• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ

ಪ್ರತಿಧ್ವನಿ by ಪ್ರತಿಧ್ವನಿ
July 14, 2026
in Top Story, ಕರ್ನಾಟಕ, ರಾಜಕೀಯ
0
ನದಿ ಜೋಡಣೆ ಅಂದ್ರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸಿದ ಹಾಗಲ್ಲ: ಸಿಎಂಗೆ ಹೆಚ್‌ಡಿಕೆ ತರಾಟೆ
Share on WhatsAppShare on FacebookShare on Telegram

ಬೆಂಗಳೂರು: ಪ್ರಗತಿ ಪರಿಶೀಲನೆ ನೆಪದಲ್ಲಿ ರಾಜ್ಯದ ಉದ್ದಗಲಕ್ಕೂ ಜಾಲಿ ಟ್ರಿಪ್ ಮಾಡುತ್ತಿರುವ ಮುಖ್ಯಮಂತ್ರಿಗಳು, ರಾಜ್ಯದ ನೀರಾವರಿ ಹಿತಾಸಕ್ತಿಯ ಬಗ್ಗೆ ಅತ್ಯಂತ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗುಡುಗಿದ್ದಾರೆ.

ADVERTISEMENT
DK Shivakumar : KPSC ಅಧ್ಯಕ್ಷರ ಅಮಾನತುಗೊಳಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ ಸರ್? #pratidhvani

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕಲಬುರ್ಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಅವರ ನಡೆಸಿದ ಪ್ರಗತಿ ಪರಿಶೀಲನೆ ಕೇವಲ ಜಾಲಿಟ್ರಿಪ್ ಮಾತ್ರ. ಹಾಗೆಯೇ ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಮುಖ್ಯಮಂತ್ರಿ ವರ್ತನೆ ಅತ್ಯಂತ ಹೊಣೆಗೇಡಿತನದಿಂದ ಕೂಡಿದೆ. ರಾಜ್ಯದ ನೀರಾವರಿಯ ಸಂಕಷ್ಟಗಳ ಬಗ್ಗೆ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ. ನದಿ ಜೋಡಣೆ ಬಗ್ಗೆ ನನ್ನ ವಿರೋಧ ಇಲ್ಲ. ಯೋಜನೆ ಜಾರಿಗೆ ಬರಲೇಬೇಕು. ಆದರೆ ಗೋದಾವರಿ ಮತ್ತು ಕಾವೇರಿ ನದಿಗಳ ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರು ಎಷ್ಟು? ಎಂಬುದನ್ನು ತಿಳಿದುಕೊಂಡು ಯೋಜನೆಯ ಬಗ್ಗೆ ಚರ್ಚಿಸಬೇಕು. ದೇವೇಗೌಡರು ಹೋರಾಟ ಮಾಡಿದ ನಂತರ ಹಂಚಿಕೆಯಾದ ನೀರಿನ ಪ್ರಮಾಣ ಎಷ್ಟು ಎಂಬುದರ ಬಗ್ಗೆ ಮುಖ್ಯಮಂತ್ರಿಗಳಿಗೆ ಕನಿಷ್ಠ ಮಾಹಿತಿ ಇಲ್ಲ ಎಂದು ಕಿಡಿಕಾರಿದರು.

ನದಿ ಜೋಡಣೆ ಎಂದರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುವ ಹಾಗೆ ಅಲ್ಲ ಎಂದು ಮುಖ್ಯಮಂತ್ರಿಗೆ ತೆಗೆದುಕೊಂಡ ಕೇಂದ್ರ ಸಚಿವರು, ನಿಮಗೆ ಮಾಹಿತಿ ಇಲ್ಲದಿದ್ದರೆ ನೀರಾವರಿ ತಜ್ಞರು ಅಥವಾ ಇಲಾಖೆಯ ಎಂಜಿನಿಯರ್ ಗಳಿಂದ ಅಥವಾ ರಾಜ್ಯದ ಪರ ವಕಾಲತ್ತು ವಹಿಸುವ ವಕೀಲರ ಬಳಿ ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಇಲ್ಲದೆ ಮಾಧ್ಯಮಗಳಿಗೆ ಹೇಳಿಕೆ ನೀಡಿ ನಗೆಪಾಟಲಿಗೆ ತುತ್ತಾಗಿದ್ದೀರಿ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರು ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆ ಬಗ್ಗೆ ತೀರ್ಮಾನ ಮಾಡಲಾಗಿದೆ ಹಾಗೂ ಅದಕ್ಕೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಬಗ್ಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

