿದೆ . ಹಲವು ವಿವಾದಗಳ ನಡುವೆಯೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ (Banu mushtaq) ಅವರನ್ನು ದರಸ ಉದ್ಘಾಟಕಿಯಾಗಿ ಅಧಿಕೃತವಾಗಿ ಆಯ್ಕೆ ಮಾಡಲಾಗಿದ್ದು, ಮೊನ್ನೆಯಷ್ಟೇ ಮೈಸೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಸನಕ್ಕೆ ತೆರಳಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಈ ಬೆನ್ನಲ್ಲೇ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಮೈಸೂರು ಜಿಲ್ಲಾಡಳಿತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನ ನೀಡಿದೆ.

ಈ ಬಾರಿಯ ದಸರಾ ಆಚರಣೆ ರಾಜಕೀಯ ಜಟಾಪಟಿಗೆ ಕಾರಣವಾಗಿದ್ದು, ಬಾನು ಮುಷ್ತಾಕ್ ಆಯ್ಕೆ ತೀವ್ರ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಇದ್ಯಾವುದಕ್ಕೂ ಜಗ್ಗದ ಸರ್ಕಾರ ಅತಿಥಿಗಳಿಗೆ ಅಧಿಕೃತ ಆಹ್ವಾನ ನೀಡುವ ಪ್ರಕ್ರಿಯೆ ಮುಂದುವರೆಸಿದೆ.












