ಮಾಜಿ ಸಿಎಂ ಕುಮಾರಸ್ವಾಮಿ ದಾರಿತಪ್ಪಿದ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗ್ತಿದೆ. ಇದು ಕಾಂಗ್ರೆಸ್ಗೆ ಮತ್ತೊಂದು ಅಸ್ತ್ರ ಸಿಕ್ಕಂತಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಹೇಳಿಕೆಯನ್ನ ರಾಜ್ಯದ ತಾಯಂದಿರು ಖಂಡಿಸಬೇಕು. ಪ್ರತೀ ಮಹಿಳೆ ಹೋರಾಟಕ್ಕೆ ಧುಮುಕಬೇಕು ಅಂತ ಕರೆ ನೀಡಿದ್ದಾರೆ.

ಆದರೆ ಡಿಕೆ ಶಿವಕುಮಾರ್ ಹೇಳಿಕೆಯಿಂದ ನೋವಾಯ್ತು ಎಂದಿದ್ದಕ್ಕೆ ಕೌಂಟರ್ ಕೊಟ್ಟಿರುವ ಕುಮಾರಸ್ವಾಮಿ, ದಾರಿ ತಪ್ಪಿದ ಹೇಳಿಕೆಗೆ ವಿಷಾಧ ವ್ಯಕ್ತಪಡಿಸಿದ್ದಾರೆ. ಆದರೆ ನೀನು ಅಳಬೇಡಪ್ಪ ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟಿದ್ದಾರೆ. ಹೆಣ್ಮಕ್ಕಳ ದಾರಿ ತಪ್ಪಿದ ಹೇಳಿಕೆಗೆ H.D ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲು ಮಾಡಿಕೊಂಡು ಮಹಿಳೆಯರ ಘನತೆಗೆ ಧಕ್ಕೆ ತಂದ ಆರೋಪದಲ್ಲಿ ನೋಟಿಸ್ ನೀಡಿದೆ.
ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ಚಾಮಿ ಕಿಡಿಕಾರಿದ್ದಾರೆ. ತಪ್ಪಾಯ್ತು ಅಂತ ಕೇಳಿದ್ರೆ ಅದನ್ನ ಒಪ್ಪೋದಕ್ಕೆ ಆಗುತ್ತಾ..? ದಾರಿತಪ್ಪಿದ್ದಾರೆ ಅಂದ್ರೆ ನೂರಾರು ಅರ್ಥ ಇದೆ. ಜನರಿಗೆ ನೋವಾಗಿದೆ.. ಅದರ ಪ್ರತಿಫಲ ಚುನಾವಣೆಯಲ್ಲಿ ಗೊತ್ತಾಗುತ್ತೆ ಎಂದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ ದಾರಿ ತಪ್ಪಿದ ಹೇಳಿಕೆ ವಿರುದ್ಧ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಕೊಪ್ಪಳದ ಅಶೋಕ ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದು, ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ರಾಮನಗರದಲ್ಲೂ ಸ್ವಾಭಿಮಾನಿ ಮಹಿಳಾ ವೇದಿಕೆಯ ಕಾರ್ಯಕರ್ತರು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರೊಟೆಸ್ಟ್ ಮಾಡಲಾಗಿದೆ. ದಾರಿ ತಪ್ಪಿದ ಕುಮಾರಸ್ವಾಮಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ ಕಾರ್ಯಕರ್ತರು, ಮಹಿಳೆಯರೇ ಬಿಜೆಪಿ- ಜೆಡಿಎಸ್ ದುರಹಂಕಾರಕ್ಕೆ ತಕ್ಕ ಪಾಠ ಕಲಿಸಿ ಎಂದು ಪೋಸ್ಟರ್ ಪ್ರದರ್ಶನ ಮಾಡಿದ್ದಾರೆ. ವ್ಯಕ್ತಿಯೊಬ್ಬರಿಗೆ ಕುಮಾರಸ್ವಾಮಿ ಮುಖವಾಡ ಧರಿಸಿ ಪೂರಕೆಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ರು