Bidadi Township : ಪೊಲೀಸರು ಲಾಠಿ ಜಾರ್ಜ್ ಮಾಡ್ಲಿ ಅಂತ ಅಧಿಕಾರಿಗಳು ಗಲಾಟೆ ಮಾಡಿದ್ದಾರೆ.! #pratidhvani

ನಮ್ಮ ಸಿಎಂಗೆ ದಾರಳತನ ಜಾಸ್ತಿ ಬಂದಿದೆ. ಹಿಂದಿನ ಮುಖ್ಯಮಂತ್ರಿ ಯಾವಾಗಲೂ ಕೇಂದ್ರದ ವಿರುದ್ಧ ದಿನವೂ ಸಂಘರ್ಷ ಮಾಡುತ್ತಿದ್ದರು. ಈಗಿನ ಮುಖ್ಯಮಂತ್ರಿ ನೋಡಿದರೆ ಕೃಷ್ಣಾ, ಕಾವೇರಿ ಗೋದಾವರಿ ನದಿ ಜೋಡಣೆಗೆ ಸಮ್ಮತಿ ಅಂತ ಹೇಳಿದ್ದಾರೆ. ವಾರದ ಹಿಂದೆ ಮೂವರು ಮುಖ್ಯಮಂತ್ರಿಗಳು ಸೇರಿ ಕ್ರೆಸ್ಟ್ ಗೇಟ್ ಗಳ ಬಟನ್ ಒತ್ತಿದರು. ಹಣ ನಮ್ಮ ರಾಜ್ಯದ್ದು. ನೀರು ಬೇರೆಯವರಿಗೆ. ತುಂಗಭದ್ರಾ ಜಲಾಶಯದಲ್ಲಿ ಹೂಳು ತೆಗೆಸಲು ನೆರೆ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿದ್ದೇನೆ ಎಂದು ನಮ್ಮ ಸಿಎಂ ಹೇಳಿಕೆ ನೀಡಿದ್ದಾರೆ. ಅದಕ್ಕೂ ಸಮ್ಮತಿ ಇದೆ ಅಂತಾರೆ. ಇದರ ಬಗ್ಗೆ ವಿರೋಧ ಪಕ್ಷಗಳ ಜೊತೆ ಚರ್ಚೆ ಮಾಡಲು ಬೇಡವೇ? ರಾಜ್ಯದ ಜನತೆಗೆ ತಿಳಿಸುವುದು ಬೇಡ? ಮುಖ್ಯಮಂತ್ರಿ ರಾಜ್ಯದಲ್ಲಿ ಕತ್ತಲೆಯಲ್ಲಿಟ್ಟಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.

ಹಿಂದೆ ಒಂದು ಬಾರಿ ಕಾಂಗ್ರೆಸ್ಸಿನವರು ವಿಧಾನಸಭೆಗೆ ಕಿವಿಯಲ್ಲಿ ಹೂವು ಇಟ್ಟುಕೊಂಡು ಬಂದರು. ಈಗ ಈ ಮುಖ್ಯಮಂತ್ರಿ ವಿರೋಧ ಪಕ್ಷಗಳಿಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಕಿವಿಯಲ್ಲಿ ಹೂವು ಇಡಲು ಹೊರಟಿದ್ದಾರೆ ಎಂದು ಟೀಕಿಸಿದರು.

DK Shivakumar: ಸಂಪುಟ ವಿಸ್ತರಣೆ ಅಂತಿದ್ದಂತೆ 3-4 ದಿನದಲ್ಲಿ ದೆಹಲಿಗೆ ಹೋಗುತ್ತೇನೆ ಎಂದ ಡಿಕೆಶಿ

ಈ ಯೋಜನೆಯಿಂದ ರಾಜ್ಯಕ್ಕೆ ಅನ್ಯಾಯ

ಕೃಷ್ಣಾ, ಕಾವೇರಿ, ಗೋದಾವರಿ ನದಿ ಜೋಡಣೆಯ ಬಗ್ಗೆ ಇದುವರೆಗೆ ಏನಾಗಿದೆ ಎಂಬುದನ್ನು ಮೊದಲು ಮುಖ್ಯಮಂತ್ರಿ ಅರಿತುಕೊಳ್ಳಬೇಕು. 2023ರಲ್ಲಿ ನಿತಿನ್ ಗಡ್ಕರಿ ಅವರು ಕೇಂದ್ರದ ಜಲಶಕ್ತಿ ಸಚಿವರಾಗಿದ್ದಾಗ 247 ಟಿಎಂಸಿ ನೀರನ್ನು ಉಪಯೋಗ ಮಾಡಬಹುದು ಎಂದು ಸಮಗ್ರ ಯೋಜನಾ ವರದಿ (DPR) ಮಾಡಲಾಗಿತ್ತು. ಇಷ್ಟು ನೀರಿನಲ್ಲಿ ಆಂಧ್ರ ಪ್ರದೇಶಕ್ಕೆ 90 ಟಿಎಂಸಿ ತೆಲಂಗಾಣ, ತಮಿಳುನಾಡಿಗೆ ತಲಾ 60 ಟಿಎಂಸಿ ಹಂಚಿಕೆ ‌ಮಾಡಲಾಗಿತ್ತು. ಇದರಲ್ಲಿ ಕರ್ನಾಟಕಕ್ಕೆ ಹನಿ ನೀರು ಕೂಡ ಹಂಚಿಕೆ ಆಗಿರಲಿಲ್ಲ. ಮಾಜಿ ಪ್ರಧಾನಿಗಳಾದ ದೇವೇಗೌಡರು ಒತ್ತಾಯಿಸಿ ಹೋರಾಟ ಮಾಡಿದ ಫಲವಾಗಿ 15 ಟಿಎಂಸಿ ನೀರು ಹಂಚಿಕೆ ಆಗಿತ್ತು. ಆ ನೀರನ್ನು ಮಲಪ್ರಭ ಮೂಲಕ ನೀಡಿ ಅದನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಬೇಕು ಎಂದು ಷರತ್ತು ವಿಧಿಸಿದ್ದರು. ವಾಸ್ತವ ಪರಿಸ್ಥಿತಿ ಹೇಗಿದ್ದಾರೆ ಕರ್ನಾಟಕ ಮೂರು ನದಿಗಳ ಜೋಡಣೆಗೆ ಸಮ್ಮತಿಸುತ್ತದೆ ಒಂದು ಲಕ್ಷ ಕೋಟಿ ವಿನಿಯೋಗ ಮಾಡಲಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಯಾವ ಆಧಾರದಲ್ಲಿ ಅವರು ಈ ಹೇಳಿಕೆಯನ್ನು ನೀಡಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಚಿವ ಕುಮಾರಸ್ವಾಮಿ ಅಗ್ರಹಪಡಿಸಿದರು.

ಇದಿಷ್ಟು ಬೇಜವಾಬ್ದಾರಿ ಹೇಳಿಕೆ ನೀಡಿದ್ದು ಮಾತ್ರವಲ್ಲದೆ, ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿರುವ ಮುಖ್ಯಮಂತ್ರಿ ಅವರು ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಯ ಯೋಜನೆಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲಿದೆ ಎಂದು ಹೇಳಿದ್ದಾರೆ. ನದಿ ಜೋಡಣೆ ಆಗಲಿ, ನಮ್ಮದೇನು ತಕರಾರು ಇಲ್ಲ. ಆದರೆ ಈ ಯೋಜನೆಯ ಮೂಲಕ ಕರ್ನಾಟಕಕ್ಕೆ ಎಷ್ಟು ನೀರು ದೊರೆಯುತ್ತದೆ ಎಂಬುದನ್ನು ಅವರು ರಾಜ್ಯಕ್ಕೆ ತಿಳಿಸಬೇಕು ಎಂದು ಎಂದು ಒತ್ತಾಯಿಸಿದರು.

Dr H N Ravindra  : ಮೋದಿ ಕಳ್ಳರನ್ನ ಕಳ್ಳ ಅಂತ ಹೇಳೇ ಇಲ್ಲಾ.! #pratidhvani #DrHNRavindra #dkshivakumar

ಈ ಬಗ್ಗೆ ಕೇಂದ್ರೀಯ ಜಲ ಆಯೋಗದ ಸಭೆ ನಡೆದಿದೆಯಾ? ರಾಷ್ಟ್ರೀಯ ಜಲ ಮಂಡಳಿಯ ಸಭೆಯಲ್ಲಿ ಚರ್ಚಿಸಿದ್ದೀರಾ? ಎಂದು ಮುಖ್ಯಮಂತ್ರಿಯನ್ನು ನೇರವಾಗಿ ಪ್ರಶ್ನಿಸಿದ ಕೇಂದ್ರ ಸಚಿವರು; ವಾಸ್ತವದಲ್ಲಿ ರಾಜ್ಯಕ್ಕೆ ಈ ಯೋಜನೆಯಲ್ಲಿ ನೀರೇ ಸಿಕ್ಕಿಲ್ಲ. ಸತ್ಯ ಹೀಗಿದ್ದರೆ ಮುಖ್ಯಮಂತ್ರಿ ಯೋಜನೆಗೆ ಸಮ್ಮತಿ ಹೇಗೆ ಕೊಡುತ್ತಾರೆ? ಯಾವ ಆಧಾರದಲ್ಲಿ ಅವರು ಕರ್ನಾಟಕದ ಸಮ್ಮತಿ ಇದೆ ಎಂದು ಹೇಳುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿ ರಾಜ್ಯದ ನೀರಾವರಿ ಹಿತಾಸಕ್ತಿ ವಿಚಾರದಲ್ಲಿ ಮಕ್ಕಳ ಆಟ ಆಡುತ್ತಿದ್ದಾರೆ. ಅಲ್ಲದೆ, ಕನ್ನಡಿಗರಿಗೆ ಹಸಿ ಸುಳ್ಳು ಹೇಳುತ್ತಿದ್ದಾರೆ.

ಈ ಮುಖ್ಯಮಂತ್ರಿಗೆ ಗೊತ್ತಿರಲಿ. ನದಿ ಜೋಡಣೆ ಮಾಡುವುದು, ನೀರು ಹಂಚಿಕೆ ಮಾಡುವುದು ಬೆಂಗಳೂರಿನಲ್ಲಿ ಕೂತು ರಿಯಲ್ ಎಸ್ಟೇಟ್ ಮಾಡಿದ ಹಾಗಲ್ಲ. ಇದು ಅತ್ಯಂತ ಸೂಕ್ಷ್ಮ ವಿಚಾರ, ಅತ್ಯಂತ ಜವಾಬ್ದಾರಿತವಾಗಿ ಹೇಳಿಕೆ ನೀಡಬೇಕು. ಈ ಮುಖ್ಯಮಂತ್ರಿಗೆ ಆ ರೀತಿಯ ಯಾವುದೇ ಜವಾಬ್ದಾರಿ, ಹೊಣೆಗಾರಿಕೆ ಗೊತ್ತಿದ್ದಂತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹರಿಹಾಯ್ದರು. ಇಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಮುನ್ನ ಮುಖ್ಯಮಂತ್ರಿಗಳು ಆತುರಪಡಬಾರದು. ಸಲಹೆ ಪಡೆಯಬೇಕು, ಸಾಧ್ಯವಾದರೆ ವಿರೋಧ ಪಕ್ಷಗಳ ಮುಖಂಡರ ಜತೆ ಚರ್ಚೆ ಮಾಡಬಹುದಿತ್ತು. ಸದ್ಯಕ್ಕೆ ರೂಪಿಸಿರುವ ಕೃಷ್ಣಾ, ಗೋದಾವರಿ. ಕಾವೇರಿ ಜೋಡಣೆ ಯೋಜನೆಯಿಂದ ಕರ್ನಾಟಕಕ್ಕೆ ಉಪಯೋಗವಿಲ್ಲ. ಈ ಬಗ್ಗೆ ಮಾತನಾಡುವ ಕೂಲಂಕಶವಾಗಿ ಮಾಹಿತಿ ಪಡೆದುಕೊಂಡು ಮಾತನಾಡಿ ಎಂದು ಕೇಂದ್ರ ಸಚಿವರು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.

Cabinet Expansion: ಬೆಳಗಾವಿ ಜಿಲ್ಲೆಗೆ 3 ಸಚಿವ ಸ್ಥಾನ? ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು? #pratidhvani

ನೀರಿನ ಮಿತಿ ನಿಗದಿ ಆಗದೆ ಸಮ್ಮತಿ ಕೊಡಬೇಡಿ

ಕೃಷ್ಣಾ, ಕಾವೇರಿ, ಗೋದಾವರಿ ನದಿಗಳ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಎಷ್ಟು ನೀರು ಹಂಚಿಕೆ ಆಗುತ್ತದೆ ಎಂಬುದು ನಿರ್ಧಾರ ಆಗದೆ ಈ ಯೋಜನೆಗೆ ಹೇಗೆ ಸಮ್ಮತಿ ಕೊಡುತ್ತೀರಿ ಎಂದು ಸಿಎಂಗೆ ಪ್ರಶ್ನಿಸಿದ ಕೇಂದ್ರ ಸಚಿವರು; ಒಂದು ವೇಳೆ ನೀರು ಹಂಚಿಕೆ ಪ್ರಮಾಣ ನಿಗದಿಯಾಗದೆ ಯೋಜನೆಗೆ ಒಪ್ಪಿಗೆ ಕೊಟ್ಟಿದ್ದೆ ಆದರೆ ಅದು ಕನ್ನಡಿಗರಿಗೆ ಮಾಡುವ ದೊಡ್ಡ ದ್ರೋಹ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನೀರಿನ ಹಂಚಿಕೆಯ ಬಗ್ಗೆ ರಾಜ್ಯವು ವಿವಾದಗಳನ್ನು ಎದುರಿಸುತ್ತಿದೆ. ಹಲವಾರು ಪ್ರಕರಣಗಳಲ್ಲಿ ನಾವು ಕಾನೂನು ಹೋರಾಟ ನಡೆಸುತ್ತಿದ್ದೇವೆ. ಈ ಯೋಜನೆಗೆ ಸಂಬಂಧಿಸಿ ಕಾನೂನು ಹೋರಾಟ ಮಾಡಬೇಕು. ವಿಷಯ ಗೊತ್ತಿಲ್ಲದೆ ದಯವಿಟ್ಟು ಮಾತನಾಡಬೇಡಿ. ನಿಮ್ಮದೇ ಪಕ್ಷದ ನಾಯಕ ಹೆಚ್.ಕೆ.ಪಾಟೀಲ್ ಅವರು ‘ಕೃಷ್ಣಾ ಕಣ್ಣೀರ ಕಥೆ’ ಎನ್ನುವ ಪುಸ್ತಕ ಬರೆದಿದ್ದಾರೆ. ಅವರಿಗೆ ಎಲ್ಲಾ ಮಾಹಿತಿ ಗೊತ್ತಿದೆ. ಅವರ ಸಲಹೆಯನ್ನು ಪಡೆಯಿರಿ ಎಂದರು.

Tags: BJPCM DK ShivakumarcongressDK Shivakumarhd kumarswamyKarnatakaKarnataka Politics
Previous Post

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Next Post

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

Related Posts

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?
Top Story

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

by ಪ್ರತಿಧ್ವನಿ
July 14, 2026
0

ನವದೆಹಲಿ: ಮಾಸಿಕ ₹1,100 ಪಿಂಚಣಿ ಪಡೆಯಲು ಬ್ಯಾಂಕ್‌ಗೆ ತೆರಳಿದ್ದ ವೃದ್ಧರೊಬ್ಬರ ಖಾತೆಯಲ್ಲಿ ಏಕಾಏಕಿ ಸುಮಾರು ₹760 ಕೋಟಿ ಹಣ ಕಾಣಿಸಿಕೊಂಡಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ...

Read moreDetails
Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

Ramachandregowda: ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ವಿಧಿವ*

July 14, 2026
ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

ರೈಲಿನಲ್ಲಿ ಪೂಜೆ ನಡೆಸಲು ಅವಕಾಶ ಇದೆಯೇ? ವೈರಲ್ ವಿಡಿಯೊಗೆ  ರೈಲ್ವೆ ಇಲಾಖೆ ಸ್ಪಷ್ಟನೆ ಇಲ್ಲಿ

July 14, 2026
ಸಿಜೆಐ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ಅವಾಚ್ಯ ಪದ: ಸುಪ್ರೀಂ ಕೋರ್ಟ್‌ನಲ್ಲಿ ನಡೆದದ್ದೇನು?

ಸಿಜೆಐ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ಅವಾಚ್ಯ ಪದ: ಸುಪ್ರೀಂ ಕೋರ್ಟ್‌ನಲ್ಲಿ ನಡೆದದ್ದೇನು?

July 14, 2026
ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

ಮತದಾನ–ಶಾಸನಬದ್ಧ ಹಕ್ಕು ಮಾತ್ರ ಆಗಿರಕೂಡದು

July 14, 2026
Next Post
₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

₹1,100 ಪಿಂಚಣಿ ಪಡೆಯಲು ಹೋದ ವೃದ್ಧನ ಖಾತೆಯಲ್ಲಿ ₹760 ಕೋಟಿ? ವೈರಲ್ ವಿಡಿಯೋ ಹಿಂದಿನ ಸತ್ಯವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada