• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಚೆಲುವರಾಯ ಸ್ವಾಮಿ ಸವಾಲಿಗೆ ಸೈ ಎಂದ ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 8, 2025
in ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆತ ಒಬ್ಬ ಜೋಕರ್, ಕಾಂಗ್ರೆಸ್ ನಿಂದಲೇ ಜೋಕರ್ ಸಂಸ್ಕೃತಿ ಹುಟ್ಟಿದ್ದು ಎಂದು ಕೇಂದ್ರ ಸಚಿವರ ಟಾಂಗ್

ADVERTISEMENT

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ

ಆತನ ಚಟಗಳ ಬಗ್ಗೆ ಮಂಡ್ಯದಲ್ಲಿ ಹಾದಿ ಬೀದಿಯಲ್ಲಿ ಚರ್ಚೆಯಾಗುತ್ತಿದೆ!!

ಮಂಡ್ಯ: ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಆತ ನನ್ನನ್ನು ಸಿಎಂ ಮಾಡಿದ ಎನ್ನುವುದು ಬಹುದೊಡ್ಡ ಜೋಕ್. ಶಾಸಕರು ನನ್ನನ್ನು ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಆ ವ್ಯಕ್ತಿ ಮರೆಯಬಾರದು ಎಂದು ಕುಟುಕಿದರು.

ಚೆಲುವರಾಯಸ್ವಾಮಿ ಹೇಳಿಕೆಯ ಬಗ್ಗೆ ಸುದ್ದಿಗಾರರು ಕೇಳಿದ ಪ್ರತಿಕ್ರಿಯೆಗೆ ಖಡಕ್ ಉತ್ತರ ಕೊಟ್ಟ ಕೇಂದ್ರ ಸಚಿವರು; ನನ್ನ ಜತೆ ಶಾಸಕರು ಇದ್ದರು ಎಂಬುದು ಆಗ ನನ್ನ ಜತೆಯಲ್ಲಿಯೇ ಇದ್ದ ಆ ವ್ಯಕ್ತಿಗೂ ಗೊತ್ತು. ಈತನ ಮುಖ ನೋಡಿಕೊಂಡು ಶಾಸಕರು ಬಂದರಾ? ನನ್ನ ನಂಬಿಕೆ, ವಿಶ್ವಾಸದಿಂದ ಬಂದರು. ಎಲ್ಲವೂ ಈತನಿಗೆ ಗೊತ್ತಿಲ್ಲವೇ? ಎಂದು ತಿರುಗೇಟು ಕೊಟ್ಟರು.

ಆ ವ್ಯಕ್ತಿ ನೂರಕ್ಕೆ ನೂರರಷ್ಟು ಜೋಕರ್. ಜೋಕರ್ ಸಂಸ್ಕೃತಿ ಶುರುವಾಗಿದ್ದು ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಹೀಗಾಗಿ ಆ ವ್ಯಕ್ತಿಗೆ ಉತ್ತರ ಕೊಡಬೇಕಿಲ್ಲ ಎಂದು ಸಚಿವರು ಹೆಸರು ಹೇಳದೆಯೇ ಟಾಂಗ್ ಕೊಟ್ಟರು.

ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿರುವ ಕೃಷಿ ಸಚಿವರ ಸವಾಲಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಎಂಎಲ್‌ಎಗಳು ಆ ವ್ಯಕ್ತಿಯನ್ನು ನೋಡಿ ಬಂದ್ರಾ? ಆ ವ್ಯಕ್ತಿಯನ್ನು ಮಂತ್ರಿ ಮಾಡಲು ನಾನು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಬೆಳಗಿನ ಜಾವ ಮೂರು ಗಂಟೆವರೆಗೆ ನಿದ್ರೆ ಮಾಡಲು ಬಿಡುತ್ತಿರಲಿಲ್ಲ ಆ ಆಸಾಮಿ. ಈ ವ್ಯಕ್ತಿಯ ಮುಖ ನೋಡಿ 50 ಜನ ಶಾಸಕರು ಬಂದ್ರಾ? ಅವರಿಗಾಗಿ ನಾನು ಪಟ್ಟಿರುವ ಶ್ರಮವನ್ನು ಅವರು ಮರೆಯೋದು ಬೇಡ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಆ ವ್ಯಕ್ತಿಗೆ ಇರುವ ಚಟ ನನಗೆ ಇಲ್ಲ. ಮಂಡ್ಯದಲ್ಲಿ ಆತನ ಚಟಗಳ ಬಗ್ಗೆ ಕೇಳಿದರೆ ಜನ ಹಾದಿ ಬೀದಿಯಲ್ಲಿ ಹೇಳುತ್ತಾರೆ. ಚಟಗಳ ಬಗ್ಗೆ ಚರ್ಚೆ ಮಾಡೋದು ಬೇಡ. ಅದು ಕೀಳುಮಟ್ಟದ ಅಭಿರುಚಿ. ಆತನ ಅಭಿರುಚಿ ಯಾವ ರೀತಿಯದ್ದು ಎಂದು ಮಂಡ್ಯ ಜನರಿಗೆ ಗೊತ್ತಿದೆ. ಈ ಮನುಷ್ಯ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂಬುದು ನನಗೆ ಗೊತ್ತು. ನಾನು ದುಡ್ಡು ಮಾಡಬೇಕೆಂದು ಆಸೆಪಟ್ಟಿಲ್ಲ. ನಾನು ಜನರ ಮಧ್ಯ 24 ಗಂಟೆ ಕೆಲಸ ಮಾಡಿದ್ದೇನೆ. ಜನತಾ ದರ್ಶನ, ಗ್ರಾಮ ವಾಸ್ತವ್ಯದಲ್ಲಿ ಬೆಳಗ್ಗಿನ ಜಾವದವರೆಗೆ ಕೆಲಸ ಮಾಡಿದ್ದೇನೆ. ಜನರ ಕೆಲಸ ಮಾಡುವುದೇ ನನ್ನ ವೈಯಕ್ತಿಕ ಸಮಸ್ಯೆ. ನನಗೆ ಆತನಂತೆ ಯಾವುದೇ ಚಟ ಇಲ್ಲ. ಎಲ್ಲವನ್ನೂ ದೇವರು ನೋಡುತ್ತಾನೆ ಎಂದು ಬೇಸರ ವ್ಯಕ್ತಪಡಿಸಿದರು ಕುಮಾರಸ್ವಾಮಿ ಅವರು.

ಬಹಿರಂಗ ಚರ್ಚೆಗೆ ಸವಾಲು ಕೃಷಿ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಟ್ಟ ಸಚಿವರು; ಸ್ವ ಚರಿತ್ರೆ ಬಗ್ಗೆ ಚರ್ಚೆ ಮಾಡೊದು ಪ್ರಮುಖನಾ? ಪ್ರತಿಯೊಬ್ಬ ಮನುಷ್ಯ ಇಂತಹ ಘಾತುಕ ವ್ಯಕ್ತಿಗಳ ಜತೆ ಇದ್ದಾಗ ಹಲವಾರು ಸಮಸ್ಯೆಗಳನ್ನು ಮಾಡಿಕೊಳ್ಳುತ್ತೇವೆ. ಯಾವ ಮನುಷ್ಯನೂ ಪರಿಶುದ್ಧನಲ್ಲ. ತಪ್ಪನ್ನು ಸರಿಪಡಿಸಿಕೊಳ್ಳಲು ಭಗವಂತ ಅವಕಾಶ ಕೊಡುತ್ತಾನೆ. ನಾನು ವಿಧಾನಸಭೆಯ ಕಲಾಪದಲ್ಲಿಯೇ ಹೇಳಿದ್ದೇನೆ. ನಾನು ಜೀವನದಲ್ಲಿ ಒಮ್ಮೆ ತಪ್ಪು ಮಾಡಿದ್ದೇನೆ ಎಂದು. ನಾನೆಂದೂ ಇಲ್ಲ ಎಂದು ಹೇಳಿಲ್ಲ. ಆ ವ್ಯಕ್ತಿ ಏನೇನು ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಇಂತಹ ವಿಚಾರಗಳನ್ನು ಬಿಟ್ಟು ಜನರ ಬದುಕಿನ ಬಗ್ಗೆ ಚರ್ಚೆ ಮಾಡಿ ಎಂದು ಕೇಂದ್ರ ಸಚಿವರು ಕಿವಿಮಾತು ಹೇಳಿದರು.

ಮೈತ್ರಿ ಭದ್ರವಾಗಿದೆ, ಸಮಸ್ಯೆ ಇಲ್ಲ:

ಜೆಡಿಎಸ್‌ – ಬಿಜೆಪಿ ಮೈತ್ರಿ ಭದ್ರವಾಗಿದೆ. ಯಾರಿಗೂ ಸಂಶಯ ಬೇಡ. ಜೆಡಿಎಸ್‌ – ಬಿಜೆಪಿ‌ ಮೈತ್ರಿ ಸಮನ್ವಯ ಸಮಿತಿ ರಚನೆ ಆಗಬೇಕೆಂದು ಡಿ.ವಿ.ಸದಾನಂದಗೌಡರೇ ಹೇಳಿದ್ದಾರೆ. ಹಲವಾರು ಹಿರಿಯ ನಾಯಕರೂ ಸಮನ್ವಯ ಸಮಿತಿ ಆಗಬೇಕು ಎಂದು ಸಲಹೆ ಮಾಡಿದ್ದಾರೆ. ಮೈತ್ರಿಗೆ ಯಾವುದೇ ರೀತಿಯ ಧಕ್ಕೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಿಜೆಪಿ ಜನಾಕ್ರೋಶ ಆಂದೋಲನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟ ಸಚಿವರು; ಅವರ ಪಕ್ಷ ಗಟ್ಟಿಗೊಳಿಸಲು ಹೋರಾಟ ಮಾಡುತ್ತಿದ್ದಾರೆ. ನಮ್ಮನ್ನು ಅವರು ಕರೆದಿಲ್ಲ. ಇದು ನಮ್ಮ ಪಕ್ಷದ ಕಾರ್ಯಕ್ರಮ ಎಂದು ಅವರೇ ಹೇಳಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೈತ್ರಿಯಲ್ಲಿ ಯಾವ ಬಿರುಕು‌ ಇಲ್ಲ, ಎಲ್ಲರೂ ಭದ್ರವಾಗಿ ಇದ್ದೇವೆ. ಸಂಘಟನೆ ವಿಚಾರದಲ್ಲಿ ಆಯಾ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

Tags: Cheluvarayaswamycheluvarayaswamy slams hd deve gowda familycheluvarayaswamy slams hd devegowdacheluvarayaswamy's video goes virald k shivakumar v/s sriramuludk shivakumar on b sriramuludk shivakumar on siddaramaiahdk shivakumar vs sriramuluHD Kumaraswamyhd kumaraswamy on ramesh babu resignationNikhil Kumaraswamyshivarame gowda on kumaraswamyshivarame gowda on loksabha electionshivarame gowda on nikhil kumaraswamy
Previous Post

ಪಕ್ಷ ಸಂಘಟನೆಗೆ ಒತ್ತು, ಪಕ್ಷದ ಎಲ್ಲಾ ಘಟಕಗಳ ಬಲವರ್ಧನೆ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಸಮರ್ಜಿತ್ ಲಂಕೇಶ್ ಅಭಿನಯದ “ಗೌರಿ” ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ವೀಕ್ಷಣೆ ..

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post

ಸಮರ್ಜಿತ್ ಲಂಕೇಶ್ ಅಭಿನಯದ "ಗೌರಿ" ಚಿತ್ರ ಅಮೇಜಾನ್ ಪ್ರೈಮ್ ನಲ್ಲೂ ಅಧಿಕ ವೀಕ್ಷಣೆ ..

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada