• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎಚ್.ಡಿ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ರಾಮನಗರ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್ ಕಾರ್ಯಕರ್ತರ ಹೈಡ್ರಾಮ

ಪ್ರತಿಧ್ವನಿ by ಪ್ರತಿಧ್ವನಿ
March 2, 2023
in ಕರ್ನಾಟಕ, ರಾಜಕೀಯ
0
ಎಚ್.ಡಿ. ಕುಮಾರಸ್ವಾಮಿ ಅನುಪಸ್ಥಿತಿಯಲ್ಲಿ ರಾಮನಗರ ಆಸ್ಪತ್ರೆ ಉದ್ಘಾಟನೆ: ಜೆಡಿಎಸ್ ಕಾರ್ಯಕರ್ತರ ಹೈಡ್ರಾಮ
Share on WhatsAppShare on FacebookShare on Telegram

ರಾಮನಗರ: ರಾಮನಗರ ನೂತನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಅನುಪಸ್ಥಿತಿಯಲ್ಲಿ ಉದ್ಘಾಟನೆ ಮಾಡಿದಕ್ಕೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಆಸ್ಪತ್ರೆ ಮುಂದೆಯೇ ಧಿಕ್ಕಾರ ಕೂಗಿ, ತಳ್ಳಾಟ ನಡೆಸಿ ಹೈಡ್ರಾಮ ಸೃಷ್ಠಿಸಿದರು.

ADVERTISEMENT

ಕಾರ್ಯಕ್ರಮಕ್ಕೆ ಬೆಳಗ್ಗೆ 11.12 ರ ಸುಮಾರಿಗೆ  ಟೇಪು ಕತ್ತರಿಸಲು ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಗಮಿಸುತ್ತಿದಂತೆ ಜೆಡಿಎಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಸ್ಥಳೀಯ ಶಾಸಕಿ ಅನಿತಾಕುಮಾರಸ್ವಾಮಿ, ಎಚ್.ಡಿ.ಕುಮಾರಸ್ವಾಮಿ ಅವರು ಬರುವವರೆಗು ಕಾಯಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಪಟ್ಟು ಹಿಡಿದರು.

ವಿರೋಧದ ನಡುವೆಯು ಸಚಿವರು ಆಸ್ಪತ್ರೆಯ ಉದ್ಘಾಟನೆಯ ಟೇಪು ಕತ್ತರಿಸಿದರು. ಇತ್ತ ಜೆಡಿಎಸ್ ಕಾರ್ಯಕರ್ತರು ಸಚಿವರ ನಡೆಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕಿ ಅನಿತಾ ಕುಮಾರಸ್ವಾಮಿ, ಮಾಜಿ ಸಿಎಂ ಕುಮಾರಸ್ವಾಮಿ ಬರುವವರೆಗು ಜೆಡಿಎಸ್ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಧಿಕ್ಕಾರ ಕೂಗಿದರು.

ಕಾರ್ಯಕರ್ತರು, ಪೊಲೀಸರ ನಡುವೆ ಮಾತಿನ ಚಕಮಕಿ

ಸಂಸದ ಡಿ.ಕೆ.ಸುರೇಶ್ ಆಗಮಿಸುತ್ತಿದ್ದಂತೆ ಅವರ ಹಿಂದೆ ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಲು ಪ್ರಯತ್ನಿಸಿದರು. ಆದರೆ, ಪೊಲೀಸರು ತಡೆಹೊಡ್ಡಿದರು. ಹೀಗಿದ್ದರೂ, ಒಂದಷ್ಟು ಕಾರ್ಯಕರ್ತರು ಆಸ್ಪತ್ರೆ ಪ್ರವೇಶಿಸಿದರು. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು.

ನಾವೇ ಉದ್ಘಾಟನೆಗೆ ಸೂಚಿಸಿದ್ದೆವು

ಘಟನೆ ಬಳಿಕ ಸ್ಥಳಕ್ಕೆ ಬಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಯಲ್ಲಿ ಒಂದು ಸುತ್ತು ಹಾಕಿದರು. ಆನಂತರ ವೇದಿಕೆ ಮುಂಭಾಗ ಕುಳಿತುಕೊಂಡರು. ಈ ವೇಳೆ ಕುಮಾರಸ್ವಾಮಿ ಮಾತನಾಡಿ, ನಾವು ಬರುವುದು ತಡವಾಗುತ್ತದೆ. ಹೀಗಾಗಿ ಉದ್ಘಾಟನೆ ನಡೆಸಿ ಎಂದು ಹೇಳಿದ್ದೆವು. ಆದರೆ, ನಮ್ಮ ಕಾರ್ಯಕರ್ತರಿಗೆ ಈ ವಿಚಾರ ತಿಳಿದಿರಲಿಲ್ಲ ಎಂದರು.

Tags: ashwath narayansudhakarಎಚ್ ಡಿ ಕುಮಾರಸ್ವಾಮಿಬಿಜೆಪಿ
Previous Post

ಯಡಿಯೂರಪ್ಪ ಇಟ್ಟಿರುವ ಬಾಂಬ್​ ಬಿದ್ದರೆ ಬಿಜೆಪಿಯೇ ಸುಟ್ಟು ಭಸ್ಮ..! ಈ ಮಾತು ನಿಶ್ಚಿತ..

Next Post

ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

ಸಕ್ಕರೆ ನಾಡಲ್ಲಿ ಕೈ ಆಪರೇಷನ್..!: ಕೇಸರಿ ಪಡೆಗೆ ಕೈ ಕೊಟ್ಟು ಕಾಂಗ್ರೆಸ್ ಸೇರ್ತಾರಾ KCN..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada